ಟಾಲಿವುಡ್ ‘ಪ್ರಿನ್ಸ್’ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್ ಕಾದಿದ್ದಾರೆ. ದೊಡ್ಡ ಗ್ಯಾಪ್ನ ನಂತರ ಮಹೇಶ್ ಬಾಬು ಅವರು ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಕಾತರ ಹೆಚ್ಚಾಗಿದೆ. ಈ ಸಿನಿಮಾಗೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನವಿದೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ‘ಗುಂಟೂರು ಖಾರಂ’ (Guntur Kaaram) ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಚಿತ್ರದ ಟ್ರೇಲರ್ ಇನ್ನೂ ರಿಲೀಸ್ ಆಗಿಲ್ಲ. ಟ್ರೇಲರ್ (Guntur Kaaram Trailer) ಬಿಡುಗಡೆ ತಡವಾಡಲು ಕಾರಣ ಏನು ಎಂಬುದು ಈಗ ಗೊತ್ತಾಗಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಶನಿವಾರ (ಜನವರಿ 6) ‘ಗುಂಟೂರು ಖಾರಂ’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಆಗಬೇಕಿತ್ತು. ಕಾರಣಾಂತರಗಳಿಂದ ಅದು ಮುಂಡೂಡಿಕೆ ಆಯಿತು. ಕೊನೇ ಪಕ್ಷ ಟ್ರೇಲರ್ ಆದರೂ ಬಿಡುಗಡೆ ಆಗಲಿ ಎಂದು ಫ್ಯಾನ್ಸ್ ಕಾದಿದ್ದರು. ಆದರೆ ಟ್ರೇಲರ್ ಸಹ ರಿಲೀಸ್ ಆಗಿಲ್ಲ. ಅದಕ್ಕೆ ಮುಖ್ಯ ಕಾರಣ ಬೇರಾರೂ ಅಲ್ಲ, ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಅವರಿಂದಲೇ ಟ್ರೇಲರ್ ರಿಲೀಸ್ ತಡವಾಗುತ್ತಿದೆ.
ವರದಿಗಳ ಪ್ರಕಾರ, ತ್ರಿವಿಕ್ರಮ್ ಶ್ರೀನಿವಾಸ್ ಅವರು ಇನ್ನೂ ಕೊನೇ ಹಂತದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಟ್ರೇಲರ್ ತುಂಬ ಚೆನ್ನಾಗಿ ಮೂಡಿಬರಬೇಕು ಎಂಬ ಕಾರಣಕ್ಕೆ ಅವರು ಕೆಲವು ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಟ್ರೇಲರ್ ಹೇಗಿರಬೇಕು ಎಂಬುದಕ್ಕೆ ಅವರು 2-3 ವರ್ಷನ್ ರೆಡಿ ಮಾಡಿಕೊಂಡಿದ್ದಾರೆ. ಟ್ರೇಲರ್ನಲ್ಲಿ ಯಾವ ಡೈಲಾಗ್ ಇರಬೇಕು, ಯಾವ ಡೈಲಾಗ್ ಇರಬಾರದು ಎಂಬುದರ ಬಗ್ಗೆ ಅವರು ಫೈನಲ್ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಟ್ರೇಲರ್ ರಿಲೀಸ್ ತಡವಾಗಿದೆ.
ಇದನ್ನೂ ಓದಿ: ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದ ಶೂಟಿಂಗ್ ವಿಡಿಯೋ ಲೀಕ್
‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆ ಶ್ರೀಲೀಲಾ, ಮೀನಾಕ್ಷಿ ಚೌಧರಿ, ರಮ್ಯಾ ಕೃಷ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಥಮನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಮಹೇಶ್ ಬಾಬು ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಈ ಸಿನಿಮಾ ಧೂಳೆಬ್ಬಿಸಲು ರೆಡಿಯಾಗಿದೆ. ಆದಷ್ಟು ಬೇಗ ಟ್ರೇಲರ್ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ