AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿಗೆ ಹುಟ್ಟುಹಬ್ಬದ ಸಂಭ್ರಮ; ನಟನ ಒಟ್ಟೂ ಆಸ್ತಿ ಎಷ್ಟು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟುಹಬ್ಬ ಇಂದು (ಆಗಸ್ಟ್ 22). ದಶಕಗಳಿಂದಲೂ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿರುವ ಚಿರಂಜೀವಿ ಸಿನಿಮಾಗಳಿಂದ ಸಾಕಷ್ಟು ಆಸ್ತಿಯನ್ನು ಸಹ ಮಾಡಿದ್ದಾರೆ. ಇಲ್ಲಿದೆ ಅವರ ಆಸ್ತಿ ಮೌಲ್ಯದ ಮಾಹಿತಿ.

ಚಿರಂಜೀವಿಗೆ ಹುಟ್ಟುಹಬ್ಬದ ಸಂಭ್ರಮ; ನಟನ ಒಟ್ಟೂ ಆಸ್ತಿ ಎಷ್ಟು?
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 22, 2024 | 12:27 PM

Share

ಟಾಲಿವುಡ್ ನಟ ಚಿರಂಜೀವಿ ಅವರಿಗೆ ಇಂದು (ಆಗಸ್ಟ್ 22 ) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅವರಿಗೆ ಇದು 69ನೇ ವರ್ಷದ ಜನ್ಮದಿನ. ಈ ವಯಸ್ಸಿನಲ್ಲೂ ಅವರು ಫಿಟ್ ಆಗಿದ್ದಾರೆ. ಹಲವು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಫಿಟ್ನೆಸ್​ಗಾಗಿ ಜಿಮ್ ಮಾಡುತ್ತಾರೆ. ಅವರು ದಕ್ಷಿಣ ಭಾರತದ ಶ್ರೀಮಂತ ನಟರಲ್ಲಿ ಅವರೂ ಒಬ್ಬರ. ಅವರ ಆಸ್ತಿ ಬಗ್ಗೆ, ಅವರು ಹೊಂದಿರುವ ದುಬಾರಿ ವಸ್ತುಗಳ ಬಗ್ಗೆ ಇಲ್ಲಿದೆ ವಿವರ.

ಚಿರಂಜೀವಿ ಅವರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಪದ್ಮಭೂಷಣ ಮತ್ತು ಪದ್ಮವಿಭೂಷಣ ರೀತಿಯ ಅವಾರ್ಡ್​ಗಳನ್ನು ಪಡೆದಿದ್ದಾರೆ. ಅವರು ನಟ, ನಿರ್ಮಾಪಕ, ರಾಜಕಾರಣಿಯೂ ಹೌದು. ಅವರ ಆಸ್ತಿ ಮೌಲ್ಯ 1650 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಅನೇಕ ಕಡೆಗಳಲ್ಲಿ ದುಬಾರಿ ಮನೆಗಳನ್ನು ಹೊಂದಿದ್ದಾರೆ.

ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು 25 ಸಾವಿರ ಸ್ಕ್ವೇರ್ ಫೀಟ್​ನ ಮನೆ ಹೊಂದಿದ್ದಾರೆ. ಬೆಂಗಳೂರಿನ ಏರ್​ಪೋರ್ಟ್​ ಬಳಿ ಫಾರ್ಮ್​ಹೌಸ್ ಹೊಂದಿದ್ದಾರೆ. ಇದನ್ನು ಅವರು ಸಾಕಷ್ಟು ಇಷ್ಟಪಡುತ್ತಾರೆ. ಚೆನ್ನೈನಲ್ಲಿಯೂ ಚಿರಂಜೀವಿ ಮನೆ ಹೊಂದಿದ್ದಾರೆ. 90ರ ದಶಕದಲ್ಲಿ ಫಿಲ್ಮ್​ನಗರದಲ್ಲಿ ಭೂಮಿ ಖರೀದಿ ಮಾಡಿದ್ದರು. ಇದನ್ನು 70 ಕೋಟಿ ರೂಪಾಯಿಗೆ ಅವರು ಮಾರಿದ್ದಾರೆ.

ಚಿರಂಜೀವಿ ಅವರ ಬಳಿ ಖಾಸಗಿ ಜೆಟ್ ಇದೆ. ಭಾರತದಲ್ಲಿ ಸುತ್ತಾಡಲು ಅವರು ಇದನ್ನು ಬಳಸುತ್ತಾರೆ. ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ಇದೆ. ಇದರ ಬೆಲೆ 9-10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ರೇಂಜ್​ ರೋವರ್, ಟೊಯೋಟಾ ಲ್ಯಾಂಡ್ ಕ್ರೂಜರ್ ಕಾರುಗಳ ಒಡೆಯನೂ ಹೌದು. ಕೇರಳ ಬ್ಲಾಸ್ಟರ್​ ಎಫ್​ಸಿಯ ಸಹ ಮಾಲೀಕರಾಗಿದ್ದಾರೆ. ನಾಗಾರ್ಜುನ ಹಾಗೂ ಸಚಿನ್ ತೆಂಡೂಲ್ಕರ್ ಕೂಡ ಇದರ ಮಾಲೀಕರು. ಅವರಿಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಇದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಇದನ್ನೂ ಓದಿ:1 ಕೋಟಿ ರೂಪಾಯಿ ದೇಣಿಗೆ ನೀಡಿ ಭೂಕುಸಿತದ ಸಂತ್ರಸ್ತರಿಗೆ ನೆರವಾದ ಚಿರಂಜೀವಿ, ರಾಮ್​ ಚರಣ್​

ಚಿರಂಜೀವಿ ನಿರ್ಮಾಣ ಸಂಸ್ಥೆ ಹೊಂದಿದ್ದು, ಇದಕ್ಕೆ ಅಂಜನಾ ಪ್ರೊಡಕ್ಷನ್ಸ್ ಎಂದು ಹೆಸರು ಇಟ್ಟಿದ್ದಾರೆ. ಇದನ್ನು ಸ್ಥಾಪಿಸಿದ್ದು 1988ರಲ್ಲಿ. ಸಹೋದರ ನಾಗೇಂದ್ರ ಬಾಬು ಜೊತೆ ಸೇರಿ ಅವರು ಇದನ್ನು ಆರಂಭಿಸಿದರು. ಚಿರಂಜೀವಿ ತಾಯಿ ಅಂಜನಾ ದೇವಿ ಹೆಸರಲ್ಲಿ ಇದನ್ನು ಮಾಡಿದರು. ತೆಲುಗು ಚಿತ್ರರಂಗದ ಪ್ರಮುಖ ಬ್ಯಾನರ್​ಗಳಲ್ಲಿ ಇದೂ ಒಂದು.

ಚಿರಂಜೀವಿ ಅವರು ಸಿನಿಮಾ ಕೆಲಸಗಳ ಜೊತೆಗೆ ಸಾಕಷ್ಟು ಸಾಮಾಜಿಕ ಕೆಲಸ ಮಾಡುತ್ತಾರೆ. ಅವರು ಹಲವು ಒಳ್ಳೆಯ ಕೆಲಸಗಳನ್ನು ಈವರೆಗೆ ಮಾಡಿದ್ದಾರೆ. ಅವರ ಹೆಸರಲ್ಲಿ ಬ್ಲಡ್ ಬ್ಯಾಂಕ್ ಕೂಡ ಇದೆ. ಹಲವು ಕಡೆಗಳಲ್ಲಿ ಚಿರಂಜೀವಿ ಹೂಡಿಕೆ ಮಾಡಿದ್ದಾರೆ. ಚಿರಂಜೀವಿ ಅವರು ಜನ್ಮದಿನಕ್ಕೂ ಮುನ್ನ ಅವರು ತಿರುಮಲಕ್ಕೆ ಭೇಟಿ ನೀಡಿದ್ದರು. ಅವರು ದೇವರ ದರ್ಶನ ಪಡೆದು ಬಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್