Rajinikanth: ಕಾವೇರಿ ಆಸ್ಪತ್ರೆಗೆ ತೆರಳಿ ರಜಿನಿ ಆರೋಗ್ಯ ವಿಚಾರಿಸಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್
MK Stalin: ಕಾಲಿವುಡ್ನ ಖ್ಯಾತ ನಟ ರಜಿನಿಕಾಂತ್ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಖ್ಯಾತ ಕಾಲಿವುಡ್ ನಟ ರಜಿನಿಕಾಂತ್ (Rajinikanth) ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅವರನ್ನು ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಭೇಟಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಜಿನಿ, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಸ್ಟಾಲಿನ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ರಜಿನಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 28ರಂದು ರಜಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಜಿನಿ ಆಸ್ಪತ್ರೆಗೆ ದಾಖಲಾದ ಒಂದು ದಿನದ ನಂತರ ಆಸ್ಪತ್ರೆಯಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವ ಕುರಿತು ಮಾಹಿತಿ ನೀಡಲಾಗಿತ್ತು. ಜೊತೆಗೆ ಅವರು ವಿಶ್ರಾಂತಿಯಲ್ಲಿದ್ದು, ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂದು ತಿಳಿಸಲಾಗಿತ್ತು. ಇಂದು ತಮಿಳುನಾಡು ಮುಖ್ಯಂತ್ರಿ ಸ್ಟಾಲಿನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಸ್ಟಾಲಿನ್ ಆಸ್ಪತ್ರೆಯಿಂದ ಹೊರಬರುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕೆಲವು ದಿನಗಳ ಹಿಂದೆಯಷ್ಟೇ ರಜನಿಕಾಂತ್ ದೆಹಲಿಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದರು. ರಜಿನಿಕಾಂತ್ ನಟನೆಯ ‘ಅಣ್ಣಾತೆ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ದೀಪಾವಳಿಯ ಸಂದರ್ಭದಲ್ಲಿ, ನವೆಂಬರ್ 4ರಂದು ಚಿತ್ರ ತೆರೆಗೆ ಬರಲಿದೆ ಎಂದು ಘೋಷಿಸಲಾಗಿದೆ. ಅಭಿಮಾನಿಗಳು ರಜಿನಿ ಅವರ ಚೇತರಿಕೆಗೆ ಹಾರೈಸುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಚಿತ್ರ ಬಿಡುಗಡೆಯಾಗಬೇಕು ಎಂದು ಆಶಿಸಿದ್ಧಾರೆ.
ಇದನ್ನೂ ಓದಿ:
ಡಿಫರೆಂಟ್ ಪಾತ್ರದಲ್ಲಿ ಪುನೀತ್; ‘ಮಿಷನ್ ಕೊಲಂಬಸ್’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Puneeth Rajkumar: ಸುಮಾರು 25 ಲಕ್ಷ ಜನರಿಂದ ಪುನೀತ್ ಅಂತಿಮ ದರ್ಶನ; ಎಲ್ಲರ ಸಹಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ