AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್ ಪಾರ್ಟಿ: ನಟಿ ಹೇಮಾ ಬೆಂಬಲಕ್ಕೆ ನಟ ಮಂಚು ವಿಷ್ಣು ಮತ್ತು ಕಲಾವಿದರ ಸಂಘ

ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ಕುರಿತಾಗಿ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಟ್ವೀಟ್ ಮಾಡಿದ್ದು, ಹೇಮಾ ಮೇಲೆ ಆಧಾರ ರಹಿತ ಆರೋಪಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

ರೇವ್ ಪಾರ್ಟಿ: ನಟಿ ಹೇಮಾ ಬೆಂಬಲಕ್ಕೆ ನಟ ಮಂಚು ವಿಷ್ಣು ಮತ್ತು ಕಲಾವಿದರ ಸಂಘ
ಮಂಜುನಾಥ ಸಿ.
|

Updated on: May 25, 2024 | 7:44 PM

Share

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಜಿಆರ್ ಫಾರ್ಮ್ಸ್​ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Hema), ಅಂದು ಪಾರ್ಟಿಯಲ್ಲಿ ಹಾಜರಿದ್ದರು ಎಂಬುದನ್ನು ಪೊಲೀಸ್ ಆಯುಕ್ತರು ಖಾತ್ರಿಪಡಿಸಿದ್ದಾರೆ. ಅಲ್ಲದೆ ಅಂದು ತೆಗೆದುಕೊಂಡಿದ್ದ ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿ ಹೇಮಾ ಮಾದಕ ವಸ್ತು ಸೇವಿಸಿದ್ದರು ಎಂಬುದು ಖಾತ್ರಿಯಾಗಿದೆ. ಇದರ ನಡುವೆ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ನಟಿ ಹೇಮಾ ಬೆಂಬಲಕ್ಕೆ ನಿಂತಿದ್ದು, ಹೇಮಾ ವಿರುದ್ಧ ಕೆಲ ಮಾಧ್ಯಮಗಳು ಆಧಾರ ರಹಿತ ಆರೋಪ ಮಾಡುತ್ತಿವೆ ಎಂದಿದ್ದಾರೆ.

ತೆಲುಗು ಕಲಾವಿದರ ಸಂಘದ ಅಧ್ಯಕ್ಷರಾಗಿರುವ ನಟ ಮಂಚು ವಿಷ್ಣು ಈ ಸಂಬಂಧ ಟ್ವೀಟ್ ಮಾಡಿದ್ದು, ‘ಇತ್ತೀಚೆಗೆ ನಡೆದಿದೆ ಎನ್ನಲಾದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಯಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳು ಹಾಗೂ ವ್ಯಕ್ತಿಗಳು ನಟಿ ಹೇಮಾ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಯಾರೂ ಸಹ ಈಗಲೇ ನಿರ್ಧಾರಕ್ಕೆ ಬಂದು ಸತ್ಯವಲ್ಲದ ವರದಿಗಳನ್ನು ಇತರರಿಗೆ ಹಂಚಿಕೊಳ್ಳುವುದು ಬೇಡ ಎಂದು ನಾನು ಮನವಿ ಮಾಡುತ್ತೇನೆ’ ಎಂದಿದ್ದಾರೆ.

‘ಹೇಮಾ ಮೇಲಿನ ಆರೋಪಗಳು ಸಾಬೀತಾಗುವವರೆಗೂ ಅವರು ನಿರಪರಾಧಿ. ಆಕೆ ಒಬ್ಬ ತಾಯಿ, ಹೆಂಡತಿ ಹಾಗೂ ಮಹಿಳೆ ಅದರ ಬಗ್ಗೆಯೂ ನಾವು ಯೋಚಿಸಬೇಕಿದೆ. ಆಕೆಯ ವ್ಯಕ್ತಿತ್ವದ ಬಗ್ಗೆ ಲಘುವಾದ ಹೇಳಿಕೆಗಳನ್ನು ಪಾಸ್ ಮಾಡುವುದು ಸೂಕ್ತವಲ್ಲ. ಮೂವಿ ಆರ್ಟಿಸ್ಟ್ ಅಸೋಸಿಯೇಷನ್ (ಮಾ) ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ವಿರೋಧಿಸುತ್ತದೆ. ಹೇಮಾ ಅವರ ವಿರುದ್ಧ ಪೊಲೀಸರು ಘನವಾದ ಸಾಕ್ಷಿಯನ್ನು ಸಾಭೀತುಪಡಿಸಿದರೆ ಕಲಾವಿದರ ಸಂಘವು ಹೇಮಾ ವಿರುದ್ಧ ಶಿಸ್ತು ಕ್ರಮವನ್ನು ಜರುಗಿಸಲಿದೆ. ಆದರೆ ಅಲ್ಲಿಯ ವರೆಗೆ ದಯವಿಟ್ಟು ಈ ವಿಷಯದ ಬಗ್ಗೆ ಸಂವೇದನಾರಹಿತವಾದ ಚರ್ಚೆ ಬೇಡ’ ಎಂದಿದ್ದಾರೆ.

ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ನಟಿ ಹೇಮಾ, ತೆಲುಗು ಕಲಾವಿದರ ಸಂಘದ ಪದಾಧಿಕಾರಿಯಾಗಿದ್ದಾರೆ. ಮಂಚು ವಿಷ್ಣು ಅವರ ಸಿಂಡಿಕೇಟ್​ನಿಂದಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಚುನಾವಣೆ ಸಮಯದಲ್ಲಿ ಗಲಾಟೆಯಾಗಿ ಎದುರಾಳಿ ಸಿಂಡಿಕೇಟ್​ಗೆ ಸೇರಿದ್ದ ಶಿವು ಬಾಲಾಜಿಯ ಕೈಯನ್ನು ಹೇಮಾ ಕಚ್ಚಿದ್ದರು.

ಇದೀಗ ಹೇಮಾ ಹೆಸರು ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದಿದೆ. ಹೇಮಾ, ವಿಡಿಯೋ ಒಂದನ್ನು ಬಿಡುಗಡೆ ಮಾಡಿ ತಾವು ರೇವ್ ಪಾರ್ಟಿಯಲ್ಲಿ ಇರಲಿಲ್ಲವೆಂದು ತಾವು ಹೈದರಾಬಾದ್​ನಲ್ಲಿ ಇರುವುದಾಗಿ ಹೇಳಿಕೊಂಡಿದ್ದರು. ಆದರೆ ಅಸಲಿಗೆ ಹೇಮಾ ಪಾರ್ಟಿಯಲ್ಲಿದ್ದರು ಎಂದು ಸ್ವತಃ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಅಲ್ಲದೆ, ಪರೀಕ್ಷೆಗೆ ಕಳಿಸಲಾಗಿದ್ದ ಹೇಮಾರ ರಕ್ತದ ಮಾದರಿಯ ವರದಿ ಪಾಸಿಟಿವ್ ಬಂದಿದ್ದು, ಹೇಮಾ ಡ್ರಗ್ಸ್ ಸೇವಿಸಿದ್ದರು ಎನ್ನಲಾಗುತ್ತಿದೆ. ನಟಿಯನ್ನು ಬೆಂಗಳೂರು ಪೊಲೀಸರು ಶೀಘ್ರವೇ ವಿಚಾರಣೆಗೆ ಕರೆಯಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್