ಬಹುತಾರಾಗಣದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗ ‘ಪೊನ್ನಿಯಿನ್ ಸೆಲ್ವನ್’ ಟ್ರೇಲರ್ (Ponniyin Selvan Trailer) ಬಿಡುಗಡೆ ಮಾಡಲಾಗಿದೆ. ಚೋಳ ಸಾಮ್ರಾಜ್ಯದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಿರ್ದೇಶಕ ಮಣಿರತ್ನಂ (Mani Ratnam) ಅವರು ಅದ್ದೂರಿಯಾಗಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷಿ ಒದಗಿಸುತ್ತಿದೆ. ಎಲ್ಲ ಕಲಾವಿದರ ಪಾತ್ರಗಳೂ ಟ್ರೇಲರ್ನಲ್ಲಿ ಹೈಲೈಟ್ ಆಗಿವೆ. ಐಶ್ವರ್ಯಾ ರೈ ಬಚ್ಚನ್, ವಿಕ್ರಮ್, ತ್ರಿಷಾ, ಜಯಂ ರವಿ, ಕಾರ್ತಿ, ಪ್ರಕಾಶ್ ರಾಜ್ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆ.30ರಂದು ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿದೆ.
ಎರಡು ಭಾಗದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಮೊದಲ ಭಾಗದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಕೃತಿಯನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಈ ಮೊದಲು ಅನಾವರಣ ಆಗಿದ್ದ ‘ಪೊನ್ನಿ ನದಿ..’ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಈಗ ಟ್ರೇಲರ್ ಅಬ್ಬರಿಸುತ್ತಿದೆ. ಬೃಹತ್ ಸೆಟ್ಗಳು, ಮೈ ನವಿರೇಳಿಸುವ ಸಾಹಸ ಸನ್ನಿವೇಶ, ಅದ್ದೂರಿ ಮೇಕಿಂಗ್ ಮುಂತಾದವರು ಈ ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಸಿನಿಮಾದ ಕಥೆ ಏನು ಎಂಬುದರ ಎಳೆಯನ್ನು ಬಿಟ್ಟುಕೊಡಲಾಗಿದೆ. ಪ್ರೇಕ್ಷಕರಿಗೆ ಈ ಟ್ರೇಲರ್ ಇಷ್ಟವಾಗಿದೆ. ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.
ಮಣಿರತ್ನಂ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳು ವಿಶೇಷ ಆಸಕ್ತಿ ತೋರಿಸುತ್ತಾರೆ. ಚೋಳ ಸಾಮ್ರಾಜ್ಯದ ಐತಿಹಾಸಿಕ ಕಥೆಯನ್ನು ಅವರು ತೆರೆಗೆ ತರುತ್ತಿದ್ದು, ಅವರಿಗೆ ಪ್ರತಿಭಾವಂತ ಕಲಾವಿದರು ಸಾಥ್ ನೀಡಿದ್ದಾರೆ. ಎ.ಆರ್. ರೆಹಮಾನ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ.
ಮಣಿರತ್ನಂ ಜೊತೆಗೆ ನಟಿ ಐಶ್ವರ್ಯಾ ರೈ ಬಚ್ಚನ್ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು. ಈ ಮೊದಲು ‘ಇರುವರ್’, ‘ಗುರು’ ಮತ್ತು ‘ರಾವಣ್’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಅಭಿಮಾನಿಗಳ ವಲಯದಲ್ಲಿ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ಕೌತುಕ ನಿರ್ಮಾಣ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.