ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಅಪರ್ಣಾ ನಾಯರ್ ಶವ ಪತ್ತೆ; ಅಸಹಜ ಸಾವು ಪ್ರಕರಣ ದಾಖಲಿಸಿದ ಪೊಲೀಸರು
ನಟಿ ಅಪರ್ಣಾ ನಾಯರ್ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಗಂಡ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಪರ್ಣಾ ಅವರು ಅಗಲಿದ್ದಾರೆ. ಕುಟುಂಬದವರಿಗೆ ಎಲ್ಲರೂ ಸಾಂತ್ವನ ಹೇಳುತ್ತಿದ್ದಾರೆ.
ಸ್ಪಂದನಾ ವಿಜಯ್ ರಾಘವೇಂದ್ರ ಅವರ ಸಾವಿನ ನೋವು ಇನ್ನೂ ಕಾಡುತ್ತಿರುವಾಗಲೇ ಚಿತ್ರರಂಗಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದ ನಟಿ ಅಪರ್ಣಾ ನಾಯರ್ (Aparna Nair) ಅವರು ನಿಧನರಾಗಿದ್ದಾರೆ. ಇದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವು ಉಂಟು ಮಾಡಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ನಾಯರ್ ಅವರ ಶವ ಪತ್ತೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ (Unnatural Death Case) ದಾಖಲಿಸಿಕೊಂಡಿದ್ದಾರೆ. ಮಲಯಾಳಂ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಪರ್ಣಾ ನಾಯರ್ ಅವರು ಸಕ್ರಿಯರಾಗಿದ್ದರು. ಅವರ ನಿಧನಕ್ಕೆ (Aparna Nair Death) ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
ಅಪರ್ಣಾ ನಾಯರ್ ಅವರು ತಿರುವನಂತಪುರಂನಲ್ಲಿ ವಾಸವಾಗಿದ್ದರು. ಅವರಿಗೆ 31 ವರ್ಷ ವಯಸ್ಸಾಗಿತ್ತು. ಗುರುವಾರ (ಆಗಸ್ಟ್ 31) ಸಂಜೆ 7.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ಅವರು ಕೊನೆಯುಸಿರು ಎಳೆದಿದ್ದರು ಎಂದು ವರದಿ ಆಗಿದೆ.
ಇದನ್ನೂ ಓದಿ: ನಿಧನಕ್ಕೂ ಮುನ್ನ ಸುಶಾಂತ್ ವಾಸವಾಗಿದ್ದ ಮನೆಯನ್ನು ಬಾಡಿಗೆಗೆ ಪಡೆದ ನಟಿ ಅದಾ ಶರ್ಮಾ
ಅಪರ್ಣಾ ನಾಯರ್ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅವರ ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಗಂಡ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಪರ್ಣಾ ಅವರು ಅಗಲಿದ್ದಾರೆ. ಕುಟುಂಬದವರಿಗೆ ಎಲ್ಲರೂ ಸಾಂತ್ವನ ಹೇಳುತ್ತಿದ್ದಾರೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ
‘ಮೇಘತೀರ್ಥಂ’, ‘ಮುದುಗೌ’, ‘ಅಚಾಯನ್ಸ್’, ‘ಕಲ್ಕಿ’, ‘ಕೊಡತಿ ಸಮಕ್ಷಂ ಬಾಲನ್ ವಕೀಲ್’ ಸೇರಿದಂತೆ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ಅಪರ್ಣಾ ನಾಯರ್ ಅವರು ನಟಿಸಿದ್ದಾರೆ. ಹಲವು ಟಿವಿ ಸೀರಿಯಲ್ಗಳಲ್ಲೂ ಅವರು ಅಭಿನಯಿಸಿದ್ದಾರೆ. ಆ ಮೂಲಕ ಮಲಯಾಳಂ ಸಿನಿಮಾ ಪ್ರೇಕ್ಷಕರಿಗೆ ಅವರು ಪರಿಚಿತರಾಗಿದ್ದರು. ಆದರೆ ಅವರ ಜೀವನ ಈ ರೀತಿ ದುರಂತ ಅಂತ್ಯ ಕಂಡಿರುವುದು ಬೇಸರ ಮೂಡಿಸಿದೆ. ಅಪರ್ಣಾ ನಾಯರ್ ಸಾವಿಗೆ ಕಾರಣ ಏನು ಎಂಬುದು ತನಿಖೆ ಬಳಿಕ ಗೊತ್ತಾಗಬೇಕಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.