AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮಲಯಾಳಂ ಸುಂದರಿ ಎಂಟ್ರಿ

‘ದಳಪತಿ 69’ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದ ಕೆಲಸ ಯಾವಾಗ ಆರಂಭ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಅವರ ಈ ಚಿತ್ರದ ಪಾತ್ರವರ್ಗದ ಬಗ್ಗೆ ಚರ್ಚೆಗಳು ಶುರವಾಗಿದೆ. ಮಲಯಾಳಂ ನಟಿ ಈ ಚಿತ್ರದಲ್ಲಿ ನಟಿಸಲಿದ್ದಾರಂತೆ.

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮಲಯಾಳಂ ಸುಂದರಿ ಎಂಟ್ರಿ
ಮಮಿತಾ -ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 06, 2024 | 10:52 AM

Share

ದಳಪತಿ ವಿಜಯ್ ಅವರ ಮುಂದಿನ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ಕೂಡ ನಟಿಸಬಹುದು ಎಂಬ ವದಂತಿಗಳು ದಟ್ಟವಾಗಿವೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 69’ ಎಂದು ಇಡಲಾಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ಒಂದು ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಸುದ್ದಿಯಲ್ಲಿ ಅಧಿಕೃತ ಮಾಹಿತಿ ಸಿಕ್ಕಿಲ್ಲ. ‘ಪ್ರೇಮಲು’ ಆದ ಬಳಿಕ ಮಮಿತಾ ಅವರ ಖ್ಯಾತಿ ಹೆಚ್ಚಾಗಿದೆ.

ದಳಪತಿ ವಿಜಯ್ ಅವರು ಸದ್ಯ ರಾಜಕೀಯದಲ್ಲಿ ಬ್ಯುಸಿ ಆಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮದೆ ಪಕ್ಷವನ್ನು ಕೂಡ ಅವರು ಘೋಷಣೆ ಮಾಡಿದ್ದಾರೆ. ಸದ್ಯ ‘GOAT’ ಚಿತ್ರದಲ್ಲಿ ನಟಿಸುತ್ತಿರುವ ಅವರು, ಆ ಬಳಿಕ ಅವರು ವೃತ್ತಿ ಜೀವನದ ಕೊನೆಯ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ಕಾಣಿಸಿಕೊಳ್ಳಲಿದ್ದಾರಂತೆ.

‘ದಳಪತಿ 69’ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸುತ್ತಾರೆ ಎಂದು ವರದಿ ಆಗಿದೆ. ವರದಿಗಳ ಪ್ರಕಾರ ಮಮಿತಾ ಅವರು ನಾಯಕಿ ಅಲ್ಲ, ಬದಲಿಗೆ ವಿಜಯ್ ಸಹೋದರಿಯ ಪಾತ್ರದಲ್ಲಿ ನಟಿಸಲಿದ್ದಾರಂತೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

2017ರಲ್ಲಿ ಮಮಿತಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸರ್ವೋಪರಿ ಪಾಲಕ್ಕಾರನ್’ ಅವರು ನಟಿಸಿದ ಮೊದಲ ಸಿನಿಮಾ. ಇದಾದ ಬಳಿಕ ಅವರು ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಈ ವರ್ಷ ರಿಲೀಸ್ ಆದ ‘ಪ್ರೇಮಲು’ ಸಿನಿಮಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಇದಾದ ಬಳಿಕ ಅವರಿಗೆ ಹಲವು ಆಫರ್​ಗಳು ಹುಡುಕಿ ಬರುತ್ತಿವೆ. ಜಿವಿ ಪ್ರಕಾಶ್ ಕುಮಾರ್ ಅಭಿನಯದ ‘ರೆಬೆಲ್’ ಚಿತ್ರದ ಮೂಲಕ ಮಮಿತಾ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಸಿನಿಮಾ ಅಷ್ಟಾಗಿ ಗಮನ ಸೆಳೆದಿರಲಿಲ್ಲ. ಆದಾಗ್ಯೂ ತಮಿಳು ಚಿತ್ರಗಳಿಂದ ಅವರನ್ನು ಹುಡುಕಿ ಆಫರ್​ಗಳು ಬರುತ್ತಿವೆ.

ಇದನ್ನೂ ಓದಿ: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ವಿಜಯ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಗೋಟ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೀನಾಕ್ಷಿ ಚೌಧರಿ, ಮಾಳವಿಕಾ ಶರ್ಮಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5 ರಂದು ಥಿಯೇಟರ್‌ಗೆ ಬರಲಿದೆ. ವೆಂಕಟ ಪ್ರಭು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Tue, 6 August 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ