ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಅಪರ್ಣಾ ನಾಯರ್​ ಶವ ಪತ್ತೆ; ಅಸಹಜ ಸಾವು ಪ್ರಕರಣ ದಾಖಲಿಸಿದ ಪೊಲೀಸರು

|

Updated on: Sep 01, 2023 | 10:56 AM

ನಟಿ ಅಪರ್ಣಾ ನಾಯರ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಗಂಡ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಪರ್ಣಾ ಅವರು ಅಗಲಿದ್ದಾರೆ. ಕುಟುಂಬದವರಿಗೆ ಎಲ್ಲರೂ ಸಾಂತ್ವನ ಹೇಳುತ್ತಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಅಪರ್ಣಾ ನಾಯರ್​ ಶವ ಪತ್ತೆ; ಅಸಹಜ ಸಾವು ಪ್ರಕರಣ ದಾಖಲಿಸಿದ ಪೊಲೀಸರು
ಪತಿ ಜೊತೆ ಅಪರ್ಣಾ ನಾಯರ್​
Follow us on

ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಸಾವಿನ ನೋವು ಇನ್ನೂ ಕಾಡುತ್ತಿರುವಾಗಲೇ ಚಿತ್ರರಂಗಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದ ನಟಿ ಅಪರ್ಣಾ ನಾಯರ್​ (Aparna Nair) ಅವರು ನಿಧನರಾಗಿದ್ದಾರೆ. ಇದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವು ಉಂಟು ಮಾಡಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ನಾಯರ್​ ಅವರ ಶವ ಪತ್ತೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ (Unnatural Death Case) ದಾಖಲಿಸಿಕೊಂಡಿದ್ದಾರೆ. ಮಲಯಾಳಂ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಪರ್ಣಾ ನಾಯರ್​ ಅವರು ಸಕ್ರಿಯರಾಗಿದ್ದರು. ಅವರ ನಿಧನಕ್ಕೆ (Aparna Nair Death) ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಅಪರ್ಣಾ ನಾಯರ್​ ಅವರು ತಿರುವನಂತಪುರಂನಲ್ಲಿ ವಾಸವಾಗಿದ್ದರು. ಅವರಿಗೆ 31 ವರ್ಷ ವಯಸ್ಸಾಗಿತ್ತು. ಗುರುವಾರ (ಆಗಸ್ಟ್​ 31) ಸಂಜೆ 7.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ಅವರು ಕೊನೆಯುಸಿರು ಎಳೆದಿದ್ದರು ಎಂದು ವರದಿ ಆಗಿದೆ.

ಇದನ್ನೂ ಓದಿ: ನಿಧನಕ್ಕೂ ಮುನ್ನ ಸುಶಾಂತ್​ ವಾಸವಾಗಿದ್ದ ಮನೆಯನ್ನು ಬಾಡಿಗೆಗೆ ಪಡೆದ ನಟಿ ಅದಾ ಶರ್ಮಾ

ಅಪರ್ಣಾ ನಾಯರ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅವರ ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಗಂಡ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಪರ್ಣಾ ಅವರು ಅಗಲಿದ್ದಾರೆ. ಕುಟುಂಬದವರಿಗೆ ಎಲ್ಲರೂ ಸಾಂತ್ವನ ಹೇಳುತ್ತಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ

‘ಮೇಘತೀರ್ಥಂ’, ‘ಮುದುಗೌ’, ‘ಅಚಾಯನ್ಸ್​’, ‘ಕಲ್ಕಿ’, ‘ಕೊಡತಿ ಸಮಕ್ಷಂ ಬಾಲನ್​ ವಕೀಲ್​’ ಸೇರಿದಂತೆ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ಅಪರ್ಣಾ ನಾಯರ್​ ಅವರು ನಟಿಸಿದ್ದಾರೆ. ಹಲವು ಟಿವಿ ಸೀರಿಯಲ್​ಗಳಲ್ಲೂ ಅವರು ಅಭಿನಯಿಸಿದ್ದಾರೆ. ಆ ಮೂಲಕ ಮಲಯಾಳಂ ಸಿನಿಮಾ ಪ್ರೇಕ್ಷಕರಿಗೆ ಅವರು ಪರಿಚಿತರಾಗಿದ್ದರು. ಆದರೆ ಅವರ ಜೀವನ ಈ ರೀತಿ ದುರಂತ ಅಂತ್ಯ ಕಂಡಿರುವುದು ಬೇಸರ ಮೂಡಿಸಿದೆ. ಅಪರ್ಣಾ ನಾಯರ್ ಸಾವಿಗೆ ಕಾರಣ ಏನು ಎಂಬುದು ತನಿಖೆ ಬಳಿಕ ಗೊತ್ತಾಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.