Megha Shetty:ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ

Jothe Jotheyali: ಇತ್ತೀಚೆಗೆ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಜೀ ಕನ್ನಡ ವಾಹಿನಿ ಇದನ್ನು ಅಲ್ಲಗಳೆದಿತ್ತು. ಈಗ ಮೇಘಾ ಶೆಟ್ಟಿ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ಸಿಕ್ಕಂತಾಗಿದೆ.

Megha Shetty:ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ
ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 15, 2021 | 8:02 PM

‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೊರ ನಡೆದಿದ್ದಾರೆ ಹಾಗೂ ಅವರು ಈ ಧಾರಾವಾಹಿಯಲ್ಲಿ ಮುಂದುವರಿಯುವುದಿಲ್ಲ ಎನ್ನುವ ಮಾತು ಕೇಳಿ ಇತ್ತೀಚೆ ಬಂದಿತ್ತು. ಈಗ ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಗೊಂದಲ ಇದ್ದಿದ್ದು ನಿಜ. ಆದರೆ, ಈಗ ಅದು ಬಗೆ ಹರಿದಿದೆ ಎಂದಿದ್ದಾರೆ ಅವರು. ಈ ಮೂಲಕ ಧಾರಾವಾಹಿಯಲ್ಲಿ ಮುಂದುವರಿಯುತ್ತಿದ್ದೇನೆ ಎನ್ನುವ ಭರವಸೆ ಅವರ ಕಡೆಯಿಂದ ಅಭಿಮಾನಿಗಳಿಗೆ ಸಿಕ್ಕಿದೆ.

‘ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದಗಳು. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ’ ಎಂದಿದ್ದಾರೆ ಮೇಘಾ ಶೆಟ್ಟಿ.

‘ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ’ ಎಂದು ಕೋರಿದ್ದಾರೆ ಅವರು.

ಇತ್ತೀಚೆಗೆ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಜೀ ಕನ್ನಡ ವಾಹಿನಿ ಇದನ್ನು ಅಲ್ಲಗಳೆದಿತ್ತು. ಈಗ ಮೇಘಾ ಶೆಟ್ಟಿ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ಸಿಕ್ಕಂತಾಗಿದೆ.

ಅನಿರುದ್ಧ ಹಾಗೂ ಮೇಘಾ ಶೆಟ್ಟಿ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಕಥಾಹಂದರದ ಮೂಲಕ ಈ ಧಾರಾವಾಹಿ ವೀಕ್ಷಕರನ್ನು ಸೆಳೆದುಕೊಂಡಿದೆ. ಈಗ ಮೇಘಾ ಶೆಟ್ಟಿ ಧಾರಾವಾಹಿಯಲ್ಲಿ ಮುಂದುವರಿಯುತ್ತಾರೆ ಎನ್ನುವ ವಿಚಾರದಿಂದ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

Published On - 7:43 pm, Thu, 15 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್