AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್​ ಪಡೆದ ರಾಮನ ಪಾತ್ರಧಾರಿ ಅರುಣ್​ ಗೋವಿಲ್​ ಪ್ರತಿಕ್ರಿಯೆ ಏನು?

72 ವರ್ಷ ವಯಸ್ಸಿನ ನಟ ಅರುಣ್​ ಗೋವಿಲ್​ ಅವರು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಸ್ವಕ್ಷೇತ್ರವಾದ ಮೀರತ್​ನಲ್ಲಿ ಅವರಿಗೆ ಟಿಕೆಟ್​ ಸಿಕ್ಕಿದೆ. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಅವರು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುಲು ಸಜ್ಜಾಗಿದ್ದಾರೆ. ಈ ಅವಕಾಶ ನೀಡಿದ್ದಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ.

ಬಿಜೆಪಿ ಟಿಕೆಟ್​ ಪಡೆದ ರಾಮನ ಪಾತ್ರಧಾರಿ ಅರುಣ್​ ಗೋವಿಲ್​ ಪ್ರತಿಕ್ರಿಯೆ ಏನು?
ಅರುಣ್​ ಗೋವಿಲ್​
ಮದನ್​ ಕುಮಾರ್​
|

Updated on: Mar 26, 2024 | 8:19 PM

Share

ಜನಮೆಚ್ಚಿದ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್​ ಗೋವಿಲ್​ (Arun Govil) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್​ ಸಿಕ್ಕಿದೆ. ಉತ್ತರ ಪ್ರದೇಶದ ಮೀರತ್​ ಲೋಕಸಭಾ ಕ್ಷೇತ್ರದಿಂದ ಅರುಣ್​ ಗೋವಿಲ್​ ಅವರು ಸ್ಪರ್ಧಿಸಲಿದ್ದಾರೆ. ಅವರಿಗೆ ಟಿಕೆಟ್​ ಸಿಕ್ಕಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ತಮಗೆ ಈ ಅವಕಾಶ ನೀಡಿರುವುದಕ್ಕೆ ಅರುಣ್​ ಗೋವಿಲ್​ ಅವರು ಬಿಜೆಪಿ (BJP) ಹಾಗೂ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ದಿನದಿಂದ ದಿನಕ್ಕೆ ಚುನಾವಣೆಯ ಕಾವು ಹೆಚ್ಚುತ್ತಿದೆ.

‘ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್​ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ. ಜೈ ಶ್ರೀರಾಮ್​’ ಎಂದು ಅರುಣ್​ ಗೋವಿಲ್​ ಅವರು ಎಕ್ಸ್​ (ಟ್ವಿಟರ್) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಅರುಣ್​ ಗೋವಿಲ್​ ಎಕ್ಸ್​ (ಟ್ವಿಟರ್) ಪೋಸ್ಟ್​:

72 ವರ್ಷ ಪ್ರಾಯದ ಅರುಣ್​ ಗೋವಿಲ್​ ಅವರು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಸ್ವಕ್ಷೇತ್ರವಾದ ಮೀರತ್​ನಲ್ಲೇ ಅವರಿಗೆ ಟಿಕೆಟ್​ ಸಿಕ್ಕಿದೆ. ಸಿನಿಮಾ ಮಂದಿ ರಾಜಕೀಯಕ್ಕೆ ಕಾಲಿಡುವುದು ಹೊಸದೇನೂ ಅಲ್ಲ. ಈ ಬಾರಿ ಕಂಗನಾ ರಣಾವತ್​, ಅರುಣ್​ ಗೋವಿಲ್ ಸೇರಿದಂತೆ ಒಂದಷ್ಟು ಮಂದಿ ಸೆಲೆಬ್ರಿಟಿಗಳು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಪಡೆದಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ನಟ ಅರುಣ್​ ಗೋವಿಲ್ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. 1987-1988ರಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಅವರು ದೇಶಾದ್ಯಂತ ಫೇಮಸ್​ ಆದರು. ದೂರದರ್ಶನದಲ್ಲಿ ಆ ಸೀರಿಯಲ್​ ಪ್ರಸಾರ ಕಂಡಿತ್ತು. ಲಾಕ್​ಡೌನ್​ ಸಮಯದಲ್ಲಿ ಮತ್ತೆ ಮರು ಪ್ರಸಾರ ಮಾಡಲಾಗಿತ್ತು. ಇತ್ತೀಚೆಗೆ ಬಿಡುಗಡೆ ಆದ ಬಾಲಿವುಡ್​ನ ‘ಆರ್ಟಿಕಲ್​ 370’ ಸಿನಿಮಾದಲ್ಲಿ ಅರುಣ್​ ಗೋವಿಲ್​ ನಟಿಸಿದ್ದು, ನರೇಂದ್ರ ಮೋದಿಯವರ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಹಿಟ್​ ಆಗಿದೆ. 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್