AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ

Nandamuri Balakrishna: ನಂದಮೂರಿ ಬಾಲಕೃಷ್ಣ ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ.

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ
Manchu Manoj
ಮಂಜುನಾಥ ಸಿ.
|

Updated on: May 20, 2026 | 1:40 PM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ.

ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಅವರು ಅತ್ಯಂತ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ. ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ಮನೋಜ್ ಅವರಿಗಾಗಿ ಅತ್ಯಂತ ಕ್ರೂರ ಹಾಗೂ ಪವರ್‌ಫುಲ್ ಆದ ನೆಗೆಟಿವ್ ಪಾತ್ರವನ್ನು ಸೃಷ್ಟಿಸಿದ್ದು, ಕಥೆ ಕೇಳಿದ ತಕ್ಷಣವೇ ಮನೋಜ್ ಈ ಚಿತ್ರಕ್ಕೆ ಒಪ್ಪಿಗೆ ನೀಡಿದ್ದಾರಂತೆ.

ಈ ವಿಶೇಷ ಪಾತ್ರಕ್ಕಾಗಿ ಮಂಚು ಮನೋಜ್ ದೊಡ್ಡ ಮಟ್ಟದ ದೈಹಿಕ ಬದಲಾವಣೆಗೆ ಒಳಗಾಗುತ್ತಿದ್ದಾರೆ. ದೇಹವನ್ನು ಇನ್ನಷ್ಟು ಹುರಿಗೊಳಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಶರವೇಗದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಆದಷ್ಟು ಬೇಗ ಮನೋಜ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ಳಿತೆರೆಯ ಮೇಲೆ ನಂದಮೂರಿ ಬಾಲಕೃಷ್ಣ ಮತ್ತು ಮಂಚು ಮನೋಜ್ ಅವರ ನಡುವಿನ ಮುಖಾಮುಖಿ ಮತ್ತು ಇಬ್ಬರ ರಗಡ್ ಎನರ್ಜಿ ಚಿತ್ರದ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ತಮ್ಮದೇ ಮಿಮಿಕ್ರಿ ನೋಡಿ ಖುಷಿ ಪಟ್ಟ ನಂದಮೂರಿ ಬಾಲಕೃಷ್ಣ: ವಿಡಿಯೋ ನೋಡಿ

ವಾಸ್ತವದಲ್ಲಿ ಬಾಲಕೃಷ್ಣ ಮತ್ತು ಮಂಚು ಮನೋಜ್ ನಡುವೆ ಅತ್ಯಂತ ಆಪ್ತವಾದ ಬಾಂಧವ್ಯವಿದೆ. ಈ ಹಿಂದೆ ಮಂಚು ಮನೋಜ್ ನಟನೆಯ ‘ಊ ಕೊಡತಾರಾ ಉಲಿಕ್ಕಿ ಪಡತಾರಾ’ ಚಿತ್ರದಲ್ಲಿ ಬಾಲಕೃಷ್ಣ ಅವರು ಪ್ರಮುಖ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರಕ್ಕೆ ದೊಡ್ಡ ಶಕ್ತಿ ತುಂಬಿದ್ದರು. ಈಗ ಬಾಲಯ್ಯ ಅವರ ಚಿತ್ರದಲ್ಲೇ ಮನೋಜ್ ವಿಲನ್ ಆಗಿ ನಟಿಸುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ.

ಈ ಪ್ರಾಜೆಕ್ಟ್‌ಗೆ ಆಯ್ಕೆಯಾಗಿರುವುದರ ಬಗ್ಗೆ ಮಂಚು ಮನೋಜ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಗಾಡ್ ಫಾದರ್, ಲಯನ್ ನಂದಮೂರಿ ಬಾಲಕೃಷ್ಣ ಅವರೊಂದಿಗೆ ನಟಿಸಬೇಕೆಂಬುದು ನನ್ನ ಹಲವು ವರ್ಷಗಳ ಕನಸಾಗಿತ್ತು. ಈ ಜನ್ಮದಿನದಂದು ನನಗೆ ಸಿಕ್ಕ ಅತ್ಯಂತ ಸುಂದರ ಉಡುಗೊರೆ ಇದಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ‘ಮಿರಾಯ್’ ಮತ್ತು ‘ಭೈರವಂ’ ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಮಂಚು ಮನೋಜ್ ಈಗಾಗಲೇ ನಟಿಸಿದ್ದು, ಎರಡೂ ಸಿನಿಮಾಗಳಲ್ಲಿ ಅವರ ಪಾತ್ರ ಹಿಟ್ ಆಗಿದೆ. ಈಗ ಮತ್ತೊಮ್ಮೆ ದೊಡ್ಡ ಸಿನಿಮಾನಲ್ಲಿ ವಿಲನ್ ಆಗಿ ಮಿಂಚಲು ಬಾಲಯ್ಯ ರೆಡಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು