
ಭಾರತೀಯ ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್’ ಚಿರಂಜೀವಿ (Megastar Chiranjeevi) ಅವರಿಗೆ ಇಂದು (ಆಗಸ್ಟ್ 22) ಹುಟ್ಟುಹಬ್ಬದ ಸಡಗರ. ಅಭಿಮಾನಿಗಳಿಗೆ ಈ ದಿನ ಎಂದರೆ ಹಬ್ಬಕ್ಕೆ ಸಮ. ಹಲವು ಬಗೆಯಲ್ಲಿ ಚಿರಂಜೀವಿ ಜನ್ಮದಿನವನ್ನು ಫ್ಯಾನ್ಸ್ ಆಚರಿಸುತ್ತಿದ್ದಾರೆ. ಅವರ ಬರ್ತ್ಡೇ (Megastar Chiranjeevi Birthday) ಸಂಭ್ರಮವನ್ನು ಹೆಚ್ಚಿಸಲು ‘ಗಾಡ್ ಫಾದರ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ ಮಾಡಲಾಗಿದೆ. ಇದು ಮಲಯಾಳಂನ ‘ಲೂಸಿಫರ್’ ಚಿತ್ರದ ರಿಮೇಕ್ ಎಂಬುದು ಗೊತ್ತಿರುವ ವಿಚಾರ. ಹಾಗಿದ್ದರೂ ಕೂಡ ಈ ಸಿನಿಮಾ ಮೇಲೆ ಚಿರಂಜೀವಿ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್ (God Father teaser) 70 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.
‘ಲೂಸಿಫರ್’ ಸಿನಿಮಾದಲ್ಲಿ ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಅದೇ ಪಾತ್ರವನ್ನು ತೆಲುಗಿನಲ್ಲಿ ‘ಮೆಗಾ ಸ್ಟಾರ್’ ಚಿರಂಜೀವಿ ಮಾಡುತ್ತಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ನಯನತಾರಾ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೋಹನ್ ರಾಜಾ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಇದರಲ್ಲಿನ ಚಿರಂಜೀವಿ ಅವರ ಲುಕ್ ಗಮನ ಸೆಳೆಯುತ್ತಿದೆ. ನೀರವ್ ಶಾ ಛಾಯಾಗ್ರಹಣ, ಥಮನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಚಿರಂಜೀವಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು, ರಾಜಕೀಯ ಕ್ಷೇತ್ರದ ಗಣ್ಯರು ಶುಭ ಕೋರುತ್ತಿದ್ದಾರೆ. ತಮ್ಮ ನೆಚ್ಚಿನ ಹೀರೋಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ‘ಗಾಡ್ ಫಾದರ್’ ಸಿನಿಮಾ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಿಂದಿ ಮತ್ತು ತೆಲುಗು ವರ್ಷನ್ನಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಎರಡೂ ಭಾಷೆ ಸೇರಿ ಕೆಲವೇ ಗಂಟೆಗಳಲ್ಲಿ 70 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದಿರುವುದು ಈ ಟೀಸರ್ನ ಹೆಚ್ಚುಗಾರಿಕೆ.
ಚಿರಂಜೀವಿ ಅವರಿಗೆ 67 ವರ್ಷ ವಯಸ್ಸು. ಈಗಲೂ ಅವರು ಹದಿಹರೆಯದ ಯುವಕನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರನ್ನು ಮತ್ತೆ ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಬಯಸುತ್ತಿದ್ದಾರೆ. ‘ಗಾಡ್ ಫಾದರ್’ ಸಿನಿಮಾ ಈ ವರ್ಷ ವಿಜಯ ದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 5ರಂದು ಬಿಡುಗಡೆ ಆಗಲಿದೆ. ‘ಬೋಲಾ ಶಂಕರ್’ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದು, ಅದರ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 2023ರ ಏಪ್ರಿಲ್ 14ರಂದು ಆ ಸಿನಿಮಾ ಬಿಡುಗಡೆ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.