Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್ ಪಟವರ್ಧನ್ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ
Pradeep Patwardhan Death: ಪ್ರದೀಪ್ ಪಟವರ್ಧನ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅವರ ನಿಧನದಿಂದ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.
ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್ ಪಟವರ್ಧನ್ (Pradeep Patwardhan) ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರದೀಪ್ ಪಟವರ್ಧನ್ ಅಗಲಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸಂತಾಪ ಸೂಚಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಪ್ರದೀಪ್ ಪಟವರ್ಧನ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅವರ ನಿಧನದಿಂದ ಇಡೀ ಮರಾಠಿ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.
ರಂಗಭೂಮಿ ಹಿನ್ನೆಲೆಯಿಂದ ಬಂದ ಪ್ರದೀಪ್ ಪಟವರ್ಧನ್ ಅವರು ಪ್ರತಿಭಾವಂತ ಕಲಾವಿದನಾಗಿದ್ದರು. ಅವರ ಜೊತೆ ಚಿತ್ರರಂಗದ ಅನೇಕರಿಗೆ ಅತ್ಯುತ್ತಮ ಒಡನಾಟ ಇತ್ತು. ಅನೇಕ ಸಿನಿಮಾ ಮತ್ತು ಕಿರುತೆರೆ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಬಾಲಿವುಡ್ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದರು.
मराठी रंगभूमीवरील मोरूची मावशी, बायको असून शेजारी, लग्नाची बेडी तसेच मराठी चित्रपटसृष्टीत आपल्या सहजसुंदर अभिनयाने रसिक प्रेक्षकांच्या हृदयावर अधिराज्य गाजवणारे सदाबहार अभिनेते प्रदीप पटवर्धन यांचे दुःखद निधन झाले. त्यांच्या जाण्याने मराठी कलासृष्टीने उमद्या कलावंताला गमावले आहे. pic.twitter.com/CVjESFYCkf
— Eknath Shinde – एकनाथ शिंदे (@mieknathshinde) August 9, 2022
‘ಮರಾಠಿ ಸಿನಿಮಾಗಳಲ್ಲಿನ ತಮ್ಮ ಅದ್ಭುತ ನಟನೆಯಿಂದಾಗಿ ಪ್ರದೀಪ್ ಪಟವರ್ಧನ್ ಅವರು ಪ್ರೇಕ್ಷಕರ ಹೃದಯ ಗೆದ್ದಿದ್ದರು. ಇಂದು ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮರಾಠಿ ಕಲಾ ಪ್ರಪಂಚಕ್ಕೆ ತೀವ್ರ ನಷ್ಟ ಆಗಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮಾಡಿದ್ದಾರೆ.
ನಟಿ ರೇಣುಕಾ ಶಹಾನೆ ಅವರು ಸಂತಾಪ ಸೂಚಿಸಿದ್ದಾರೆ. ‘ಪಟ್ಯಾ ದಾದಾ.. ಯಾಕೆ ನಮ್ಮನ್ನು ಬಿಟ್ಟು ಹೋದ್ರಿ. ಇದು ನಿಜಕ್ಕೂ ಆತಂಕಕಾರಿ ಆಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಾನು ಮೊದಲ ಬಾರಿಗೆ ವೃತ್ತಿಪರ ನಾಟಕ ಮಾಡಿದ್ದು ನಿಮ್ಮ ಜೊತೆ. ನನ್ನ ಪಾಲಿಗೆ ನೀವು ತುಂಬ ವಿಶೇಷ ವ್ಯಕ್ತಿ ಆಗಿದ್ರಿ. ನಿಮ್ಮ ನೆನಪುಗಳು ಹೃದಯದಲ್ಲಿವೆ. ತುಂಬ ಬೇಗ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದು ನಟ ರೋಹನ್ ಪೆಡ್ನೇಕರ್ ಬರೆದುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:06 pm, Tue, 9 August 22