AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ನಟನೆಯ 156ನೇ ಸಿನಿಮಾಕ್ಕೆ ಹೆಸರು ಸಿಕ್ಕಿತು

Chiranjeevi: ಕಳೆದ ಎರಡು ವರ್ಷದಿಂದ ಸತತ ಸೋಲುಗಳನ್ನು ಕಂಡಿದ್ದ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದು ಈ ಸಿನಿಮಾದ ಹೆಸರು ಘೋಷಿಸಲಾಗಿದೆ.

ಚಿರಂಜೀವಿ ನಟನೆಯ 156ನೇ ಸಿನಿಮಾಕ್ಕೆ ಹೆಸರು ಸಿಕ್ಕಿತು
ಮಂಜುನಾಥ ಸಿ.
|

Updated on: Jan 16, 2024 | 9:28 PM

Share

ಮೆಗಾಸ್ಟಾರ್ ಚಿರಂಜೀವಿ (Chiranjeevi) ಒಂದರ ಹಿಂದೊಂದು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆದರೆ ದೊಡ್ಡ ಗೆಲುವು ಚಿರಂಜೀವಿಗೆ ಸಿಗುತ್ತಿಲ್ಲ. ಮೆಗಾಸ್ಟಾರ್ ಆಗಿದ್ದರೂ ಸಹ ಇತ್ತೀಚೆಗೆ ಸತತ ಸೋಲುಗಳನ್ನು ಕಂಡಿದ್ದಾರೆ. ಕೋವಿಡ್ ಬಳಿಕ ಬಿಡುಗಡೆ ಆದ ಚಿರಂಜೀವಿಯ ನಾಲ್ಕು ಸಿನಿಮಾಗಳಲ್ಲಿ ಒಂದು ಸಿನಿಮಾ ಮಾತ್ರ ಸಾಧಾರಣ ಯಶಸ್ಸು ಕಂಡಿತು. ಸತತ ರೀಮೇಕ್, ಅದೇ ಮಾಸ್ ಮಸಾಲೆ ಸಿನಿಮಾಗಳು ಮಾಡುತ್ತಿದ್ದ ಚಿರಂಜೀವಿ ಇದೀಗ ತಮ್ಮ 156ನೇ ಸಿನಿಮಾಕ್ಕೆ ಹೊಸ ರೀತಿಯ ಕತೆ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಆ ಸಿನಿಮಾಕ್ಕೆ ಹೆಸರು ಸಹ ಇಡಲಾಗಿದೆ.

ಇದನ್ನೂ ಓದಿ:ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ

ಚಿರು ನಟಿಸುತ್ತಿರುವ 156ನೇ ಸಿನಿಮಾದ ಟೈಟಲ್ ಟೀಸರ್ ಸಂಕ್ರಾಂತಿ ವಿಶೇಷವಾಗಿ ಬಿಡುಗಡೆಯಾಗಿದೆ. ‘ಜಗದೇಕ ವೀರುಡು ಅತಿಲೋಕ ಸುಂದರಿ’, ‘ಅಂಜಿ’ ಸಿನಿಮಾದ ಬಳಿಕ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಫ್ಯಾಂಟಸಿ ಕತೆ ಆಧರಿಸಿದ ಸಿನಿಮಾದಲ್ಲಿ ಚಿರಂಜೀವಿ ನಟಿಸುತ್ತಿದ್ದು, ಸಿನಿಮಾಕ್ಕೆ ‘ವಿಶ್ವಂಭರ’ ಎಂದು ಹೆಸರಿಡಲಾಗಿದೆ. ಈ ಟೈಟಲ್ ಟೀಸರ್ ನಲ್ಲಿ ಗ್ರಾಫಿಕ್ಸ್ ಕೆಲಸ ಎದ್ದು ಕಾಣುತ್ತಿದೆ. ಈ ಮೆಗಾ ಫ್ಯಾಂಟಸಿ ಸಾಹಸವನ್ನು ‘ಬಿಂಬಿಸಾರ’ ಸಿನಿಮಾ ನಿರ್ದೇಶಿಸಿದ್ದ ವಸಿಷ್ಠ ನಿರ್ದೇಶನ ಮಾಡುತ್ತಿದ್ದಾರೆ. ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ವಿಕ್ರಮ್, ವಂಶಿ ಮತ್ತು ಪ್ರಮೋದ್ ಬಂಡಾಳ ಹೂಡುತ್ತಿದ್ದಾರೆ. ಈ ಸಿನಿಮಾ ಚಿರಂಜೀವಿಯ ಈವರೆಗಿನ ದೊಡ್ಡ ಬಜೆಟ್ ಚಿತ್ರವಾಗಿದೆ.

‘ವಿಶ್ವಂಭರ’ ಸಿನಿಮಾಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಚೋಟಾ ಕೆ ನಾಯ್ಡು ಛಾಯಾಗ್ರಹಣ ಮಾಡಲಿದ್ದಾರೆ. ಎಎಸ್ ಪ್ರಕಾಶ್ ನಿರ್ಮಾಣ ವಿನ್ಯಾಸ, ಚಿರಂಜೀವಿ ಪುತ್ರಿ ಸುಶ್ಮಿತಾ ಕೊನಿಡೇಲ ವಸ್ತ್ರ ವಿನ್ಯಾಸ ಮಾಡಲಿದ್ದಾರೆ. ಕೋಟಗಿರಿ ವೆಂಕಟೇಶ್ವರರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಎಡಿಟಿಂಗ್ ಮಾಡಲಿದ್ದಾರೆ. ಶ್ರೀ ಶಿವಶಕ್ತಿ ದತ್ತ ಮತ್ತು ಆಸ್ಕರ್ ವಿಜೆತ ಚಂದ್ರಬೋಸ್ ಗೀತ ರಚನೆ ಮಾಡಿದ್ದಾರೆ. ಶ್ರೀನಿವಾಸ್ ಗವಿರೆಡ್ಡಿ, ಗಂಟಾ ಶ್ರೀಧರ್, ನಿಮ್ಮಗಡ್ಡ ಶ್ರೀಕಾಂತ್ ಮತ್ತು ಮಯೂಖ್ ಆದಿತ್ಯ ಅವರು ಚಿತ್ರಕಥೆ ಸಹಾಯಕರಾಗಿದ್ದಾರೆ. 2025 ರ ಸಂಕ್ರಾಂತಿಗೆ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್