ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ

Kollam Sudhi Death: ‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ
ಸುಧಿ
Follow us
ರಾಜೇಶ್ ದುಗ್ಗುಮನೆ
|

Updated on:Jun 05, 2023 | 3:06 PM

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ (Kollam Sudhi) ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ. ಸೋಶಿಯಲ್ ಮೀಡಿಯಾ (Social Media) ಮೂಲಕ ಸಂತಾಪ ಸೂಚಿಸಲಾಗುತ್ತಿದೆ.

ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

2015ರಲ್ಲಿ ಸುಧಿ ಚಿತ್ರರಂಗಕ್ಕೆ ಬಂದರು. ಸುಧಿ ಅವರು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಸುಧಿ ಅವರು ಸಿನಿಮಾದಲ್ಲೂ ನಟಿಸಿದ್ದಾರೆ. ‘ಕಟ್ಟಪ್ಪನೆಯಿಲೆ ಹೃತಿಕ್ ರೋಷನ್’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಸುಧಿ ಸಾವಿಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಫ್ಯಾನ್ಸ್​ಗೆ ದುಃಖ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Mon, 5 June 23

ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್
ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್