AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಫ್​ಸಿ ವಿರುದ್ಧ ಪ್ರತಿಭಟನೆಗೆ ಮುಂದಾದ ಮಲಯಾಳಂ ಚಿತ್ರರಂಗ: ಕಾರಣ?

Malayalam movie: ಮಲಯಾಳಂ ಚಿತ್ರರಂಗವು ಸಿಬಿಎಫ್​ಸಿ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಸಿನಿಮಾ ಒಂದಕ್ಕೆ ಪ್ರಮಾಣ ಪತ್ರ ನೀಡದೇ ಇರುವ ಸಿಬಿಎಫ್​ಸಿಯ ನಿಲವನ್ನು ಖಂಡಿಸಿ ಸೋಮವಾರದಂದು ಸಿಬಿಎಫ್​ಸಿ ಕಚೇರಿ ಮುಂದೆ ಮಲಯಾಳಂ ಚಿತ್ರರಂಗದ ವಿವಿಧ ಒಕ್ಕೂಟಗಳು ಪ್ರತಿಭಟನೆ ನಡೆಸಲಿವೆ. ಸಿಬಿಎಫ್​ಸಿ ವಿರುದ್ಧ ಮಲಯಾಳಂ ಚಿತ್ರರಂಗ ಸಿಟ್ಟಾಗಲು ಕಾರಣವೇನು?

ಸಿಬಿಎಫ್​ಸಿ ವಿರುದ್ಧ ಪ್ರತಿಭಟನೆಗೆ ಮುಂದಾದ ಮಲಯಾಳಂ ಚಿತ್ರರಂಗ: ಕಾರಣ?
Jsk
ಮಂಜುನಾಥ ಸಿ.
|

Updated on: Jun 28, 2025 | 9:58 PM

Share

ಮಲಯಾಳಂ ಚಿತ್ರರಂಗ ಒಂದರ ಹಿಂದೊಂದರಂತೆ ಉತ್ತಮ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡುತ್ತಿದೆ. ಆದರೆ ಇತರೆ ಕೆಲವು ಚಿತ್ರರಂಗಗಳಂತೆ ಅಲ್ಲಿಯೂ ಸಮಸ್ಯೆಗಳಿವೆ. ಕೆಲ ವಾರಗಳ ಹಿಂದಷ್ಟೆ ಸಿನಿಮಾ ಪ್ರದರ್ಶಕರು, ರಾಜ್ಯದಾದ್ಯಂತ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದೀಗ ಇಡೀ ಮಲಯಾಳಂ ಚಿತ್ರರಂಗ ಸಿಬಿಎಫ್​ಸಿ (ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್) ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಸೋಮವಾರದಂದು ಮಲಯಾಳಂ ಚಿತ್ರರಂಗದ ಬೇರೆ ಬೇರೆ ವಿಭಾಗಗಳ ಸಂಘಟನೆಯವರು ಸಿಬಿಎಫ್​ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಈ ವಿವಾದಕ್ಕೆ ಕಾರಣವಾಗಿರುವುದು ಒಂದು ಹೆಸರು.

ಕೇಂದ್ರ ಸಚಿವರೂ ಆಗಿರುವ ಸುರೇಶ್ ಗೋಪಿ ನಟನೆಯ ‘ಜೆಎಸ್​ಕೆ’ (ಜಾನಕಿ vs ಸ್ಟೇಟ್ ಆಫ್ ಕೇರಳ) ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಪ್ರಮಾಣ ಪತ್ರಕ್ಕಾಗಿ ಸಿಬಿಎಫ್​ಸಿಗೆ ಕಳಿಸಲಾಗಿತ್ತು. ಆದರೆ ಸಿಬಿಎಫ್​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದ ಹೊರತು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವುದಿಲ್ಲ ಎಂದಿದೆ.

ಸಿನಿಮಾದ ನಾಯಕಿಯ ಹೆಸರು ಜಾನಕಿ ಎಂದಿದ್ದು, ಪಾತ್ರದ ಹೆಸರನ್ನು ಬದಲಾವಣೆ ಮಾಡುವಂತೆ ಸಿಬಿಎಫ್​ಸಿ ಚಿತ್ರತಂಡಕ್ಕೆ ಸೂಚಿಸಿದೆ. ಜಾನಕಿ ಹೆಸರು ದೇವಿ ಸೀತಾಮಾತೆಯ ಹೆಸರಾಗಿದ್ದು, ಆ ಕಾರಣದಿಂದಾಗಿ ಸಿನಿಮಾದ ಹೆಸರನ್ನು ಬದಲಾವಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಇದು ಚಿತ್ರತಂಡವನ್ನು ಮಾತ್ರವಲ್ಲದೆ ಮಲಯಾಳಂ ಚಿತ್ರರಂಗವನ್ನೇ ಕೆರಳಿಸಿದೆ. ಈ ಹಿಂದೆ ಸಹ ‘ಜಾನಕಿ’ ಎಂಬ ಹೆಸರಿನ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಹಲವಾರು ಸಿನಿಮಾಗಳಲ್ಲಿ ಪಾತ್ರದ ಹೆಸರು ‘ಜಾನಕಿ’ ಎಂದಿದೆ. ಹಾಗಿದ್ದ ಮೇಲೆ ಈ ಸಿನಿಮಾಕ್ಕೆ ಮಾತ್ರ ಏಕೆ ವಿರೋಧ ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ:ಮಲಯಾಳಂ ಚಿತ್ರರಂಗಕ್ಕೆ ವಿದಾಯ ಹೇಳಿದರೆ ಅನುಪಮ ಪರಮೇಶ್ವರನ್

‘ಜೆಎಸ್​ಕೆ’ ಸಿನಿಮಾವು ಜೂನ್ 27 ಕ್ಕೆ ಬಿಡುಗಡೆ ಆಗಬೇಕಿತ್ತು, ಆದರೆ ಪ್ರಮಾಣ ಪತ್ರ ನಿರಾಕರಣೆಯಿಂದಾಗಿ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಹಾಗೂ ನಿರ್ದೇಶಕ ಇಬ್ಬರೂ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್​​ನಲ್ಲಿ ವಿಚಾರಣೆ ಚಾಲ್ತಿಯಲ್ಲಿದೆ. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಸಿಬಿಎಫ್​ಸಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ‘ರಾಮ್ ಲಖನ್’, ‘ಸೀತಾ ಔರ್ ಗೀತಾ’ ಇನ್ನೂ ಹಲವಾರು ಇಂಥಹಾ ಸಿನಿಮಾಗಳಿವೆ, ಅವುಗಳ ಬಗ್ಗೆ ಆಕ್ಷೇಪಣೆ ಇಲ್ಲ ಆದರೆ ಇದಕ್ಕೆ ಮಾತ್ರ ಏಕೆ? ಎಂದು ಪ್ರಶ್ನೆ ಮಾಡಿದೆ.

ಸಿಬಿಎಫ್​ಸಿ ನೀಡಿರುವ ಹೇಳಿಕೆಯಂತೆ, ‘ಜೆಎಸ್​ಕೆ’ ಸಿನಿಮಾವೂ ಬಹಳ ಸೂಕ್ಷ್ಮವಾದ ಸಾಮಾಜಿಕ ವಿಷಯ ಒಳಗೊಂಡಿದೆ. ಸಿನಿಮಾನಲ್ಲಿ ಅತ್ಯಾಚಾರ, ಲೈಂಗಿಕತೆ ಇನ್ನಿತರೆ ವಿಷಯಗಳು ಇವೆ. ಆ ಕಾರಣದಿಂದಾಗಿ ಸಿನಿಮಾದ ಪಾತ್ರದ ಹೆಸರು ಬದಲಾಯಿಸುವಂತೆ ಸೂಚಿಸಲಾಗಿದೆ ಎಂದಿದೆ. ಆದರೆ ಮಲಯಾಳಂ ಸಿನಿಮಾ ಸಂಘವು ಸಿಬಿಎಫ್​ಸಿ ನಿರ್ಧಾರವನ್ನು ಖಂಡಿಸಿದ್ದು, ಸೋಮವಾರದಂದು ಪ್ರತಿಭಟನೆ ನಡೆಸಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ