‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಕೀರವಾಣಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?
ಕೀರವಾಣಿ
Follow us
ರಾಜೇಶ್ ದುಗ್ಗುಮನೆ
|

Updated on: Jul 25, 2023 | 6:30 AM

ಕೆಲ ಸಿನಿಮಾಗಳು ಬಹಳವೇ ಕಾಡುತ್ತವೆ. ಒಂದೊಳ್ಳೆಯ ಸಿನಿಮಾ ಮಾಡಿದರೆ ಅದು ನೋಡುಗರನ್ನು ಮಾತ್ರವಲ್ಲ ಆ ಸಿನಿಮಾ ನಿರ್ಮಾತೃರರ ನಿದ್ದೆಯನ್ನು ಕೆಡಿಸುತ್ತದೆ. ಆಸ್ಕರ್ ವಿಜೇತ ಎಂಎಂ ಕೀರವಾಣಿಗೆ (MM Keeravani) ಈಗ ಅಕ್ಷರಶಃ ಹಾಗೆಯೇ ಆಗಿದೆ. ‘ಚಂದ್ರಮುಖಿ 2’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಕಾಡಿತು ಎಂಬುದನ್ನು ಅವರು ವಿವರಿಸಿದ್ದಾರೆ. ಅವರು ನೀಡಿರುವ ಹೇಳಿಕೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ ಕೀರವಾಣಿ ಖ್ಯಾತಿ ಹೆಚ್ಚಾಯಿತು. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿತು. ಈ ಚಿತ್ರದಿಂದ ಕೀರವಾಣಿ ಅವರು ವಿಶ್ವಾದ್ಯಂತ ಖ್ಯಾತಿ ಪಡೆದರು. ಹೀಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಚಂದ್ರಮುಖಿ 2’ ಚಿತ್ರವನ್ನು ವೀಕ್ಷಿಸಿದೆ. ಚಿತ್ರದಲ್ಲಿ ಬರುವ ಪಾತ್ರಗಳು ಸಾವಿನ ಭಯದಿಂದ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತವೆ. ಅವುಗಳಿಗೆ ಜೀವ ತುಂಬಲು 2 ತಿಂಗಳು ಹಗಲು-ರಾತ್ರಿ ಶ್ರಮವಹಿಸಿದ್ದೇನೆ. ಈ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡಿಲ್ಲ. ಗುರು ಕಿರಣ್ ಹಾಗೂ ವಿದ್ಯಾಸಾಗರ್ ಅವರೇ ನನಗೆ ವಿಶ್ ಮಾಡಿ’ ಎಂದು ಕೀರವಾಣಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವನ ಸಾಗಿಸಲು ಕಾರು ತೊಳೆಯುತ್ತಿದ್ದ ಯುವಕನ ಜೀವನವನ್ನೇ ಬದಲಿಸಿದ ರಜನೀಕಾಂತ್​ರ ಒಂದು ಕರೆ

‘ಚಂದ್ರಮುಖಿ’ ಸಿನಿಮಾ ದೆವ್ವದ ಕಥೆಯನ್ನು ಹೊಂದಿತ್ತು. ಸೀಕ್ವೆಲ್ ಕೂಡ ಭೂತ-ದೆವ್ವದ ಬಗ್ಗೆ ಇದೆ. ರಾಘವ್ ಲಾರೆನ್ಸ್, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಪಿ ವಾಸು ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ 19ರಂದು ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ