Actor Mamukkoya Passes Away: ಮಲಯಾಳಂ ಚಿತ್ರರಂಗದ ಹಿರಿಯ ನಟ ಮಾಮುಕೋಯಾ ನಿಧನ

Malayalam Actor Mamukkoya: ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಟ ಮಾಮುಕೋಯಾ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

Actor Mamukkoya Passes Away: ಮಲಯಾಳಂ ಚಿತ್ರರಂಗದ ಹಿರಿಯ ನಟ ಮಾಮುಕೋಯಾ ನಿಧನ
ಮಾಮುಕೋಯಾ
Follow us
ಮದನ್​ ಕುಮಾರ್​
|

Updated on:Apr 26, 2023 | 3:09 PM

ಮಲಯಾಳಂ ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಹಿರಿಯ ನಟ ಮಾಮುಕೋಯಾ (Mamukkoya) ಅವರು ಕೊನೆಯುಸಿರು ಎಳೆದಿದ್ದಾರೆ. ಕೆಲವೇ ದಿನಗಳ ಹಿಂದೆ ಅವರಿಗೆ ಹೃದಯಾಘಾತ (Heart Attack) ಸಂಭವಿಸಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಂದು (ಏಪ್ರಿಲ್​ 25) ಅವರು ನಿಧನ ಹೊಂದಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು ಮಾಮುಕೋಯಾ ಅವರ ಅಗಲಿಕೆಯ (Mamukkoya Death) ಸುದ್ದಿ ಕೇಳಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಮಾಮುಕೋಯಾ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದರು. ಅವರನ್ನು ಕಳೆದುಕೊಂಡಿರುವುದು ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ನೋವುಂಟು ಮಾಡಿದೆ.

ಏಪ್ರಿಲ್​ 24ರಂದು ಮಲ್ಲಪುರಂನಲ್ಲಿ ಫುಟ್ಬಾಲ್​ ಪಂದ್ಯಾವಳಿಯನ್ನು ಉದ್ಘಾಟಿಸಲು ಮಾಮುಕೋಯಾ ಅವರು ತೆರಳಿದ್ದರು. ಆ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಕೂಡಲೇ ಅವರನ್ನು ವಂಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೋಯಿಕೋಡ್​ ನಗರಕ್ಕೆ ಶಿಫ್ಟ್​ ಮಾಡಲಾಗಿತ್ತು. ಸತತ ಎರಡು ದಿನ ಚಿಕಿತ್ಸೆ ನೀಡಿದರೂ ಕೂಡ ಅವರು ಬದುಕಿ ಉಳಿಯಲಿಲ್ಲ.

ಇದನ್ನೂ ಓದಿ: Innocent Passed Away: ಖ್ಯಾತ ಮಲಯಾಳಂ ನಟ ಇನ್ನೋಸೆಂಟ್ ಹೃದಯಾಘಾತದಿಂದ ನಿಧನ

ಮಾಮುಕೋಯಾ ಅವರು ಜನಿಸಿದ್ದು 1946ರಲ್ಲಿ. ಮೊದಲು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. 1979ರಲ್ಲಿ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಸಹಜವಾದ ಅಭಿನಯ, ವಿಶೇಷವಾದ ಡೈಲಾಗ್​ ಡೆಲಿವರಿ ಹಾಗೂ ಹಾಸ್ಯ ಪಾತ್ರಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಕಾರಣದಿಂದ ಅವರು ಜನಮೆಚ್ಚುಗೆ ಪಡೆದುಕೊಂಡರು.

ಇದನ್ನೂ ಓದಿ: Satish Kaushik: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಮಲಯಾಳಂನ 450ಕ್ಕೂ ಅಧಿಕ ಸಿನಿಮಾಗಳಲ್ಲಿ ಮಾಮುಕೋಯಾ ಅವರು ನಟಿಸಿದ್ದಾರೆ. ‘ಗಾಂಧಿನಗರ್​ ಸೆಕೆಂಡ್​ ಸ್ಟ್ರೀಟ್​’, ‘ಓಪ್ಪಂ’, ‘ಉಸ್ತಾದ್​ ಹೋಟೆಲ್​’, ‘ಸಂದೇಶಂ’, ‘ಕರೆನ್ಸಿ’, ‘ಮಿನ್ನಲ್​ ಮುರಳಿ’, ‘ಇಂಡಿಯನ್​ ರುಪಿ’ ಮುಂತಾದವು ಅವರ ನಟನೆಯ ಪ್ರಮುಖ ಸಿನಿಮಾಗಳು. ಎರಡು ಬಾರಿ ಅವರು ರಾಜ್ಯ ಪ್ರಶಸ್ತಿ ಪಡೆದಿದ್ದರು. ಮಾಮುಕೋಯಾ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಸುಲೈಖಾ ಮಂಜಿಲ್​’ ಚಿತ್ರದಲ್ಲಿ. ಇನ್ನೂ ಅನೇಕ ಪ್ರಾಜೆಕ್ಟ್​ಗಳು ಅವರ ಕೈಯಲ್ಲಿದ್ದವು. ಆದರೆ ಅವುಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:26 pm, Wed, 26 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್