Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?

Megastar Chiranjeevi | Numerology: ಈ ವರ್ಷ ‘ಆಚಾರ್ಯ’ ಸಿನಿಮಾ ಸೋಲುಂಡಿತು. ಹಾಗಾಗಿ ಚಿರಂಜೀವಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಆ ಕಾರಣದಿಂದ ಅವರು ಸಂಖ್ಯಾಶಾಸ್ತ್ರದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?
ಚಿರಂಜೀವಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 06, 2022 | 9:38 AM

ಚಿತ್ರರಂಗದವರು ಗೆಲುವಿಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಾರೆ. ಹಗಲಿರುಳು ಕಷ್ಟಪಟ್ಟು ಕೆಲಸ ಮಾಡಿದ ನಂತರ ಒಂದಿಷ್ಟು ಅದೃಷ್ಟವೂ ಕೈ ಹಿಡಿಯಬೇಕಾಗುತ್ತದೆ. ಅದಕ್ಕಾಗಿ ಅನೇಕರು ಹಲವು ಬಗೆಯ ಸೂತ್ರಗಳ ಮೊರೆ ಹೋಗುತ್ತಾರೆ. ಈಗ ನಟ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಂಖ್ಯಾಶಾಸ್ತ್ರ ಫಾಲೋ ಮಾಡಲು ಆರಂಭಿಸಿದ್ದಾರೆ ಎಂಬ ಗುಸುಗುಸು ಟಾಲಿವುಡ್​ (Tollywood) ಅಂಗಳದಲ್ಲಿ ಕೇಳಿಬಂದಿದೆ. ಹೌದು, ಅದಕ್ಕೆ ಸಣ್ಣದೊಂದು ಸಾಕ್ಷಿ ಕೂಡ ಸಿಕ್ಕಿದೆ. ಚಿರಂಜೀವಿ ನಟನೆಯ ‘ಗಾಡ್​​ ಫಾದರ್​’ (God Father) ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಅವರು ತಮ್ಮ ಹೆಸರಿನಲ್ಲಿ ಕೊಂಚ ಮಾರ್ಪಾಡು ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

ಚಿರಂಜೀವಿ ನಟಿಸುತ್ತಿರುವ ‘ಗಾಡ್​ ಫಾದರ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದು ಮಲಯಾಳಂನ ‘ಲೂಸಿಫರ್​’ ಚಿತ್ರದ ತೆಲುಗು ರಿಮೇಕ್​. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಈಗ ‘ಗಾಡ್​ ಫಾದರ್​’ ತಂಡದಿಂದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಟೀಸರ್​ನಲ್ಲಿ ಚಿರಂಜೀವಿಯ ಹೆಸರು ಎಲ್ಲರ ಕಣ್ಣು ಕುಕ್ಕಿದೆ.

ಇಷ್ಟು ದಿನಗಳ ಕಾಲ ಚಿರಂಜೀವಿ ಅವರ ಹೆಸರನ್ನು ಇಂಗ್ಲಿಷ್​ನಲ್ಲಿ ‘Chiranjeevi’ ಎಂದು ಬರೆಯಲಾಗುತ್ತಿತ್ತು. ಆದರೆ ಈಗ ಅದಕ್ಕೆ ಒಂದು ‘e’ ಹೆಚ್ಚುವರಿಯಾಗಿ ಸೇರಿಕೊಂಡಿದೆ! ಹೌದು, ‘ಗಾಡ್​ ಫಾದರ್​’ ಟೀಸರ್​ನಲ್ಲಿ ‘Chiranjeeevi’ ಎಂದು ಬರೆದಿರುವುದು ಗಮನ ಸೆಳೆದಿದೆ. ಸಂಖ್ಯಾಶಾಸ್ತ್ರವನ್ನು ಗಂಭೀರವಾಗಿ ಪರಿಗಣಿಸಿರುವುದಕ್ಕಾಗಿಯೇ ಅವರು ಈ ರೀತಿ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದಾಗಲಿ, ಸ್ವತಃ ಚಿರಂಜೀವಿ ಅವರ ಕಡೆಯಿಂದಾಗಲಿ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಇದನ್ನೂ ಓದಿ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ
Image
ಸಾಲದ ಸುಳಿಯಲ್ಲಿ ‘ಆಚಾರ್ಯ’ ವಿತರಕರು; ನಷ್ಟ ಭರಿಸಲು ಚಿರಂಜೀವಿಗೆ ಪತ್ರ ಬರೆದ ಕರ್ನಾಟಕದ ಡಿಸ್ಟ್ರಿಬ್ಯೂಟರ್
Image
ಚಿರಂಜೀವಿ, ರಾಮ್​ ಚರಣ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ ಫ್ಯಾನ್ಸ್​; ಪವನ್​ ಕಲ್ಯಾಣ್​ಗೂ ಜೈಕಾರ

ಚಿರಂಜೀವಿ ನಟಿಸಿದ ‘ಆಚಾರ್ಯ’ ಸಿನಿಮಾ ಈ ವರ್ಷ ತೆರೆಕಂಡು ಹೀನಾಯವಾಗಿ ಸೋಲುಂಡಿತು. ಹಾಗಾಗಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಆ ಕಾರಣದಿಂದ ಅವರು ಸಂಖ್ಯಾಶಾಸ್ತ್ರದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಕೆಲವರ ವಾದವೇ ಬೇರೆ. ಇದು ಚಿತ್ರತಂಡದವರ ಪ್ರಮಾದವಾಗಿದ್ದು, ಚಿರಂಜೀವಿ ಹೆಸರಿನ ಸ್ಪೆಲಿಂಗ್​ ತಪ್ಪಾಗಿ ಬರೆಯಲಾಗಿದೆ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಅಭಿಮಾನಿಗಳ ವಲಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ‘ಆಚಾರ್ಯ’ ಸಿನಿಮಾ ಸೋಲಿನ ಬಳಿಕ ಮುಂಬರುವ ಚಿತ್ರಗಳ ಸ್ಕ್ರಿಪ್ಟ್​ನಲ್ಲಿ ಸಾಕಷ್ಟು ಬದಲಾವಣೆ ಮಾಡುವಂತೆ ನಿರ್ದೇಶಕರಿಗೆ ಚಿರಂಜೀವಿ ಸೂಚಿಸಿದ್ದಾರೆ ಎಂಬ ಸುದ್ದಿಯೂ ಕೇಳಿಬಂದಿದೆ.

ಇದನ್ನೂ ಓದಿ: Numerology: ಈ ದಿನಾಂಕ ನಿಮ್ಮ ಬದುಕಿನ ಮೇಲೆ ಹೇಗೆ ಪ್ರಭಾವ ಬೀರುತ್ತದೆ? ಸಂಖ್ಯಾಶಾಸ್ತ್ರ ಹೇಳುವುದೇನು?

Numerology: ಸಂಖ್ಯಾಶಾಸ್ತ್ರದ ಪ್ರಕಾರ 11, 22 ಹಾಗೂ 33 ಮಾಸ್ಟರ್ ನಂಬರ್; ಏನಿದರ ವಿಶೇಷ ಎಂಬುದು ನಿಮಗೆ ಗೊತ್ತಾ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ