ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

ಮೀರಾ ಕಾಲಿವುಡ್​ನಲ್ಲಿ ಅಷ್ಟು ಚಿರಪರಿಚಿತ ಮುಖವಲ್ಲ. ಅವರು ನಟಿಸಿದ್ದು ಬೆರಳೆಣಿಕೆ ಸಿನಿಮಾಗಳು. ಮೀರಾಗೆ, ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಪಾತ್ರ ಸಿಕ್ಕಿಲ್ಲ.

ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ
ಮೀರಾ ಮಿಥುನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 14, 2021 | 4:17 PM

ಜಾತಿ ನಿಂದನೆ ಆರೋಪದಡಿ ಕಾಲಿವುಡ್​ ನಟಿ, ಮಾಡೆಲ್​ ಹಾಗೂ ತಮಿಳು ಬಿಗ್​ ಬಾಸ್​ ಮಾಜಿ ಸ್ಪರ್ಧಿ ಮೀರಾ ಮಿಥುನ್​ ಅವರನ್ನು ಕೇಂದ್ರ ಅಪರಾಧ ತನಿಖಾ ದಳ ಇಂದು (ಆಗಸ್ಟ್ 14) ಬಂಧಿಸಿದೆ. ಇದಕ್ಕೂ ಮೊದಲು ಅವರು ಕೂಗಾಟ ನಡೆಸಿದ್ದು, ವಿಡಿಯೋ ವೈರಲ್​ ಆಗಿದೆ.

‘ಅನೈತಿಕ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಂಡಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಾರೆ. ಕಾರಣ ಇಲ್ಲದೇ ಯಾರೂ ಯಾರ ಬಗ್ಗೆಯೂ ಕೆಟ್ಟದ್ದು ಮಾತನಾಡುವುದಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಕಾರಣ. ಅಂಥವರನ್ನೆಲ್ಲ ಚಿತ್ರರಂಗದಿಂದ ತೊಲಗಿಸಲು ಇದು ಸರಿಯಾದ ಸಮಯ ಅಂತ ನನಗೆ ಅನಿಸುತ್ತದೆ’ ಎಂದು ಸಂದರ್ಶನವೊಂದರಲ್ಲಿ ಮೀರಾ ಹೇಳಿಕೆ ನೀಡಿದ್ದರು.

ಮೀರಾ ಮಿಥುನ್​ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಜಾತಿ ನಿಂದನೆ ಆರೋಪದಡಿಯಲ್ಲಿ ಮೀರಾ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಅವರಿಗೆ ಸಮನ್ಸ್​ ಜಾರಿ ಮಾಡಿದ್ದರು. ಈಗ ಮೀರಾ ಬಂಧನ ನಡೆದಿದೆ. ನಟಿ ವಿರುದ್ಧ ಐಪಿಸಿ ಸೆಕ್ಷನ್​ 153, 153ಎ(1)(ಎ), 505(1)(ಬಿ), 505 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಧನಕ್ಕೂ ಮೊದಲು ಮೀರಾ ಲೈವ್​ ಬಂದಿದ್ದಾರೆ. ಈ ವೇಳೆ ಪೊಲೀಸರು ಮೊಬೈಲ್​ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಮೀರಾ ನಿರಾಕರಿಸಿದ್ದಾರೆ. ಅಲ್ಲದೆ, ಪೊಲೀಸರು ನನಗೆ ಕಿರುಕುಳ ನೀಡೋಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಂಪಾಟ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಕೂಡ ವೈರಲ್​ ಆಗಿದೆ.

ಮೀರಾ ಕಾಲಿವುಡ್​ನಲ್ಲಿ ಅಷ್ಟು ಚಿರಪರಿಚಿತ ಮುಖವಲ್ಲ. ಅವರು ನಟಿಸಿದ್ದು ಬೆರಳೆಣಿಕೆ ಸಿನಿಮಾಗಳು. ಮೀರಾಗೆ, ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಪಾತ್ರ ಸಿಕ್ಕಿಲ್ಲ. ತಮಿಳು ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ಮೀರಾ ಎಂಟ್ರಿ ಕೊಟ್ಟಿದ್ದರು. ನಂತರ ಅವರ ಜನಪ್ರಿಯತೆ ಕೊಂಚ ಹೆಚ್ಚಿತ್ತು.

ಇದನ್ನೂ ಓದಿ: ‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​

ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ