AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಬೆನ್ನಲ್ಲೇ ಮತ್ತೆ ಪುಟಿದೇಳಲು ರೆಡಿ ಆದ ಮಣಿರತ್ನಂ; ದೊಡ್ಡ ಪ್ಲ್ಯಾನ್

'ಥಗ್ ಲೈಫ್' ಸೋಲಿನ ಬೆನ್ನಲ್ಲೇ ನಿರ್ದೇಶಕ ಮಣಿರತ್ನಂ ಮತ್ತೊಂದು ಎವರ್‌ಗ್ರೀನ್ ಪ್ರೇಮಕಥೆಯೊಂದಿಗೆ ಸಜ್ಜಾಗುತ್ತಿದ್ದಾರೆ. ವಿಜಯ್ ಸೇತುಪತಿ ಹಾಗೂ ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿರುವ ಈ ಹೊಸ ಚಿತ್ರದ ಶೂಟಿಂಗ್ ಕೋಲ್ಕತ್ತಾದ ಐತಿಹಾಸಿಕ ಹೌರಾ ಬ್ರಿಡ್ಜ್ ಬಳಿ ಆರಂಭವಾಗಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಸೋಲಿನ ಬೆನ್ನಲ್ಲೇ ಮತ್ತೆ ಪುಟಿದೇಳಲು ರೆಡಿ ಆದ ಮಣಿರತ್ನಂ; ದೊಡ್ಡ ಪ್ಲ್ಯಾನ್
ವಿಜಯ್,ಮಣಿ ರತ್ನಂ, ಸಾಯಿ ಪಲ್ಲವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 27, 2026 | 7:48 AM

Share

ಮುಖ್ಯಾಂಶಗಳು

  •  ಹೌರಾ ಬ್ರಿಡ್ಜ್ ಮೇಲೆ ಮಣಿರತ್ನಂ ಹೊಸ ಮ್ಯಾಜಿಕ್
  • ಸೋಲಿನ ಬಳಿಕ ತಮಗೆ ಇಷ್ಟವಾದ ಜೋನರ್‌ಗೆ ಮರಳಿದ ಸ್ಟಾರ್ ನಿರ್ದೇಶಕ
  • ಮೊದಲ ಬಾರಿಗೆ ಮಣಿರತ್ನಂ ಚಿತ್ರದಲ್ಲಿ ಸಾಯಿ ಪಲ್ಲವಿ

ಖ್ಯಾತ ನಿರ್ದೇಶಕ ಮಣಿರತ್ನಂ (Maniratnam) ನಿರ್ದೇಶನದ ಕೊನೆಯ ಸಿನಿಮಾ ‘ಥಗ್ ಲೈಫ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ಸಿನಿಮಾ ಹೀನಾಯ ಸೋಲು ಕಂಡಿತು. ಇಂದಿನ ಜನರ ಇಷ್ಟಕ್ಕೆ ತಕ್ಕಂತೆ ಅವರು ಕಥೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹಲವರು ಸಲಹೆ ನೀಡಿದ್ದರು. ಹೀಗಾಗಿ, ಮಣಿರತ್ನಂ ಈಗ ತಮಗೆ ಅತ್ಯಂತ ಹಿಡಿತವಿರುವ ರೋಮ್ಯಾಂಟಿಕ್ ಕಥೆಗಳ ಜೋನರ್‌ಗೆ ಮರಳಿದ್ದಾರೆ ಎಂದು ವರದಿ ಆಗಿದೆ.

ಮಣಿರತ್ನಂ ಕೋಲ್ಕತ್ತಾದ ಹೌರಾ ಬ್ರಿಡ್ಜ್ ಹಿನ್ನೆಲೆ ಇಟ್ಟುಕೊಂಡು ಹೊಸ ಕಥೆಯೊಂದನ್ನು ಹೆಣೆಯುತ್ತಿದ್ದಾರೆ. ತಮ್ಮ ಕೊನೆಯ ಸಿನಿಮಾ ಸೋಲಿನ ಬಳಿಕ ಅವರು ಮತ್ತೊಮ್ಮೆ ಪ್ರೇಮಕಥೆಯನ್ನೇ ಕೈಗೆತ್ತಿಕೊಂಡಿದ್ದಾರೆ. ವಿಜಯ್ ಸೇತುಪತಿ ಹಾಗೂ ಸಾಯಿ ಪಲ್ಲವಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಸಿನಿರಂಗದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕೋಲ್ಕತ್ತಾದ ಸುಂದರ ಪರಿಸರದಲ್ಲಿ ಚಿತ್ರದ ಶೂಟಿಂಗ್ ಈಗ ಭರದಿಂದ ಸಾಗುತ್ತಿದೆ.

ಮಣಿರತ್ನಂ ಕೊನೆಯದಾಗಿ 2009ರ ‘ರಾವಣ್’ ಸಿನಿಮಾಗಾಗಿ ಕೋಲ್ಕತ್ತಾದಲ್ಲಿ ಶೂಟಿಂಗ್ ಮಾಡಿದ್ದರು. ಈಗ ದಶಕಗಳ ಬಳಿಕ ಮತ್ತೆ ಪ್ರೇಮಕಾವ್ಯವನ್ನು ತೆರೆಗೆ ತರಲು ಈ ಸುಂದರ ನಗರವನ್ನು ಆರಿಸಿಕೊಂಡಿದ್ದಾರೆ. ಹೌರಾ ಬ್ರಿಡ್ಜ್ ಈಗಾಗಲೇ ಹಲವು ಎವರ್‌ಗ್ರೀನ್ ಪ್ರೇಮಕಥೆಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಮಣಿರತ್ನಂ ಅವರು ವಿಜಯ್ ಸೇತುಪತಿ ಜೊತೆ ‘ಚೆಕ್ಕ ಚಿವಂತ ವಾನಮ್’ ಬಳಿಕ ಎರಡನೇ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಆದರೆ ನಟಿ ಸಾಯಿ ಪಲ್ಲವಿ ಅವರೊಂದಿಗೆ ಮಣಿರತ್ನಂಗೆ ಇದು ಮೊದಲ ಸಿನಿಮಾವಾಗಿದೆ. ಈ ಚಿತ್ರವನ್ನು ಮದ್ರಾಸ್ ಟಾಕೀಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸುತ್ತಿದೆ. ಈ ಮೊದಲು ವೇದಿಕೆ ಒಂದರಲ್ಲಿ ಸಾಯಿ ಪಲ್ಲವಿಗೆ ವೇದಿಕೆ ಮೇಲೆಯೇ ಸಾಯಿ ಪಲ್ಲವಿಗೆ ಸಿನಿಮಾ ಆಫರ್ ಕೊಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ