ದಳಪತಿ ವಿಜಯ್ ಅವರ ಮುಂದಿನ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ಕೂಡ ನಟಿಸಬಹುದು ಎಂಬ ವದಂತಿಗಳು ದಟ್ಟವಾಗಿವೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 69’ ಎಂದು ಇಡಲಾಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ಒಂದು ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಸುದ್ದಿಯಲ್ಲಿ ಅಧಿಕೃತ ಮಾಹಿತಿ ಸಿಕ್ಕಿಲ್ಲ. ‘ಪ್ರೇಮಲು’ ಆದ ಬಳಿಕ ಮಮಿತಾ ಅವರ ಖ್ಯಾತಿ ಹೆಚ್ಚಾಗಿದೆ.
ದಳಪತಿ ವಿಜಯ್ ಅವರು ಸದ್ಯ ರಾಜಕೀಯದಲ್ಲಿ ಬ್ಯುಸಿ ಆಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮದೆ ಪಕ್ಷವನ್ನು ಕೂಡ ಅವರು ಘೋಷಣೆ ಮಾಡಿದ್ದಾರೆ. ಸದ್ಯ ‘GOAT’ ಚಿತ್ರದಲ್ಲಿ ನಟಿಸುತ್ತಿರುವ ಅವರು, ಆ ಬಳಿಕ ಅವರು ವೃತ್ತಿ ಜೀವನದ ಕೊನೆಯ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಮಮಿತಾ ಕೂಡ ಕಾಣಿಸಿಕೊಳ್ಳಲಿದ್ದಾರಂತೆ.
‘ದಳಪತಿ 69’ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸುತ್ತಾರೆ ಎಂದು ವರದಿ ಆಗಿದೆ. ವರದಿಗಳ ಪ್ರಕಾರ ಮಮಿತಾ ಅವರು ನಾಯಕಿ ಅಲ್ಲ, ಬದಲಿಗೆ ವಿಜಯ್ ಸಹೋದರಿಯ ಪಾತ್ರದಲ್ಲಿ ನಟಿಸಲಿದ್ದಾರಂತೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
2017ರಲ್ಲಿ ಮಮಿತಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸರ್ವೋಪರಿ ಪಾಲಕ್ಕಾರನ್’ ಅವರು ನಟಿಸಿದ ಮೊದಲ ಸಿನಿಮಾ. ಇದಾದ ಬಳಿಕ ಅವರು ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಈ ವರ್ಷ ರಿಲೀಸ್ ಆದ ‘ಪ್ರೇಮಲು’ ಸಿನಿಮಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಇದಾದ ಬಳಿಕ ಅವರಿಗೆ ಹಲವು ಆಫರ್ಗಳು ಹುಡುಕಿ ಬರುತ್ತಿವೆ. ಜಿವಿ ಪ್ರಕಾಶ್ ಕುಮಾರ್ ಅಭಿನಯದ ‘ರೆಬೆಲ್’ ಚಿತ್ರದ ಮೂಲಕ ಮಮಿತಾ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಸಿನಿಮಾ ಅಷ್ಟಾಗಿ ಗಮನ ಸೆಳೆದಿರಲಿಲ್ಲ. ಆದಾಗ್ಯೂ ತಮಿಳು ಚಿತ್ರಗಳಿಂದ ಅವರನ್ನು ಹುಡುಕಿ ಆಫರ್ಗಳು ಬರುತ್ತಿವೆ.
ಇದನ್ನೂ ಓದಿ: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್
ವಿಜಯ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಗೋಟ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೀನಾಕ್ಷಿ ಚೌಧರಿ, ಮಾಳವಿಕಾ ಶರ್ಮಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5 ರಂದು ಥಿಯೇಟರ್‌ಗೆ ಬರಲಿದೆ. ವೆಂಕಟ ಪ್ರಭು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:44 am, Tue, 6 August 24