AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kozhikode Sarada: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಶಾರದಾ ನಿಧನ; ಕಂಬಿನಿ ಮಿಡಿದ ಮಾಲಿವುಡ್​

ನಾಲ್ವರು ಮಕ್ಕಳನ್ನು ನಟಿ ಕೋಳಿಕೋಡ್​ ಶಾರದಾ ಅಗಲಿದ್ದಾರೆ. ಪೃಥ್ವಿರಾಜ್​ ಸುಕುಮಾರನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅವರ ನಿಧನಕ್ಕೆ ಕಂಬನಿ ಮಿಡಿದ್ದಾರೆ.

Kozhikode Sarada: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಶಾರದಾ ನಿಧನ; ಕಂಬಿನಿ ಮಿಡಿದ ಮಾಲಿವುಡ್​
ಕೋಳಿಕೋಡ್ ಶಾರದಾ
TV9 Web
| Edited By: |

Updated on: Nov 10, 2021 | 12:19 PM

Share

ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿ ಕೋಳಿಕೋಡ್​ ಶಾರದಾ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಮಂಗಳವಾರ (ನ.9) ಅವರಿಗೆ ಹೃದಯಾಘಾತವಾದ ಬಳಿಕ ಕೇರಳದ ಕೋಳಿಕೋಡ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದ್ದಾರೆ.

ರಂಗಭೂಮಿಯಲ್ಲಿನ ಅಪಾರ ಅನುಭವ ಇಟ್ಟುಕೊಂಡು ಚಿತ್ರರಂಗಕ್ಕೆ ಕಾಲಿಟ್ಟವರು ಶಾರದಾ. ಮಲಯಾಳಂ ಸಿನಿಮಾಗಳ ಮೂಲಕ ಅವರು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ‘ಅಂಗಕ್ಕುರಿ’ ಸಿನಿಮಾ ಮೂಲಕ 1979ರಲ್ಲಿ ಚಿತ್ರರಂಗಕ್ಕೆ ಶಾರದಾ ಪಾದಾರ್ಪಣೆ ಮಾಡಿದ್ದರು. 40 ವರ್ಷಗಳ ಕಾಲ ಅವರು ಸಿನಿಮಾ ಜಗತ್ತಿನಲ್ಲಿ ಸಕ್ರಿಯರಾಗಿದ್ದರು. 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರದ್ದು. ಹೆಚ್ಚಾಗಿ ತಾಯಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆ ಮೂಲಕ ಅವರು ಸಿನಿಪ್ರಿಯರನ್ನು ರಂಜಿಸಿದ್ದರು. ಮಾಡಿದ್ದೆಲ್ಲವೂ ಚಿಕ್ಕ-ಪುಟ್ಟ ಪಾತ್ರಗಳಾದರೂ ಅವರ ನಟನೆ ಗಮನಾರ್ಹವಾಗಿತ್ತು. ಮಲಯಾಳಂ ಕಿರುತೆರೆಯ ಕೆಲವು ಧಾರಾವಾಹಿಗಳಲ್ಲೂ ಶಾರದಾ ಬಣ್ಣ ಹಚ್ಚಿದ್ದರು.

ಅನುಬಂಧಂ, ಸಾದಯಂ, ನಂದನಂ ಮುಂತಾದವು ಶಾರದಾ ನಟಿಸಿದ ಪ್ರಮುಖ ಸಿನಿಮಾಗಳು. ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಪೃಥ್ವಿರಾಜ್​ ಸುಕುಮಾರನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಶಾರದಾ ನಿಧನಕ್ಕೆ ಕಂಬನಿ ಮಿಡಿದ್ದಾರೆ. ಕೇರಳ ಅಸೆಂಬ್ಲಿ ಸ್ಪೀಕರ್​ ಎಂಬಿ ರಾಜೇಶ್​, ಸಚಿವರಾದ ಮೊಹಮ್ಮದ್​ ರಿಯಾಸ್​, ಸಾಜಿ ಚೆರಿಯನ್​ ಮುಂತಾದ ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್​ ಅವರು ಅ.29ರಂದು ಹೃದಯಾಘಾತದಿಂದ ನಿಧನರಾದ ಬಳಿಕ ಇಡೀ ದಕ್ಷಿಣ ಭಾರತಕ್ಕೆ ಸೂತಕದ ಛಾಯೆ ಆವರಿಸಿದೆ. ಅಪ್ಪು ಅವರ ಅಕಾಲಿಕ ಮರಣವನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ. ಪರಭಾಷೆಯ ಅನೇಕ ಕಲಾವಿದರು ಪುನೀತ್​ ನಿವಾಸಕ್ಕೆ ಬಂದು ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇದರ ನಡುವೆಯೇ ಕೋಳಿಕೋಡ್​ ಶಾರದಾ ಅವರು ಕೂಡ ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ.

ಇದನ್ನೂ ಓದಿ:

Heart Attack: ಹೃದಯಾಘಾತದ ಸಾಮಾನ್ಯ ಲಕ್ಷಣಗಳಾವುವು? ತಿಳಿಯಲೇಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ