AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ

ನಟ ಶೈನ್ ಟಾಮ್ ಚಾಕೊ ಅವರು ಕುಟುಂಬದವರ ಜೊತೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಈ ದುರ್ಘಟನೆಯಲ್ಲಿ ಶೈನ್ ಟಾಮ್ ಚಾಕೊ ಅವರ ತಂದೆ ಸಿ.ಪಿ. ಚಾಕೊ ನಿಧನರಾಗಿದ್ದಾರೆ. ಶೈನ್ ಟಾಮ್ ಚಾಕೊ ಹಾಗೂ ಅವರ ತಾಯಿ ಕೂಡ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ
Shine Tom Chacko Accident
ಮದನ್​ ಕುಮಾರ್​
|

Updated on:Jun 06, 2025 | 5:15 PM

Share

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ (Shine Tom Chacko) ಅವರ ಜೀವನದಲ್ಲಿ ದುರಂತ ಸಂಭವಿಸಿದೆ. ಕೆಲವೇ ದಿನಗಳ ಹಿಂದೆ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪ ಎದುರಾಗಿತ್ತು. ಈಗ ರಸ್ತೆ ಅಪಘಾತದಲ್ಲಿ (Road Accident) ಶೈನ್ ಟಾಮ್ ಚಾಕೋ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದಕ್ಕಿಂತಲೂ ನೋವಿನ ಸಂಗತಿ ಏನೆಂದರೆ, ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಅವರ ತಂದೆ (Shine Tom Chacko Father) ಸಿ.ಪಿ. ಚಾಕೊ ಸ್ಥಳದಲ್ಲೇ ಮೃತರಾಗಿದ್ದಾರೆ. ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಗೂ ಗಾಯಗಳಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಮಿಳುನಾಡಿನಲ್ಲಿ ಶುಕ್ರವಾರ (ಜೂನ್ 6) ಬೆಳಗ್ಗೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಯನ್ನು ದಾಖಲಿಸಲಾಗಿದೆ. ಮುಂಜಾನೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತು. ಶೈನ್ ಟಾಮ್ ಚಾಕೊ ಅವರು ತಮ್ಮ ಕುಟುಂಬದವರ ಜೊತೆ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಬಂದು ಗುದ್ದಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ಮಲಯಾಳಂ ನಟ ಶೈಮ್ ಟಾಮ್ ಚಾಕೊಗೆ ಕೊನೆ ಎಚ್ಚರಿಕೆ
Image
‘ನಾನು ಮಾತ್ರ ಅಲ್ಲಾರೀ’; ಸ್ಟಾರ್ ಕಲಾವಿದರ ಡ್ರಗ್ಸ್ ಪುರಾಣ ಬಿಚ್ಚಿಟ್ಟ ಶೈನ್
Image
ಡ್ರಗ್ಸ್ ಬಳಕೆ, ನಟಿಗೆ ಕಿರುಕುಳ ಖ್ಯಾತ ನಟನ ಮೇಲೆ ನಿಷೇಧ ಸಾಧ್ಯತೆ
Image
ನಟಿಗೆ ಕಿರುಕುಳ, ಡ್ರಗ್ಸ್ ಬಳಕೆ, ಪೊಲೀಸರ ದಾಳಿ ವೇಳೆ ಪರಾರಿಯಾದ ಜನಪ್ರಿಯ ನಟ

ಶೈನ್ ಟಾಮ್ ಚಾಕೊ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ, ಅಪಘಾತದಲ್ಲಿ ಜಖಂ ಆಗಿರುವ ಕಾರಿನ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅವರ ಸದ್ಯದ ಪರಿಸ್ಥಿತಿ ಬಗ್ಗೆ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಅಪಘಾತದಲ್ಲಿ ನಿಧನರಾದ ಸಿಪಿ ಚಾಕೊ ಅವರಿಗೆ 70 ವರ್ಷ ವಯಸ್ಸಾಗಿತ್ತು.

ತಂದೆಯನ್ನು ವೈದ್ಯಕೀಯ ತಪಾಸಣೆಗಾಗಿ ತ್ರಿಷುರ್​ನಿಂದ ಬೆಂಗಳೂರಿಗೆ ಶೈನ್ ಟಾಮ್ ಚಾಕೊ ಕರೆದುಕೊಂಡು ಬರುತ್ತಿದ್ದರು. ಅವರ ಕಾರು 80ರಿಂದ 100 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿತ್ತು. ಎದುರಿಗೆ ಚಲಿಸುತ್ತಿದ್ದ ಟ್ರಕ್ ಸಡನ್​ ಆಗಿ ಲೇನ್ ಬದಲಾಯಿಸಿದ್ದರಿಂದ ಅಪಘಾತ ಸಂಭವಿಸಿತು ಎನ್ನಲಾಗಿದೆ. ಈ ಅಪಘಾತದಲ್ಲಿ ಶೈನ್ ಟಾಮ್ ಚಾಕೊ ಅವರ ಎಡಗೈ ಮೂಳೆ ಮುರಿದಿದೆ.

ಇದನ್ನೂ ಓದಿ: ಸಿನಿಮಾ ಸೆಟ್​ನಲ್ಲಿ ಅನುಚಿತ ವರ್ತನೆ; ಶೈನ್ ಟಾಮ್ ಚಾಕೋ ಮೇಲೆ ಮತ್ತೋರ್ವ ನಟಿ ಆರೋಪ

ಮಲಯಾಳಂ ಮಾತ್ರವಲ್ಲದೇ ತಮಿಳು, ತೆಲುಗು ಸಿನಿಮಾಗಳಲ್ಲಿ ಕೂಡ ಶೈನ್ ಟಾಮ್ ಚಾಕೊ ಅವರು ನಟಿಸಿದ್ದಾರೆ. ಇತ್ತೀಚೆಗೆ ಡ್ರಗ್ಸ್​ ಕೇಸ್​ನಲ್ಲಿ ಅವರ ಹೆಸರು ತಳುಕುಹಾಕಿಕೊಂಡಿತ್ತು. ಅಲ್ಲದೇ ಕೆಲವು ನಟಿಯರು ಕೂಡ ಶೈನ್ ಟಾಮ್ ಚಾಕೊ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದರು. ಆ ಸುದ್ದಿ ಮರೆಯುವ ಮುನ್ನವೇ ಅವರ ಅಪಘಾತದ ಶಾಕಿಂಗ್ ಸುದ್ದಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:12 pm, Fri, 6 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ