AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ

ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆದರೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ವಿನಾಯಕನ್, ತಮ್ಮದೇನೂ ತಪ್ಪಿಲ್ಲ ಎಂದು ಹೇಳಿಕೊಂಡಿದ್ದಾರೆ.

ಹೈದರಾಬಾದ್​ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ
ಮಂಜುನಾಥ ಸಿ.
|

Updated on: Sep 07, 2024 | 9:38 PM

Share

ತಮಿಳಿನ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್​ನಲ್ಲಿ ಇಂದು (ಸೆಪ್ಟೆಂಬರ್ 07) ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ (ಸಿಐಎಸ್​ಎಫ್) ನೀಡಿರುವ ದೂರಿನ ಆಧಾರದ ಮೇಲೆ ಎಫ್​ಐಆರ್ ಸಹ ದಾಖಲಾಗಿದೆ.

ಗೋವಾಕ್ಕೆ ಹೋಗುತ್ತಿದ್ದ ವಿನಾಯಕನ್, ಕನೆಕ್ಟಿಂಗ್ ಫ್ಲೈಟ್​ ಹತ್ತಲೆಂದು ಹೈದರಾಬಾದ್​ನಲ್ಲಿ ಇಳಿದಾಗ ವಿಮಾನ ನಿಲ್ದಾಣದ ಸಿಐಎಸ್​ಎಫ್ ಸಿಬ್ಬಂದಿ ಒಬ್ಬರೊಟ್ಟಿಗೆ ಜಗಳ ಮಾಡಿಕೊಂಡಿದ್ದು, ಹಲ್ಲೆ ಸಹ ಮಾಡಿದ್ದಾರೆ ಎಂದು ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ ಆರೋಪ ಮಾಡಿದ್ದಾರೆ. ಆದರೆ ಮಲಯಾಳಂ ಪತ್ರಿಕೆ ಮನೋರಮಾ ಜೊತೆಗೆ ಮಾತನಾಡಿರುವ ವಿನಾಯಕನ್, ವ್ಯತಿರಿಕ್ತ ಹೇಳಿಕೆ ನೀಡಿದ್ದು, ಸಿಐಎಸ್​ಎಫ್ ಸಿಬ್ಬಂದಿಯೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿದ್ದಾರೆ.

ಮನೋರಮಾಕ್ಕೆ ವಿನಾಯಕನ್ ನೀಡಿರುವ ಹೇಳಿಕೆಯಂತೆ, ಅವರು ಗೋವಾಕ್ಕೆ ತೆರಳುತ್ತಿದ್ದ ಹೈದರಾಬಾದ್​ನಲ್ಲಿ ಇಳಿದಿದ್ದಾರೆ. ಸಿಐಎಸ್​ಎಫ್ ಸಿಬ್ಬಂದಿ ಕೆಲವರು ಅವರನ್ನು ಒಂದು ಕೋಣೆಗೆ ಕರೆದುಕೊಂಡು ಹೋಗಿ ಹಿಗ್ಗಾ-ಮುಗ್ಗ ಥಳಿಸಿದರಂತೆ. ಸಣ್ಣ ವಿಷಯಕ್ಕೆ ಭದ್ರತಾ ಸಿಬ್ಬಂದಿ ಜೊತೆಗೆ ವಿನಾಯಕನ್ ಜಗಳ ಮಾಡಿದ್ದಕ್ಕೆ ತಮಗೆ ಹೀಗೆ ಥಳಿಸಿದ್ದಾರೆಂದು ಅವರೇ ಹೇಳಿಕೊಂಡಿದ್ದಾರೆ. ‘ನಾನು ಯಾವುದೇ ತಪ್ಪು ಮಾಡಿಲ್ಲ ಬೇಕಿದ್ದರೆ ಸಾಕ್ಷ್ಯವಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು’ ಎಂದು ವಿನಾಯಕನ್ ಹೇಳಿದ್ದಾಗಿ ಮನೋರಮಾ ವರದಿ ಮಾಡಿದೆ.

ಇದನ್ನೂ ಓದಿ:‘ಜೈಲರ್ 2’ ಚಿತ್ರದ ಬಗ್ಗೆ ಸಿಕ್ತು ದೊಡ್ಡ ಅಪ್ಡೇಟ್: ಹೀರೋ ಯಾರು?

ವಿನಾಯಕನ್ ಮಲಯಾಳಂನ ಬಹಳ ಜನಪ್ರಿಯ ನಟ. ಕಳೆದ ವರ್ಷ ಸಹ ವಿನಾಯಕನ್ ಅನ್ನು ಬಂಧಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ತಮ್ಮ ಸಂಬಂಧಿಗಳು ಪತ್ನಿಯೊಟ್ಟಿಗೆ ಜಗಳ ಮಾಡಿಕೊಂಡಿದ್ದಕ್ಕೆ ದೂರು ದಾಖಲಾಗಿತ್ತು. ಎರ್ನಾಕುಲಂ ಪೊಲೀಸ್ ಠಾಣೆಗೆ ಹೋಗಿದ್ದ ವಿನಾಯಕನ್ ಅನ್ನು ಸಿಬ್ಬಂದಿ ಬಂಧಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿನಾಯಕನ್ ಗಲಾಟೆ ಮಾಡಿದ್ದಾರೆ ಎಂದು ವಿನಾಯಕನ್ ಅನ್ನು ಬಂಧಿಸಲಾಗಿತ್ತು.

ವಿನಾಯಕನ್, ಮಲಯಾಳಂ ಚಿತ್ರರಂಗದ ಜನಪ್ರಿಯ ನಟ. ಮಲಯಾಳಂನ ಹಲವಾರು ಸಿನಿಮಾಗಳಲ್ಲಿ ಹಲವು ರೀತಿಯ ಪಾತ್ರಗಳಲ್ಲಿ ವಿನಾಯಕನ್ ನಟಿಸಿದ್ದಾರೆ. ಮಲಯಾಳಂ ಮಾತ್ರವೇ ಅಲ್ಲದೆ ತಮಿಳಿನ ಕೆಲವು ಸೂಪರ್ ಹಿಟ್ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ರಜನೀಕಾಂತ್​ರ ‘ಜೈಲರ್’ ಸಿನಿಮಾನಲ್ಲಿಯೂ ಸಹ ವಿನಾಯಕನ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ