AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಹೆಸರಲ್ಲಿ ಇದೆ ಅಪರೂಪದ ಗಿನ್ನಿಸ್ ದಾಖಲೆ

ಚಿರಂಜೀವಿ ಅವರು 70ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರು ಭಾರತೀಯ ಚಿತ್ರರಂಗದಲ್ಲಿ 46 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. 156 ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅದ್ಭುತ ನೃತ್ಯ ಕೌಶಲ್ಯಕ್ಕಾಗಿ ಅವರಿಗೆ ಗಿನ್ನೆಸ್ ವಿಶ್ವ ದಾಖಲೆ ದೊರೆತಿದೆ. ಕಳೆದ ವರ್ಷ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯೂ ಸಂದಿದೆ.

ಚಿರಂಜೀವಿ ಹೆಸರಲ್ಲಿ ಇದೆ ಅಪರೂಪದ ಗಿನ್ನಿಸ್ ದಾಖಲೆ
ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 22, 2025 | 8:00 AM

Share

ನಟ ಮೆಗಾ ಸ್ಟಾರ್​ ಚಿರಂಜೀವಿ (Chiranjeevi) ಅವರಿಗೆ ಇಂದು (ಆಗಸ್ಟ್ 22) ಬರ್ತ್​ಡೇ ಸಂಭ್ರಮ. ಅವರು ಈ ವರ್ಷ 70ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರು ಈ ವಯಸ್ಸಿನಲ್ಲೂ ಆ್ಯಕ್ಷನ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರಿಗೆ ಕಳೆದ ವರ್ಷ ತುಂಬಾನೇ ವಿಶೇಷ ಎನಿಸಿಕೊಂಡಿತ್ತು. ಆ ವರ್ಷ ಅವರಿಗೆ ಅನೇಕ ಪುರಸ್ಕಾರಗಳು ಸಿಕ್ಕವು. ಚಿರಂಜೀವಿ ಹೆಸರಲ್ಲಿ ಒಂದು ವಿಶೇಷ ಗಿನ್ನಿಸ್ ರೆಕಾರ್ಡ್ ಇದೆ ಎಂಬುದು ನಿಮಗೆ ಗೊತ್ತೇ? ಆ ಬಗ್ಗೆ ನಾವು ಇಲ್ಲಿ ಹೇಳುತ್ತಿದ್ದೇವೆ.

ಚಿರಂಜೀವಿ ಅವರಿಗೆ ಕಳೆದ ವರ್ಷ ‘ಪದ್ಮ ವಿಭೂಷಣ’ ಪ್ರಶಸ್ತಿ ಸಿಕ್ಕಿದೆ. ಕೇಂದ್ರ ಸರ್ಕಾರ ನೀಡುವ ಈ ವಿಶೇಷ ಗೌರವಕ್ಕೆ ಅವರು ಭಾಜನರಾಗಿದ್ದಾರೆ. ಇದಲ್ಲದೆ, ಅವರ ಹೆಸರು ಗಿನ್ನಿಸ್​ ದಾಖಲೆಯಲ್ಲಿದೆ. ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್​ ಪ್ರೊಫೈಲಿಕ್ ಸ್ಟಾರ್​’ ಎಂದು ಪ್ರಮಾಣಪತ್ರ ನೀಡಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಈ ಗೌರವ ಸಿಕ್ಕಿದೆ.

ಚಿರಂಜೀವಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1978ರಲ್ಲಿ. ಅವರು ಚಿತ್ರರಂಗಕ್ಕೆ ಬಂದು 46 ವರ್ಷಗಳ ಮೇಲೆ ಆಗಿದೆ. ಈವರೆಗೂ 156 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ತಮ್ಮ ವೃತ್ತಿ ಜೀವನದಲ್ಲಿ ಈವರೆಗಿನ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಅವರು ಮಾಡಿದ ಸ್ಟೆಪ್ಸ್ 24 ಸಾವಿರ. ಈ ಕಾರಣಕ್ಕೆ ಅವರು ಹೆಸರು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ನಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ
Image
ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ಪ್ರೈವೆಟ್ ಜೆಟ್ ಒಡೆಯ
Image
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ
Image
ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ನಿಲುವೇನು?|
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಕಳೆದ ವರ್ಷ ಚಿರಂಜೀವಿ ಅವರಿಗೆ ಈ ವಿಶೇಷ ಪ್ರಮಾಣ ಪತ್ರ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ದತ್ತ, ಬಿ. ಗೋಪಾಲ್, ಸುರೇಶ್​ ಬಾಬು, ಅಲ್ಲು ಅರವಿಂದ್​, ರಾಘವೇಂದ್ರ ರಾವ್, ಬಾಬಿ, ಗುಣಶೇಖರ್​, ವಸಿಷ್ಠ, ಸುಷ್ಮಿತಾ, ವೈಷ್ಣವ್​ ತೇಜ್​ ವರುಣ್​ ತೇಜ್ ಮೊದಲಾದವರು ಆಗಮಿಸಿದ್ದರು. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದರು.

ಇದನ್ನೂ ಓದಿ: ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ರೋಲ್ಸ್ ರಾಯ್ಸ್ ಕಾರು, ಪ್ರೈವೆಟ್ ಜೆಟ್ ಒಡೆಯ

ಕಾರ್ಯಕ್ರಮದಲ್ಲಿ ಆಮಿರ್​ ಖಾನ್ ಕೂಡ ಇದ್ದರು. ಅವರು ಚಿರಂಜೀವಿಯನ್ನು ಹೊಗಳಿದರು. ಚಿರಂಜೀವಿ ದಾಖಲೆಯನ್ನು ಸದ್ಯಕ್ಕಂತೂ ಯಾರಿಂದಲೂ ಮುರಿಯಲು ಸಾಧ್ಯವಿಲ್ಲ. ಚಿರಂಜೀವಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಸೆಪ್ಟೆಂಬರ್ 22ರಂದು. ಅದೇ ದಿನ ಅವರಿಗೆ ಈ ವಿಶೇಷ ಪ್ರಮಾಣಪತ್ರ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ