ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

Rashmika Mandanna: ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. 6 ಸಾವಿರಕ್ಕೂ ಅಧಿಕ ಜನರು ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Mar 29, 2022 | 7:15 AM

ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದಾ ಕಾಲ ಸುದ್ದಿಯಲ್ಲಿ ಇರುತ್ತಾರೆ. ಸಿನಿಮಾ, ವೈಯಕ್ತಿಕ ಜೀವನ, ಫಿಟ್ನೆಸ್​ (Fitness) ಹೀಗೆ ಒಂದಿಲ್ಲೊಂದು ವಿಚಾರಕ್ಕೆ ಅವರ ಬಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ. ಈಗ ಅವರ ಹೊಸದೊಂದು ವಿಡಿಯೋ ವೈರಲ್​ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳು (Rashmika Mandanna Fans) ವಾವ್​ ಎನ್ನುತ್ತಿದ್ದಾರೆ. ಅಷ್ಟಕ್ಕೂ ಅದರಲ್ಲಿ ಅಂಥದ್ದೇನಿದೆ? ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ನೋಡಲು ನಾಜೂಕಾಗಿ ಕಾಣುವ ರಶ್ಮಿಕಾ ಅವರು ವರ್ಕೌಟ್​ ವಿಚಾರ ಬಂದಾಗ ರಾಜಿ ಆಗುವವರಲ್ಲ. ತಾವು ಜಿಮ್​ನಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದ ವಿಡಿಯೋವನ್ನು ಅಭಿಮಾನಿಗಳಿಗಾಗಿ ಅವರು ಹಂಚಿಕೊಂಡಿದ್ದಾರೆ. ಹಲವು ಬಗೆಯ ವ್ಯಾಯಾಮವನ್ನು ಅವರು ಮಾಡಿದ್ದಾರೆ. ಅದರ ಝಲಕ್​ ಈ ವಿಡಿಯೋದಲ್ಲಿ ಇದೆ. ಅವರು ಯಾವ ಸಿನಿಮಾಗಾಗಿ ಈ ಪರಿ ತಯಾರಾಗುತ್ತಿದ್ದಾರೆ ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ. ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ರಶ್ಮಿಕಾ ಮಂದಣ್ಣ ಈಗ ಪ್ಯಾನ್​ ಇಂಡಿಯಾ ನಟಿ. ಅಲ್ಲು ಅರ್ಜುನ್​ ಜೊತೆ ನಟಿಸಿದ ‘ಪುಷ್ಪ’ ಸಿನಿಮಾದಿಂದಾಗಿ ಅವರಿಗೆ ಇಂಥ ಟೈಟಲ್​ ಸಿಕ್ಕಿದೆ. ಹಾಗೆಯೇ ಅವರು ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ಅವರ ಡಿಮ್ಯಾಂಡ್​ ಹೆಚ್ಚಿದೆ. ಸಿನಿಮಾ ಕೆಲಸಗಳ ಸಲುವಾಗಿ ರಶ್ಮಿಕಾ ಯಾವಾಗಲೂ ಬ್ಯುಸಿ ಆಗಿರುತ್ತಾರೆ. ಅದರ ನಡುವೆಯೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಈ ವಿಚಾರದಲ್ಲಿ ಅವರು ಅಭಿಮಾನಿಗಳಿಗೆ ಮತ್ತು ಇತರೆ ಸೆಲೆಬ್ರಿಟಿಗಳಿಗೆ ಪ್ರೇರಣೆ ನೀಡುತ್ತಾರೆ.

ರಶ್ಮಿಕಾ ಅವರು ಯಾವೆಲ್ಲ ರೀತಿಯ ವರ್ಕೌಟ್​ ಮಾಡುತ್ತಾರೆ ಎಂಬುದರ ಸ್ಯಾಂಪಲ್​ ಈ 24 ಸೆಕೆಂಡ್​ಗಳ ಕಿರು ವಿಡಿಯೋದಲ್ಲಿದೆ. ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಇದು 20 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 6 ಸಾವಿರಕ್ಕೂ ಅಧಿಕ ಜನರು ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ‘ನಿಮಗೆ ಈ ವರ್ಕೌಟ್​ ಇಷ್ಟ ಆಗಿದ್ದರೆ ಬೈಸೆಪ್ಸ್​ ಇಮೋಜಿಯನ್ನು ಕಮೆಂಟ್​ ಮಾಡಿ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಜಿಮ್​ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳನ್ನು ಹೆಚ್ಚು ಹಂಚಿಕೊಳ್ಳುತ್ತಿದ್ದಾರೆ. ಕೆಲವೇ ದಿನದ ಹಿಂದೆ ಒಂದು ಹೊಸ ಫೋಟೋ ಅಪ್​ಲೋಡ್​ ಮಾಡಿಕೊಂಡು ತಮ್ಮ ಫಿಟ್ನೆಸ್​ ಸೀಕ್ರೆಟ್​ ಏನೆಂಬುದನ್ನು ವಿವರಿಸಿದ್ದರು.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದ ಅವರು ಹೀಗೊಂದು ಕ್ಯಾಪ್ಷನ್​ ಬರೆದಿದ್ದರು. ‘ಈ ಫೋಟೋವನ್ನು ನಾನು ಪೋಸ್ಟ್​ ಮಾಡಬಹುದೋ ಇಲ್ಲವೋ ಗೊತ್ತಿಲ್ಲ. ನಿಮ್ಮಲ್ಲಿ ತುಂಬ ಜನರು ಇದನ್ನು ಇಷ್ಟಪಡುವುದಿಲ್ಲ. ನಿರಂತರ ಪ್ರಯತ್ನವೇ ನಿಮ್ಮ ಫಿಟ್ನೆಸ್​ ಗೋಲ್​ಗೆ ತುಂಬ ಮುಖ್ಯವಾದ ಅಂಶ. ವರ್ಕೌಟ್​, ಡಯೆಟ್​, ಆಲೋಚನೆಗಳು ಮತ್ತು ಜರ್ನಿ ನಿರಂತರವಾಗಿ ಇರಲಿ ಹಾಗೂ ಅದನ್ನು ಎಂಜಾಯ್ ಮಾಡಿ. ಸ್ವಲ್ಪ ಸಮಯದವರೆಗೆ ಅದು ಖುಷಿ ನೀಡದೇ ಇರಬಹುದು. ಆದರೆ ಅಭ್ಯಾಸವಾದ ಬಳಿಕ ನಿಮಗೆ ಅರ್ಥವಾಗುತ್ತದೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದರು.

ಬಾಲಿವುಡ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಹಾಗೂ ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಸಿನಿಮಾದಲ್ಲೂ ಅಭಿನಯಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಹವಾ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆ ಅಭಿಮಾನಿ ಬಳಗವೂ ಹಿರಿದಾಗುತ್ತಿದೆ.

ಇದನ್ನೂ ಓದಿ:

Ex ಬಗ್ಗೆ ಮಾತು ಬೇಡ, Y ಬಗ್ಗೆ ಕೇಳಿ; ರಶ್ಮಿಕಾ ಯೂಟ್ಯೂಬ್​ ಚಾನೆಲ್​ ಶುರು; ಒಂದೇ ವಿಡಿಯೋಗೆ ಮುಗಿಬಿದ್ದ ಫ್ಯಾನ್ಸ್​

​ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್​ ಕಂಡು ಹೌಹಾರಿದ ವರುಣ್​ ಧವನ್​; ವೈರಲ್​ ಆಗಿದೆ ಈ ವಿಡಿಯೋ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ