AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ

ತೆಲುಗು ನಟ ಮೋಹನ್ ಬಾಬು ಅವರ ಕುಟುಂಬದ ಜಗಳ ಬೀದಿಗೆ ಬಂದಿದೆ. ಈ ಬಗ್ಗೆ ಪ್ರಶ್ನಿಸಲು ಹೋದ ವರದಿಗಾರರ ಮೇಲೆ ಮೋಹನ್ ಬಾಬು ಹಲ್ಲೆ ಮಾಡಿದ್ದಾರೆ. ಹೈದರಾಬಾದ್​ನಲ್ಲಿ ಈ ಘಟನೆ ನಡೆದಿದೆ. ಟಿವಿ9 ವರದಿಗಾರ ರಂಜಿತ್​ ಮೇಲೆ ನಟ ಮೋಹನ್ ​ಬಾಬು ಹಲ್ಲೆ ಮಾಡಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆ ಆಗಿವೆ.

ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ
ವರದಿಗಾರನ ಮೇಲೆ ಮೋಹನ್ ಬಾಬು ಹಲ್ಲೆ
ಮದನ್​ ಕುಮಾರ್​
|

Updated on:Dec 10, 2024 | 8:56 PM

Share

ಟಾಲಿವುಡ್​ ನಟ ಮೋಹನ್​ ಬಾಬು ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ಕಿರಿಕ್ ಶುರುವಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಮೋಹನ್​ ಬಾಬು ಪುತ್ರರಾದ ಮಂಚು ಮನೋಜ್​, ಮಂಚು ವಿಷ್ಣು ಕಿತ್ತಾಡಿಕೊಂಡಿದ್ದಾರೆ. ಅವರ ಕುಟುಂಬದ ಬಿರುಕು ಜಗಜ್ಜಾಹೀರಾಗಿದೆ. ಅಪ್ಪ-ಮಕ್ಕಳು ಪರಸ್ಪರ ಪೊಲೀಸ್ ದೂರು ನೀಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಸುದ್ದಿ ಆಗಿದೆ. ಈ ಕುರಿತು ವರದಿ ಮಾಡಲು ತೆರಳಿದ್ದ ಟಿವಿ9 ವರದಿಗಾರರ ಮೇಲೆ ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದಾರೆ. ಅವರ ವರ್ತನೆಗೆ ಖಂಡನೆ ವ್ಯಕ್ತವಾಗುತ್ತಿದೆ.

ಟಿವಿ9 ಪ್ರತಿನಿಧಿ ಮೇಲೆ ತೆಲುಗು ಹೀರೋ ಮೋಹನ್ ಬಾಬು ಹಲ್ಲೆ ನಡೆಸಿದ್ದಾರೆ. ಹೈದರಾಬಾದ್​​ನ ಮಂಚುಟೌನ್​ನ ಜಲ್ಲಪಲ್ಲಿ ಬಳಿ ಗೂಂಡಾಗಿರಿ ಮಾಡಲಾಗಿದೆ. ಕೌಟುಂಬಿಕ ಕಲಹದ ಬಗ್ಗೆ ವರದಿಗೆ ತೆರಳಿದ್ದಾಗ ದುಂಡಾವರ್ತನೆ ತೋರಿದ್ದಾರೆ. ‘ಟಿವಿ9’ ವಾಹಿನಿಯ ಲೋಗೋ ಕಿತ್ತುಕೊಂಡು ವರದಿಗಾರನಿಗೆ ಮೋಹನ್ ​ಬಾಬು ಥಳಿಸಿದ್ದಾರೆ. ಮಾಧ್ಯಮ ಸಿಬ್ಬಂದಿಯೊಂದಿಗೆ ಅವರು ಅಸಭ್ಯ ವರ್ತನೆ ತೋರಿದ್ದಾರೆ.

ಘಟನೆ ಬಳಿಕ ಮೋಹನ್ ​ಬಾಬು ಬಳಿಯಿದ್ದ ಪರವಾನಗಿಯುಳ್ಳ ಗನ್​ ಸೀಜ್ ಮಾಡಲಾಗಿದೆ. ಮೋಹನ್ ಬಾಬು, ಪುತ್ರ ವಿಷ್ಣು ಅವರಿಗೆ ಸೇರಿದ ಗನ್​ಗಳನ್ನು ಹೈದರಾಬಾದ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಲಪಲ್ಲಿಯ ಮೋಹನ್ ಬಾಬು ಮನೆಯಲ್ಲಿ ಹೈಡ್ರಾಮಾ ನಡೆದಿದೆ. ಮನೋಜ್ ಮನೆಗೆ ಬರದಂತೆ ಸಿಬ್ಬಂದಿ ತಡೆದಿದ್ದಾರೆ.

ಮನೋಜ್ ಮತ್ತು ಮೌನಿಕಾ ಗೇಟುಗಳನ್ನು ಮುರಿದು ಒಳಹೋದರು. ಸುಮಾರು 70 ಬೌನ್ಸರ್‌ಗಳನ್ನು ನಿಯೋಜಿಸಿದ್ದರು. ಸ್ಥಳದಲ್ಲಿ ಪೊಲೀಸರು ಕೂಡ ಇದ್ದಾರೆ. ಮೋಹನ್ ಬಾಬು ಮನೆಯಲ್ಲಿ ಏನಾಗುತ್ತಿದೆ ಎನ್ನುವುದು ಸಸ್ಪೆನ್ಸ್ ಆಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಮೋಹನ್ ಬಾಬು ಅವರು ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಅಪ್ಪನ ಮೇಲೆ ದೂರು ನೀಡಿದ ನಟ, ಈಗ ಅಣ್ಣನ ಮೇಲೂ ಆರೋಪ

ಜಲಪಲ್ಲಿಯಲ್ಲಿರುವ ಮೋಹನ್ ಬಾಬು ನಿವಾಸದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ತೆಲಂಗಾಣ ಎಡಿಜಿಪಿ ಅವರನ್ನು ಭೇಟಿಯಾದ ನಂತರ ಮನೋಜ್ ದಂಪತಿ ನಿವಾಸಕ್ಕೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ತಡೆದರು. ಅವರು ಗೇಟ್‌ಗಳನ್ನು ಒಡೆದು ಒಳಗೆ ಪ್ರವೇಶಿಸಿದರು. ಇದರಿಂದ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಗಳು ಮನೆಯಲ್ಲೇ ಇದ್ದಾಳೆ ಎಂದು ಮನೋಜ್ ಆತಂಕ ವ್ಯಕ್ತಪಡಿಸಿದರು. ಭದ್ರತಾ ಸಿಬ್ಬಂದಿ ಗೇಟ್ ತೆರೆಯದ ಕಾರಣ ಅವರು ಸ್ವಲ್ಪ ಹೊತ್ತು ಕಾರಿನಲ್ಲಿಯೇ ಇದ್ದರು. ನಂತರ ಅವರು ಗೇಟ್‌ಗಳನ್ನು ತಳ್ಳಿದರು ಮತ್ತು ಬಲವಂತವಾಗಿ ಒಳಗೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 pm, Tue, 10 December 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?