AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megastar Chiranjeevi: ‘ಮೆಗಾ ಸ್ಟಾರ್​’ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಗಾಡ್​ ಫಾದರ್​’ ಟೀಸರ್​; ಕೆಲವೇ ಗಂಟೆಗಳಲ್ಲಿ ಆದ ವೀಕ್ಷಣೆ ಎಷ್ಟು?

Megastar Chiranjeevi Birthday | God Father Teaser: ಚಿರಂಜೀವಿ ಅವರಿಗೆ 67 ವರ್ಷ ವಯಸ್ಸು. ಈಗಲೂ ಅವರು ಹದಿಹರೆಯದ ಯುವಕನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

Megastar Chiranjeevi: ‘ಮೆಗಾ ಸ್ಟಾರ್​’ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಗಾಡ್​ ಫಾದರ್​’ ಟೀಸರ್​; ಕೆಲವೇ ಗಂಟೆಗಳಲ್ಲಿ ಆದ ವೀಕ್ಷಣೆ ಎಷ್ಟು?
ಮೆಗಾ ಸ್ಟಾರ್ ಜಿರಂಜೀವಿ
TV9 Web
| Edited By: |

Updated on: Aug 22, 2022 | 9:21 AM

Share

ಭಾರತೀಯ ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರಿಗೆ ಇಂದು (ಆಗಸ್ಟ್​ 22) ಹುಟ್ಟುಹಬ್ಬದ ಸಡಗರ. ಅಭಿಮಾನಿಗಳಿಗೆ ಈ ದಿನ ಎಂದರೆ ಹಬ್ಬಕ್ಕೆ ಸಮ. ಹಲವು ಬಗೆಯಲ್ಲಿ ಚಿರಂಜೀವಿ ಜನ್ಮದಿನವನ್ನು ಫ್ಯಾನ್ಸ್​ ಆಚರಿಸುತ್ತಿದ್ದಾರೆ. ಅವರ ಬರ್ತ್​ಡೇ (Megastar Chiranjeevi Birthday) ಸಂಭ್ರಮವನ್ನು ಹೆಚ್ಚಿಸಲು ‘ಗಾಡ್​ ಫಾದರ್​’ ಸಿನಿಮಾದ ಹೊಸ ಟೀಸರ್​ ಬಿಡುಗಡೆ ಮಾಡಲಾಗಿದೆ. ಇದು ಮಲಯಾಳಂನ ‘ಲೂಸಿಫರ್​’ ಚಿತ್ರದ ರಿಮೇಕ್​ ಎಂಬುದು ಗೊತ್ತಿರುವ ವಿಚಾರ. ಹಾಗಿದ್ದರೂ ಕೂಡ ಈ ಸಿನಿಮಾ ಮೇಲೆ ಚಿರಂಜೀವಿ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ (God Father teaser) 70 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

‘ಲೂಸಿಫರ್​’ ಸಿನಿಮಾದಲ್ಲಿ ಮಲಯಾಳಂ ಸ್ಟಾರ್​ ನಟ ಮೋಹನ್​​ ಲಾಲ್​ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಅದೇ ಪಾತ್ರವನ್ನು ತೆಲುಗಿನಲ್ಲಿ ‘ಮೆಗಾ ಸ್ಟಾರ್​’​ ಚಿರಂಜೀವಿ ಮಾಡುತ್ತಿದ್ದಾರೆ. ಬಾಲಿವುಡ್​ ನಟ ಸಲ್ಮಾನ್​ ಖಾನ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ನಯನತಾರಾ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೋಹನ್​ ರಾಜಾ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಇದರಲ್ಲಿನ ಚಿರಂಜೀವಿ ಅವರ ಲುಕ್​ ಗಮನ ಸೆಳೆಯುತ್ತಿದೆ. ನೀರವ್​ ಶಾ ಛಾಯಾಗ್ರಹಣ, ಥಮನ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ
Image
Vijayashanthi: ಚಿರಂಜೀವಿ, ನಾಗಾರ್ಜುನಗೆ ಮಾತಲ್ಲಿ ತಿವಿದ ವಿಜಯಶಾಂತಿ; ಆಮಿರ್​ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು
Image
Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಚಿರಂಜೀವಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು, ರಾಜಕೀಯ ಕ್ಷೇತ್ರದ ಗಣ್ಯರು ಶುಭ ಕೋರುತ್ತಿದ್ದಾರೆ. ತಮ್ಮ ನೆಚ್ಚಿನ ಹೀರೋಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ‘ಗಾಡ್​ ಫಾದರ್​’ ಸಿನಿಮಾ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಿಂದಿ ಮತ್ತು ತೆಲುಗು ವರ್ಷನ್​ನಲ್ಲಿ ಟೀಸರ್​ ಬಿಡುಗಡೆ ಮಾಡಲಾಗಿದೆ. ಎರಡೂ ಭಾಷೆ ಸೇರಿ ಕೆಲವೇ ಗಂಟೆಗಳಲ್ಲಿ 70 ಲಕ್ಷಕ್ಕೂ ಅಧಿಕ ವೀವ್ಸ್​ ಪಡೆದಿರುವುದು ಈ ಟೀಸರ್​ನ ಹೆಚ್ಚುಗಾರಿಕೆ.

ಚಿರಂಜೀವಿ ಅವರಿಗೆ 67 ವರ್ಷ ವಯಸ್ಸು. ಈಗಲೂ ಅವರು ಹದಿಹರೆಯದ ಯುವಕನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರನ್ನು ಮತ್ತೆ ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಬಯಸುತ್ತಿದ್ದಾರೆ. ‘ಗಾಡ್​ ಫಾದರ್​’ ಸಿನಿಮಾ ಈ ವರ್ಷ ವಿಜಯ ದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್​ 5ರಂದು ಬಿಡುಗಡೆ ಆಗಲಿದೆ. ‘ಬೋಲಾ ಶಂಕರ್​’ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದು, ಅದರ ರಿಲೀಸ್​ ಡೇಟ್​ ಕೂಡ ಅನೌನ್ಸ್​ ಆಗಿದೆ. 2023ರ ಏಪ್ರಿಲ್​ 14ರಂದು ಆ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ