ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

Rashmika Mandanna: ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಡಿಮ್ಯಾಂಡ್​ ಇದೆ. ಆ ಬೇಡಿಕೆಗೆ ತಕ್ಕಂತೆಯೇ ಚಾರ್ಮ್​ ಉಳಿಸಿಕೊಳ್ಳಬೇಕಾದ ಚಾಲೆಂಜ್ ಅವರ ಮುಂದಿದೆ.

ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:May 21, 2022 | 8:14 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಖತ್​ ಬ್ಯುಸಿ ಆಗಿದ್ದಾರೆ. ಅವರ ಕೈಯಲ್ಲಿ ಅನೇಕ ಸಿನಿಮಾಗಳಿಗೆ. ಹತ್ತಾರು ಹೊಸ ಹೊಸ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಪ್ರತಿ ದಿನ ಅವರು ಒಂದಿಲ್ಲೊಂದು ಸಿನಿಮಾದ ಶೂಟಿಂಗ್​, ರಿಹರ್ಸಲ್​, ಡಬ್ಬಿಂಗ್​ ಇತ್ಯಾದಿ ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಜಾಹೀರಾತುಗಳಲ್ಲಿ ಕೂಡ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಅವುಗಳ ಕೆಲಸದಲ್ಲೂ ಅವರು ಬ್ಯುಸಿ. ಹೀಗೆ ಎಷ್ಟೇ ಕಾರ್ಯದೊತ್ತಡ ಇದ್ದರೂ ಕೂಡ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದು ತಪ್ಪಿಸುವುದಿಲ್ಲ. ಪ್ರತಿ ದಿನ ಅವರು ಅದಕ್ಕಾಗಿ ಸಮಯ ಮೀಸಲಿಡುತ್ತಾರೆ. ಜಿಮ್​ನಲ್ಲಿ ಇರುವ ಫೋಟೋವನ್ನು (Rashmika Mandanna Photo) ಅಪ್​ಲೋಡ್​ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೂ ಅವರು ಸ್ಫೂರ್ತಿ ತುಂಬುತ್ತಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಒಂದು ಹೊಸ ಫೋಟೋ ಹಂಚಿಕೊಂಡರು. ‘ತೃಪ್ತಿ ನೀಡುವಂತಹ ನನ್ನ ಪ್ರಕಾರದ ವರ್ಕೌಟ್​’ ಎಂದು ರಶ್ಮಿಕಾ ಮಂದಣ್ಣ ಆ ಫೋಟೋಗೆ ಕ್ಯಾಪ್ಷನ್​ ನೀಡಿದ್ದು ಗಮನ ಸೆಳೆದಿದೆ. ಜಿಮ್​ನಲ್ಲಿ (Gym) ನಿಂತು ಅವರು ಮಿರರ್​ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಫಿಟ್ನೆಸ್​ ಬಗ್ಗೆ ಅವರಿಗೆ ಇರುವ ಕಾಳಜಿ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಬಣ್ಣದ ಲೋಕದಲ್ಲಿ ನಟಿಯರು ಫಿಟ್​ ಆಗಿರಬೇಕಾದ್ದು ಅನಿವಾರ್ಯ ಮತ್ತು ಅತ್ಯಗತ್ಯ. ಹಾಗಾಗಿ ಡಯಟ್​ ಜೊತೆ ವರ್ಕೌಟ್​ ಕೂಡ ಅತ್ಯಗತ್ಯ. ಇದನ್ನು ರಶ್ಮಿಕಾ ಮಂದಣ್ಣ ಚಾಚೂತಪ್ಪದೇ ಪಾಲಿಸುತ್ತಾರೆ. ಈ ಹಿಂದೆ ಕೂಡ ಅನೇಕ ಬಾರಿ ಅವರು ಜಿಮ್​ ಫೋಟೋಗಳನ್ನು ಹಂಚಿಕೊಂಡಿದ್ದರು. ಕೆಲವು ತಿಂಗಳ ಹಿಂದೆ ಅವರು ಒಂದಷ್ಟು ಐಡಿಯಾಗಳನ್ನು ಶೇರ್ ಮಾಡಿಕೊಂಡಿದ್ದರು. ತಮ್ಮ ಫಿಟ್ನೆಸ್​ ರಹಸ್ಯ ಏನು ಎಂಬುದನ್ನು ಕೂಡ ಅಭಿಮಾನಿಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಇದನ್ನೂ ಓದಿ
Image
ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ
Image
ಅಬ್ಬಬ್ಬಾ.. ರಶ್ಮಿಕಾ ಚಿತ್ರಕ್ಕೆ ಈ ಪರಿ ಬೇಡಿಕೆ; ಬಹುಕೋಟಿ ಡೀಲ್​ಗಾಗಿ ಇಬ್ಬರ ನಡುವೆ ಬಿಗ್​ ಪೈಪೋಟಿ
Image
ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​
Image
ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ

‘ನಿರಂತರ ಪ್ರಯತ್ನವೇ ನಿಮ್ಮ ಫಿಟ್ನೆಸ್​ ಗೋಲ್​ಗೆ ತುಂಬ ಮುಖ್ಯವಾದ ಅಂಶ. ವರ್ಕೌಟ್​, ಡಯೆಟ್​, ಆಲೋಚನೆಗಳು ಮತ್ತು ಜರ್ನಿ ನಿರಂತರವಾಗಿ ಇರಲಿ ಹಾಗೂ ಅದನ್ನು ಎಂಜಾಯ್ ಮಾಡಿ. ಸ್ವಲ್ಪ ಸಮಯದವರೆಗೆ ಅದು ಖುಷಿ ನೀಡದೇ ಇರಬಹುದು. ಆದರೆ ಅಭ್ಯಾಸವಾದ ಬಳಿಕ ನಿಮಗೆ ಅರ್ಥವಾಗುತ್ತದೆ’ ಎಂದು ರಶ್ಮಿಕಾ ಮಂದಣ್ಣ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ವಿಜಯ್​ಗೆ ಜೋಡಿ ಆಗಿದ್ದಕ್ಕೆ ರಶ್ಮಿಕಾಗೆ ಎಷ್ಟು ಖುಷಿ ಅಂತ ಮಾತಲ್ಲಿ ಹೇಳೋಕಾಗಲ್ಲ; ಫೋಟೋ ನೋಡಿ ತಿಳಿಯಬೇಕಷ್ಟೇ

ರಶ್ಮಿಕಾ ಮಂದಣ್ಣ ಈಗ ಪ್ಯಾನ್​ ಇಂಡಿಯಾ ನಟಿ. ಅಲ್ಲು ಅರ್ಜುನ್​ ಜೊತೆ ನಟಿಸಿದ ‘ಪುಷ್ಪ’ ಸಿನಿಮಾದಿಂದಾಗಿ ಅವರಿಗೆ ಇಂಥ ಟೈಟಲ್​ ಸಿಕ್ಕಿದೆ. ಹಾಗೆಯೇ ಅವರು ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ಅವರ ಡಿಮ್ಯಾಂಡ್​ ಹೆಚ್ಚಿದೆ. ಆ ಬೇಡಿಕೆಗೆ ತಕ್ಕಂತೆಯೇ ಚಾರ್ಮ್​ ಉಳಿಸಿಕೊಳ್ಳಬೇಕಾದ ಚಾಲೆಂಜ್ ಅವರ ಮುಂದಿದೆ. ಹಾಗಾಗಿ ಅವರು ಕಟ್ಟುನಿಟ್ಟಾಗಿ ವರ್ಕೌಟ್​ ಮಾಡುತ್ತಿದ್ದಾರೆ. ಜಿಮ್​ನಲ್ಲಿ ಕಷ್ಟಪಟ್ಟು ವರ್ಕೌಟ್​ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಈ ಮೊದಲು ಹಂಚಿಕೊಂಡಿದ್ದರು. ಅದನ್ನು ಕಂಡು ರಶ್ಮಿಕಾ ಫ್ಯಾನ್ಸ್​ ವಾವ್​ ಎಂದಿದ್ದರು.

ಇದನ್ನೂ ಓದಿ: ‘ಜಿಮ್​ನಲ್ಲಿ ಜೀವಿಸುವ ಸೈಕೋ’ ಅಂತ ಕರೆದುಕೊಂಡ ರಶ್ಮಿಕಾ ಮಂದಣ್ಣ; ಹೊಸ ಫೋಟೋ ವೈರಲ್​

ಕನ್ನಡದ ‘ಕಿರಿಕ್​ ಪಾರ್ಟಿ’ ಮೂಲಕ ವೃತ್ತಿಜೀವನ ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​ ಸಿನಿಮಾಗಳಲ್ಲೂ ಮಿಂಚುತ್ತಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆಗೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸಿದ್ದು, ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಸಿನಿಮಾದಲ್ಲಿ ನಟಿಸುತ್ತಿರುವುದು ರಶ್ಮಿಕಾ ಮಂದಣ್ಣ ಅವರ ಹೆಚ್ಚುಗಾರಿಕೆ. ಇನ್ನು, ದಕ್ಷಿಣ ಭಾರತದಲ್ಲಿ ‘ದಳಪತಿ’ ವಿಜಯ್​ ನಟನೆಯ ಮುಂದಿನ ಸಿನಿಮಾಗೆ ರಶ್ಮಿಕಾ ನಾಯಕಿ ಆಗಿದ್ದಾರೆ. ವಿಜಯ್​ ಜೊತೆ ನಟಿಸಬೇಕು ಎಂಬುದು ಅವರ ಬಹುದಿನಗಳ ಕನಸಾಗಿತ್ತು. ಅದೀಗ ಈಡೇರಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನೆರವೇರಿತ್ತು. ಅದರ ಫೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಸಂಭ್ರಮಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Sat, 21 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ