AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೊ ಪ್ರಕರಣದಲ್ಲಿ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ

2022ರ ಪೋಕ್ಸೊ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ದೋಷಿ ಎಂದು ತ್ರಿಶೂರ್ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ತೀರ್ಪು ನೀಡಿದೆ. ಅಪ್ರಾಪ್ತ ಮಕ್ಕಳ ಎದುರು ಅಸಭ್ಯವಾಗಿ ವರ್ತಿಸಿದ ಆರೋಪದಡಿ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಪೋಕ್ಸೊ ಪ್ರಕರಣದಲ್ಲಿ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ
ಶ್ರೀಜಿತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 24, 2026 | 7:51 AM

Share

ಮಲಯಾಳಂ ಮತ್ತು ತಮಿಳು ಚಿತ್ರರಂಗದ ಖ್ಯಾತ ನಟ ಶ್ರೀಜಿತ್ ರವಿ ಅವರಿಗೆ ಭಾರಿ ಸಂಕಷ್ಟ ಎದುರಾಗಿದೆ. 2022ರ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತ್ರಿಶೂರ್ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತ ಮಕ್ಕಳ ಎದುರು ಅಸಭ್ಯವಾಗಿ ವರ್ತಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ತ್ರಿಶೂರ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ರಮ್ಯಾ ಮೆನನ್ ಅವರು ಸೋಮವಾರ ಈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ಹಾಗೂ ಪೋಕ್ಸೊ ಕಾಯ್ದೆಯಡಿ ಶ್ರೀಜಿತ್ ರವಿ ತಪ್ಪಿತಸ್ಥ ಎಂದು ಕೋರ್ಟ್ ಘೋಷಿಸಿದೆ. ಜೈಲು ಶಿಕ್ಷೆಯ ಜೊತೆಗೆ 50,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಕೇರಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ. ಇಬ್ಬರು ಶ್ಯೂರಿಟಿಗಳು ಹಾಗೂ 50 ಸಾವಿರ ರೂಪಾಯಿ ಬಾಂಡ್ ಆಧಾರದ ಮೇಲೆ ಅವರಿಗೆ ಜಾಮೀನು ನೀಡಲಾಗಿದೆ. ಡಿಸೆಂಬರ್ 23, 2026ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

2022ರ ಜುಲೈ 4ರಂದು ಈ ಆಘಾತಕಾರಿ ಘಟನೆ ನಡೆದಿತ್ತು. ಶಾಲೆ ಮುಗಿಸಿ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ಮಕ್ಕಳ ಎದುರು ನಟ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಕಿದ್ದರು. ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಶ್ರೀಜಿತ್ ಈ ಹಿಂದೆ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದವು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಮಾಡಿರುವುದೇಕೆ ನಿತ್ಯಾ ಮೆನನ್: ಕೊಟ್ಟರು ಉತ್ತರ

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಎಲ್ಲಾ 21 ಸಾಕ್ಷಿಗಳು ನಟನ ವಿರುದ್ಧ ಸಾಕ್ಷ್ಯ ನುಡಿದಿದ್ದರು. 50 ವರ್ಷದ ಶ್ರೀಜಿತ್ ರವಿ ಹಿರಿಯ ನಟ ಟಿ.ಜಿ. ರವಿ ಅವರ ಪುತ್ರರಾಗಿದ್ದಾರೆ. 2005ರಿಂದ ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಪೋಷಕ ಹಾಗೂ ಖಳನಾಯಕನ ಪಾತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಕಾಮರ್ಸ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಫ್ರೀಲ್ಯಾನ್ಸಿಂಗ್ ಮಾಡುತ್ತಿದ್ದು, ಟಿವಿ9 ಕನ್ನಡದಲ್ಲಿಯೂ ಬರೆಯುತ್ತಿದ್ದೇನೆ.

Read More
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ