AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​
ಮಹೇಶ್​ ಬಾಬು
TV9 Web
| Edited By: |

Updated on:Dec 11, 2021 | 7:52 PM

Share

ಈ ಬಾರಿಯ ಸಂಕ್ರಾಂತಿ ಟಾಲಿವುಡ್​​ ಪಾಲಿಗೆ ವಿಶೇಷವಾಗಲಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿದ್ದು, ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹಲವು ಸ್ಟಾರ್ ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಕೊರತೆ ಎದುರಾದರೂ ಅಚ್ಚರಿ ಏನಿಲ್ಲ. ಈ ಕಾರಣಕ್ಕೆ ಅವರ  ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಮತ್ತೊಮ್ಮೆ ಚಿತ್ರದ ರಿಲೀಸ್​ ದಿನಾಂಕ ಮುಂದೂಡುವ ಸಾಧ್ಯತೆ ಗೋಚರವಾಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ. ಅವರ ದೇಹದ ಮೇಲೆ ಟ್ಯಾಟೂ ಇದೆ. ಈ ಚಿತ್ರಕ್ಕಾಗಿ ಮಹೇಶ್​ ಬಾಬು ಉದ್ದ ಕೂದಲು ಬಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳು ಗಮನ ಸೆಳೆಯುತ್ತಿವೆ. ಈ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ಮತ್ತೊಮ್ಮೆ ರಿಲೀಸ್​ ದಿನಾಂಕ ಮುಂದೂಡಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಮಹೇಶ್ ಬಾಬು ಅವರು ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಶಸ್ತ್ರ ಚಿಕಿತ್ಸೆ ನಂತರದಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳುಬೇಕು. ಅವರು ಸಂಪೂರ್ಣವಾಗಿ ಫಿಟ್ ಆದ ನಂತರವೇ ‘ಸರ್ಕಾರು ವಾರಿ ಪಾಟ’ ಚಿತ್ರದ ಬಾಕಿಯಿರುವ ಶೂಟಿಂಗ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಸಿನಿಮಾಗಾಗಿ ಮತ್ತೆ ಹಲವು ತಿಂಗಳು ಕಾಯೋದು ಅನಿವಾರ್ಯ ಆಗಲಿದೆ.

ಮೈತ್ರಿ ಮೂವಿ ಮೇಕರ್ಸ್ ​‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪರಶುರಾಮ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಹೇಶ್​ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ.  ‘ಆರ್​​ಆರ್​ಆರ್​​’ ತೆರೆಗೆ ಬಂದ ನಂತರದಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ, ಈ ಚಿತ್ರದ ಕೆಲಸಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ:  ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ 

Published On - 5:31 pm, Sat, 11 December 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್