ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ

|

Updated on: Apr 24, 2024 | 10:47 AM

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.

ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ
ಮಂಜುಮ್ಮೇಲ್ ಬಾಯ್ಸ್
Follow us on

ಮಲಯಾಳಂ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ಸೂಪರ್ ಹಿಟ್ ಎನಿಸಿಕೊಂಡಿದೆ. 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಕೊನೆಗೂ ಇದಕ್ಕೆ ಮುಹೂರ್ತ ಕೂಡ ಬಂದಿದೆ. ಈ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಕಡೆಯಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಶೀಘ್ರವೇ ಒಟಿಟಿಗೆ ಬರಲಿದೆ ಎಂದು ತಿಳಿಸಲಾಗಿದೆ. ಈ ವಿಚಾರ ಸಿನಿಪ್ರಿಯರ ಖುಷಿ ಹೆಚ್ಚಿಸಿದೆ.

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.  ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲೂ ಪ್ರಸಾರ ಆಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಮೂಲಕ ಎಲ್ಲಾ ಭಾರತದ ಎಲ್ಲಾ ಪ್ರಮುಖ ಭಾಷಿಗರಿಗೆ ಸಿನಿಮಾ ತಲುಪಲಿದೆ.

ಮೇ 3?

ಕೆಲವು ವರದಿಗಳ ಪ್ರಕಾರ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮೇ 3ರಂದು ಒಟಿಟಿಯಲ್ಲಿ ರಿಲೀಸ್ ಆಗಲಿದೆಯಂತೆ. ಈ ಚಿತ್ರವನ್ನು ಚಿದಂಬರಂ ಅವರು ನಿರ್ದೇಶನ ಮಾಡಿದ್ದಾರೆ. ಸೌಬಿನ್ ಶಬೀರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಬೀರ್ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ತೆಲುಗಿನಲ್ಲಿ ಮ್ಯಾಜಿಕ್ ಮಾಡುತ್ತಾ ‘ಮಂಜುಮ್ಮೇಲ್ ಬಾಯ್ಸ್’? ಕನ್ನಡದಲ್ಲಿ ಯಾವಾಗ?

ಏನು ಕಥೆ?

ಕೊಡೆಕೆನಲ್​ನಲ್ಲಿರುವ ‘ಗುಣ ಕೇವ್​’ಗೆ ಮಂಜುಮ್ಮೇಲ್ ಊರಿನ ಕೆಲವರು ಟ್ರಿಪ್ ತೆರಳಿದ್ದರು. ಇದರಲ್ಲಿ ಓರ್ವ ವ್ಯಕ್ತಿ ಗುಹೆ ಒಳಗೆ ಬಿದ್ದು ಹೋಗುತ್ತಾನೆ. ಆತನ ರಕ್ಷಿಸೋ ಕಥೆಯನ್ನು ಈ ಸಿನಿಮಾ ಹೊಂದಿದೆ. 2006ರಲ್ಲಿ ನಡೆದ ಈ ಘಟನೆ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Wed, 24 April 24