AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಚಿತ್ರದಲ್ಲಿ​ ಅತಿಥಿ ಪಾತ್ರ ಮಾಡುವ ಮೈಕ್​ ಟೈಸನ್​ಗೆ ಹೀರೋಗಿಂತಲೂ ಹೆಚ್ಚು ಸಂಬಳ

ಮೈಕ್​ ಟೈಸನ್​ಗೆ ಇಷ್ಟು ದೊಡ್ಡ ಸಂಭಾವನೆ ಕೊಟ್ಟರೆ ಚಿತ್ರತಂಡಕ್ಕೆ ನಷ್ಟ ಇಲ್ಲ ಎಂದು ನಿರ್ಮಾಪಕರು ತೀರ್ಮಾನಿಸಿದ್ದಾರೆ. ಮೈಕ್​ ಟೈಸನ್​ ಅವರ ದೃಶ್ಯಗಳ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕಾಗಿ ಅವರು ಅಮೆರಿಕದಿಂದ ಗೋವಾಗೆ ಬರಲಿದ್ದಾರೆ.

‘ಲೈಗರ್’ ಚಿತ್ರದಲ್ಲಿ​ ಅತಿಥಿ ಪಾತ್ರ ಮಾಡುವ ಮೈಕ್​ ಟೈಸನ್​ಗೆ ಹೀರೋಗಿಂತಲೂ ಹೆಚ್ಚು ಸಂಬಳ
ಮೈಕ್​ ಟೈಸನ್​, ವಿಜಯ್​ ದೇವರಕೊಂಡ
TV9 Web
| Updated By: ಮದನ್​ ಕುಮಾರ್​|

Updated on: Sep 30, 2021 | 8:03 AM

Share

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ದೇಶಕ ಪುರಿ ಜಗನ್ನಾಥ್​ ಹಲವು ಬಗೆಯಲ್ಲಿ ಸರ್ಕಸ್​ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರತಂಡದಿಂದ ಒಂದು ದೊಡ್ಡ ನ್ಯೂಸ್​ ಹೊರಬಿದ್ದಿತ್ತು. ‘ಲೈಗರ್​​’ನಲ್ಲಿ ವಿಜಯ್​ ದೇವರಕೊಂಡ ಜೊತೆ ಬಾಕ್ಸಿಂಗ್​ ಲೆಜೆಂಡ್​ ಮೈಕ್​ ಟೈಸನ್​ ನಟಿಸಲಿದ್ದಾರೆ. ಈಗ ಅವರ ಸಂಭಾವನೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಈ ಸಿನಿಮಾಗೆ ವಿಜಯ್ ದೇವರಕೊಂಡ ಹೀರೋ ಆಗಿದ್ದರೂ ಕೂಡ ಅವರಿಗಿಂತಲೂ ಹೆಚ್ಚು ಸಂಬಳ ಪಡೆಯಲಿರುವುದು ಮೈಕ್​ ಟೈಸನ್​ ಎನ್ನುತ್ತಿವೆ ಮೂಲಗಳು.

ಈ ಚಿತ್ರದಲ್ಲಿ ಮೈಕ್​ ಟೈಸನ್​ ಮಾಡುತ್ತಿರುವುದು ಒಂದು ಅತಿಥಿ ಪಾತ್ರ ಅಷ್ಟೇ. ಕ್ಲೈಮ್ಯಾಕ್ಸ್​ಗಿಂತಲೂ ಮುನ್ನ ಬರುವ ದೃಶ್ಯದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಷ್ಟಕ್ಕಾಗಿ ಅವರು ದುಬಾರಿ ಸಂಭಾವನೆಯನ್ನು ಜೇಬಿಗೆ ಇಳಿಸಿಕೊಳ್ಳಲಿದ್ದಾರೆ. ಅದು ವಿಜಯ್​ ದೇವರಕೊಂಡ ಅವರ ಸಂಬಳಕ್ಕಿಂತಲೂ ದೊಡ್ಡ ಮೊತ್ತ ಎಂಬ ಸುದ್ದಿ ಕೇಳಿಬಂದಿದೆ. ಆದರೆ ನಿರ್ದಿಷ್ಟವಾಗಿ ಎಷ್ಟು ಎಂಬುದನ್ನು ಮೂಲಗಳು ಬಾಯಿ ಬಿಟ್ಟಿಲ್ಲ.

ಈ ಸಿನಿಮಾವನ್ನು ಪುರಿ ಜಗನ್ನಾಥ್​, ಕರಣ್​ ಜೋಹರ್​, ಚಾರ್ಮಿ ಕೌರ್​, ಅಪೂರ್ವ ಮೆಹ್ತಾ, ಹೀರೂ ಯಶ್​ ಜೋಹರ್​ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಮೈಕ್​ ಟೈಸನ್​ಗೆ ಇಷ್ಟು ದೊಡ್ಡ ಸಂಭಾವನೆ ಕೊಟ್ಟರೆ ಚಿತ್ರತಂಡಕ್ಕೆ ನಷ್ಟ ಇಲ್ಲ ಎಂದು ಇವರೆಲ್ಲರೂ ತೀರ್ಮಾನಿಸಿದ್ದಾರೆ. ಮೈಕ್​ ಟೈಸನ್​ ಅವರ ದೃಶ್ಯಗಳ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕಾಗಿ ಅವರು ಅಮೆರಿಕದಿಂದ ಗೋವಾಗೆ ಬರಲಿದ್ದಾರೆ.

ಬಾಕ್ಸಿಂಗ್​ ಜಗತ್ತಿನಲ್ಲಿ ಅಮೆರಿಕದ ಮೈಕ್​ ಟೈಸನ್​ ಅವರದ್ದು ದೊಡ್ಡ ಹೆಸರು. ಎದುರಾಳಿಗಳಿಗೆ ನಡುಕ ಹುಟ್ಟಿಸುವ ಅವರ ಬಾಕ್ಸಿಂಗ್​ ಪರಾಕ್ರಮಕ್ಕೆ ಸರಿಸಾಟಿ ಆಗಬಲ್ಲ ಮತ್ತೊಬ್ಬ ವ್ಯಕ್ತಿಯೇ ಇಲ್ಲ. ಅಂಥ ದಿಗ್ಗಜನನ್ನು ‘ಲೈಗರ್​’ ಸಿನಿಮಾ ತಂಡ ಭಾರತಕ್ಕೆ ಸ್ವಾಗತಿಸುತ್ತಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಭಾರತೀಯ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೈಕ್​ ಟೈಸನ್​ ಮುಖಾಮುಖಿ ಆಗುವ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ. ಬಾಕ್ಸಿಂಗ್ ರಿಂಗ್​ನಲ್ಲಿ ಅವರಿಬ್ಬರ ಹಣಾಹಣಿ ಹೇಗಿರಲಿದೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ.

ಇದನ್ನೂ ಓದಿ:

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

ದಕ್ಷಿಣ ಭಾರತದ ನಟನಾಗಿ ವಿಜಯ್​ ದೇವರಕೊಂಡ ಲೈಫ್​ನಲ್ಲಿ ಹೊಸ ಮೈಲಿಗಲ್ಲು

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ