AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಟನ ಹೆಸರಲ್ಲಿ ಇಮೇಲ್ ಬಂದರೆ ಹುಷಾರಾಗಿರಿ; ಇದು ವಂಚಕರ ಜಾಲ

ಸೆಲೆಬ್ರಿಟಿಗಳ ಹೆಸರನ್ನು ಬಳಸಿಕೊಂಡು ಜನರಿಗೆ ಮೋಸ ಮಾಡಲು ಪ್ರಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈಗ ಜನಪ್ರಿಯ ನಟ ಟೊವಿನೋ ಥಾಮಸ್ ಅವರ ಹೆಸರಿನಲ್ಲಿ ನಕಲಿ ಇಮೇಲ್ ಖಾತೆ ತೆರೆಯಲಾಗಿದೆ. ಅದರಿಂದ ಆನ್​ಲೈನ್ ವಂಚನೆ ಮಾಡಲು ಸೈಬರ್ ಖದೀಮರು ಮುಂದಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಈ ನಟನ ಹೆಸರಲ್ಲಿ ಇಮೇಲ್ ಬಂದರೆ ಹುಷಾರಾಗಿರಿ; ಇದು ವಂಚಕರ ಜಾಲ
Tovino Thomas
ಮದನ್​ ಕುಮಾರ್​
|

Updated on: Aug 31, 2026 | 8:21 PM

Share

ಮಲಯಾಳಂ ಚಿತ್ರರಂಗದ ಖ್ಯಾತ ನಟ ಟೊವಿನೋ ಥಾಮಸ್ (Tovino Thomas) ಅವರ ಹೆಸರನ್ನು ಬಳಸಿಕೊಂಡು ಸೈಬರ್ ವಂಚಕನೊಬ್ಬ ಜನರ ಬಳಿ ಇಮೇಲ್ ಮೂಲಕ ಸಂವಹನ ನಡೆಸುತ್ತಿದ್ದಾನೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಟೊವಿನೋ ಥಾಮಸ್ ಅವರು ತಮ್ಮ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಕುರಿತು ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಮಹತ್ವದ ಸೂಚನೆ’ ಎಂದು ಬರೆದುಕೊಂಡು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸೈಬರ್ ವಂಚಕರು ಬಳಸುತ್ತಿರುವ ಇಮೇಲ್ ವಿಳಾಸವನ್ನು ಬಹಿರಂಗಪಡಿಸಿರುವ ಟೊವಿನೋ ಥಾಮಸ್ ಅವರು, ‘ನನ್ನ ಹೆಸರನ್ನು ಬಳಸಿಕೊಂಡು ಹಲವು ಜನರಿಗೆ ಅಧಿಕೃತವಲ್ಲದ ಇಮೇಲ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ವಿಷಯ ನನ್ನ ಗಮನಕ್ಕೆ ಬಂದಿದೆ. ಈ ಇಮೇಲ್‌ಗಳು tovinothomas79@ gmail.com ಎಂಬ ವಿಳಾಸದಿಂದ ರವಾನೆಯಾಗುತ್ತಿವೆ. ಈ ಇಮೇಲ್ ಐಡಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ವಿಳಾಸದ ಮೂಲಕ ನನ್ನ ಪರವಾಗಿ ಮಾತನಾಡಲು ಅಥವಾ ಸಂವಹನ ನಡೆಸಲು ನಾನು ಯಾರಿಗೂ ಅಧಿಕಾರ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ನಟ ಟೊವಿನೋ ಥಾಮಸ್, ಈ ನಕಲಿ ಇಮೇಲ್ ಐಡಿಯಿಂದ ಬರುವ ಯಾವುದೇ ಸಂದೇಶಗಳಿಗೆ ಉತ್ತರಿಸದಂತೆ ಮತ್ತು ತಮ್ಮ ಬ್ಯಾಂಕ್ ವಿವರಗಳು, ಮೊಬೈಲ್ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ಮಾಡಿದ್ದಾರೆ. ಅಲ್ಲದೆ, ಸಂದೇಶಗಳಲ್ಲಿ ಹಣಕಾಸಿನ ಬೇಡಿಕೆ ಇಟ್ಟರೆ ಅಥವಾ ಲಿಂಕ್‌ಗಳನ್ನು ನೀಡಿದರೆ ಅವುಗಳ ಮೇಲೆ ಕ್ಲಿಕ್ ಮಾಡದೆ ಹಾಗೂ ಯಾವುದೇ ಹಣ ವರ್ಗಾವಣೆ ಮಾಡದೆ ಜಾಗರೂಕರಾಗಿರಲು ತಿಳಿಸಿದ್ದಾರೆ. ಈ ವಿಳಾಸದಿಂದ ಸಂದೇಶಗಳು ಬಂದರೆ ತಕ್ಷಣವೇ ಅದನ್ನು ‘Spam’ ಅಥವಾ ‘Phishing’ ಎಂದು ವರದಿ ಮಾಡಿ ಡಿಲೀಟ್ ಮಾಡಬೇಕು ಎಂದಿರುವ ಅವರು, ಈ ಮಾಹಿತಿಯನ್ನು ಪರಿಚಿತರೊಂದಿಗೆ ಹಂಚಿಕೊಂಡು, ಯಾರೂ ವಂಚನೆಗೆ ಒಳಗಾಗದಂತೆ ತಡೆಯಲು ಕರೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

2013ರಲ್ಲಿ ‘ಎಬಿಸಿಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಟೊವಿನೋ ಥಾಮಸ್, ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ಮಿನ್ನಲ್ ಮುರಳಿ’ ಸೂಪರ್‌ಹೀರೋ ಚಿತ್ರದ ಮೂಲಕ ದೇಶಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳನ್ನು ಸಂಪಾದಿಸಿದರು. ಅಲ್ಲದೆ, ‘ಟೊವಿನೋ ಥಾಮಸ್ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆಯನ್ನು ಹೊಂದಿರುವ ನಿರ್ಮಾಪಕನಾಗಿಯೂ ಸಕ್ರಿಯರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ