AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmal Benny Death: ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿಅವರು ನಿಧನ ಹೊಂದಿದ್ದಾರೆ. ಇದು ಮಲಯಾಳಂ ಚಿತ್ರರಂಗಕ್ಕೆ ಸಖತ್ ಶಾಕಿಂಗ್ ಎನಿಸಿದೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ಅವರು ಸಣ್ಣ ವಯಸ್ಸಿನಲ್ಲಿ ನಿಧನ ಹೊಂದಿದ್ದು ಕುಟುಂಬದವರಿಗೆ ಶಾಕಿಂಗ್ ಎನಿಸಿದೆ.

Nirmal Benny Death: ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ
ನಿರ್ಮಲ್
ರಾಜೇಶ್ ದುಗ್ಗುಮನೆ
|

Updated on: Aug 23, 2024 | 2:30 PM

Share

ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ಅವರು ಇಂದು (ಆಗಸ್ಟ್ 23) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಮುಂಜಾನೆ ಅವರಿಗೆ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ. ಅವರ ನಿಧನಕ್ಕೆ ಅನೇಕರಿಗೆ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ. ಮಲಯಾಳಂನಲ್ಲಿ 12 ವರ್ಷಗಳಲ್ಲಿ ಅವರು ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

2012ರಲ್ಲಿ ನಿರ್ಮಲ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ನವಗತರ್ಕ್ ಸ್ವಾಗತಂ’ ಅವರ ನಟನೆಯ ಮೊದಲ ಸಿನಿಮಾ. ನಿರ್ಮಲ್ ಅವರು ಲಿಜೋ ಜೋಸ್ ಪೆಲ್ಲಿಸೆರಿ ನಿರ್ದೇಶನದ ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರ ಮಾಡಿದರು. ಈ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರು ಈವರೆಗೆ ಕೇವಲ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಹೇಮಾ ಸಮಿತಿ ವರದಿ

ನಿರ್ಮಲ್ ಅವರು ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಸ್ಟೇಜ್ ಕಾರ್ಯಕ್ರಮಗಳನ್ನು ಅವರು ನೀಡಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ‘ಅಮೆನ್ ಸಿನಿಮಾದಲ್ಲಿ ಕೊಚ್ಚನ್ ಹಾಗೂ ದೂರಂ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ನಿರ್ಮಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಆಯಿತು. ಗೆಳೆಯನೇ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ