MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?

MM Keeravani Remuneration: ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಇಂದು (ಜುಲೈ 4) ಅವರಿಗೆ ಹುಟ್ಟುಹಬ್ಬದ ಸಂಭ್ರಮ.

MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?
ಎಂಎಂ ಕೀರವಾಣಿ
TV9kannada Web Team

| Edited By: Madan Kumar

Jul 04, 2022 | 8:28 AM

ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಅವರು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದ್ದಾರೆ. ಅವರು ಮಾಡಿದ ಸಿನಿಮಾಗಳೆಲ್ಲವೂ ದಾಖಲೆ ಬರೆದಿವೆ. ಅವರ ಎಲ್ಲ ಸಿನಿಮಾಗಳಿಗೂ ಸಂಗೀತ ನಿರ್ದೇಶನ ಮಾಡಿದ್ದು ಎಂಎಂ ಕೀರವಾಣಿ (MM Keeravani). ಪ್ರತಿ ಸಿನಿಮಾದಲ್ಲೂ ಅವರ ಸಂಗೀತ ಮೋಡಿ ಮಾಡುತ್ತದೆ. ಟಾಲಿವುಡ್​ನಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಹೊಂದಿರುವ ಅವರು ಬೇರೆ ಭಾಷೆಯ ಚಿತ್ರಗಳಿಗೂ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಫೇಮಸ್​. ಇಂದು (ಜುಲೈ 4) ಎಂಎಂ ಕೀರವಾಣಿ ಅವರಿಗೆ ಜನ್ಮದಿನದ (MM Keeravani Birthday) ಸಂಭ್ರಮ. ಆ ಪ್ರಯುಕ್ತ ಎಲ್ಲರೂ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಈ ಬಹುಬೇಡಿಕೆಯ ಸಂಗೀತ ನಿರ್ದೇಶಕನಿಗೆ ಸಿಗುತ್ತಿರುವ ಸಂಭಾವನೆ ಸಣ್ಣದೇನಲ್ಲ. ಪ್ರತಿ ಸಿನಿಮಾಗೆ ಅವರು ಬಹುಕೋಟಿ ರೂಪಾಯಿ ಪಡೆದುಕೊಳ್ಳುತ್ತಾರೆ. ಮೂಲಗಳ ಪ್ರಕಾರ ಈಗ ಅವರ ಸಂಭಾವನೆ 18 ಕೋಟಿ ರೂ. ಮುಟ್ಟಿದೆ!

ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದು ಎಂಎಂ ಕೀರವಾಣಿ ಅವರೇ. ರಾಜಮೌಳಿ ಅವರ ಎಲ್ಲ ಸಿನಿಮಾಗಳಿಗೆ ಇವರದ್ದೇ ಸಂಗೀತ.

2001ರಲ್ಲಿ ರಾಜಮೌಳಿ ಮೊದಲ ಬಾರಿಗೆ ನಿರ್ದೇಶನ ಮಾಡಿದ ‘ಸ್ಟೂಡೆಂಟ್​ ನಂ.1’ ಸಿನಿಮಾದಿಂದ ಹಿಡಿದು ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರದವರೆಗೆ ಎಲ್ಲ ಸಿನಿಮಾಗಳಿಗೂ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಜಮೌಳಿ ಅವರ ಗೆಲುವಿನಲ್ಲಿ ಕೀರವಾಣಿ ಅವರ ಕೊಡುಗೆಯೂ ಮಹತ್ವದ್ದಾಗಿದೆ. ಅಂಥ ದಿಗ್ಗಜ ನಿರ್ದೇಶಕನ ನೆಚ್ಚಿನ ಸಂಗೀತ ನಿರ್ದೇಶಕರಾದ ಅವರಿಗೆ ಬರೋಬ್ಬರಿ 18 ಕೋಟಿ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಒಮ್ಮೆ ರಾಷ್ಟ್ರ ಪ್ರಶಸ್ತಿ, 8 ಬಾರಿ ಫಿಲ್ಮ್​ಫೇರ್​ ಪ್ರಶಸ್ತಿ, 11 ಬಾರಿ ‘ನಂದಿ ಅವಾರ್ಡ್ಸ್​’ ಪಡೆದುಕೊಂಡ ಖ್ಯಾತಿ ಎಂಎಂ ಕೀರವಾಣಿ ಅವರಿಗೆ ಸಲ್ಲುತ್ತದೆ. ಸಂಗೀತ ನಿರ್ದೇಶನದ ಜೊತೆಗೆ ಗೀತರಚನಕಾರನಾಗಿಯೂ ಅವರು ಬ್ಯುಸಿ ಆಗಿದ್ದಾರೆ. ಮುಂಬರುವ ದಿನಗಳಲ್ಲಿ ಕೂಡ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್

ಇದನ್ನೂ ಓದಿ

ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada