Manoranjan Ravichandran Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರವಿಚಂದ್ರನ್ ಪುತ್ರ: ಇಲ್ಲಿದೆ ವಿಡಿಯೋ
Manoranjan Ravichandran Marriage Video: ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ಹಂಸಲೇಖಾ, ರಾಕ್ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖ ಉಪಸ್ಥಿತರಿದ್ದರು.
ಸ್ಯಾಂಡಲ್ವುಡ್ನ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ (Ravichandran) ಅವರ ಹಿರಿಯ ಪುತ್ರ ನಟ ಮನೋರಂಜನ್ (Manoranjan Ravichandran) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 21 ರಂದು 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಸಂಗೀತಾ ಎಂಬವರನ್ನು ವರಿಸಿದ್ದಾರೆ. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿನ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ನಡೆದ ಶುಭಘಳಿಗೆಯಲ್ಲಿ ಚಿತ್ರರಂಗದ ಕೆಲ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.
ಇದೇ ವೇಳೆ ರವಿಚಂದ್ರನ್ ಅವರ ಆಪ್ತರೆನಿಸಿಕೊಂಡಿರುವ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ನಟ ಶರಣ್, ಹಂಸಲೇಖಾ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖ ಉಪಸ್ಥಿತರಿದ್ದರು.
2017 ರಲ್ಲಿ ಸಾಹೇಬ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಮನೋರಂಜನ್ ಆ ಬಳಿಕ ಬೃಹಸ್ಪತಿ, ಮುಗಿಲ್ಪೇಟೆ, ಪ್ರಾರಂಭ ಹೆಸರಿನ ಚಿತ್ರಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದೀಗ ಕುಟುಂಬಸ್ಥರ ಆಶೀರ್ವಾದದೊಂದಿಗೆ ಮನೋರಂಜನ್ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ.
ಇನ್ನು ಇಂದು ಸಂಜೆ ಅರಮನೆ ಮೈದಾನದ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ಆರಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು ಹಾಗೂ ಕೆಲ ರಾಜಕಾರಣಿಗಳು ಭಾಗವಹಿಸುವ ನಿರೀಕ್ಷೆಯಿದೆ.