AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮೋಹನ್​ಲಾಲ್ ಸಾಹಸ: ನಂದ ಕಿಶೋರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ

Mohan Lal: ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಕಳೆದ ಒಂದು ತಿಂಗಳಿನಿಂದ ಮೈಸೂರಿನಲ್ಲಿ ನಡೆದಿದೆ. ಸಿನಿಮಾ ನಿರ್ದೇಶವನ್ನು ನಂದ ಕಿಶೋರ್ ಮಾಡುತ್ತಿದ್ದಾರೆ.

ಮೈಸೂರಿನಲ್ಲಿ ಮೋಹನ್​ಲಾಲ್ ಸಾಹಸ: ನಂದ ಕಿಶೋರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ
ಮೋಹನ್ ಲಾಲ್
ಮಂಜುನಾಥ ಸಿ.
|

Updated on: Aug 25, 2023 | 10:54 PM

Share

ಮಲಯಾಳಂ ಸ್ಟಾರ್ ನಟ ಮೋಹನ್ ​ಲಾಲ್​ಗಾಗಿ (Mohan Lal) ಕನ್ನಡದ ನಂದ ಕಿಶೋರ್ (Nanda Kishore) ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ವೃಷಭ’ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆದಿದೆ. ಭಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ಮೋಹನ್​ಲಾಲ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರು ನಟಿಸುತ್ತಿದ್ದಾರೆ. ಹಾಲಿವುಡ್ ತಂತ್ರಜ್ಞರು ಸೇರಿದಂತೆ ಭಾರತದ ಕೆಲವು ಅತ್ಯದ್ಭುತ ತಂತ್ರಜ್ಞರು ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

“ವೃಷಭ” ಸಿನಿಮಾದ ಪ್ರಥಮ ಹಂತದ ಚಿತ್ರೀಕರಣ ಇದೀಗ ಮುಗಿದಿದೆ. ಸುಮಾರು ಒಂದು ತಿಂಗಳ ಕಾಲ ಮೈಸೂರಿನಲ್ಲಿ ಈ ಸಿನಿಮಾದ ಶೂಟಿಂಗ್ ನಡೆದಿತ್ತು. ಮೈಸೂರಿನಲ್ಲಿ ಅದ್ಭುತ ಆಕ್ಷನ್ ದೃಶ್ಯಗಳನ್ನು ಈ ಸಿನಿಮಾಕ್ಕಾಗಿ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ನಂದಕಿಶೋರ್ ನಿರ್ದೇಶನದ ‘ವೃಷಭ’ ಸಿನಿಮಾದ ಶೂಟಿಂಗ್ ಜುಲೈ 22 ರಂದು ಮೈಸೂರಿನಲ್ಲಿ ಶುರುವಾಗಿತ್ತು. ಮೈಸೂರಿನಲ್ಲಿ ನಡೆದ ಚಿತ್ರೀಕರಣದಲ್ಲಿ ನಟ ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಇನ್ನೂ ಹಲವು ಪಾಲ್ಗೊಂಡಿದ್ದರು.

ಹಾಲಿವುಡ್‌ ನ ಜನಪ್ರಿಯ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿರುವ ನಿಕ್ ಥರ್ಲೋ ‘ವೃಷಭ’ ಸಿನಿಮಾಕ್ಕೆ ಕೆಲಸ ಮಾಡುತ್ತಿದ್ದಾರೆ. ಅದರ ಜೊತೆಗೆ “ಬಾಹುಬಲಿ”, “ಪುಲಿಮುರುಗನ್”, “ಶಿವಾಜಿ – ದಿ ಬಾಸ್”, “ಎಂದಿರನ್”, “ಪುಷ್ಪ – ದಿ ರೈಸ್”, ‘ಅನ್ನಿಯನ್’ ಸೇರಿದಂತೆ ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳಿಗೆ ಮೈ ನವಿರೇಳುವಂಥಹಾ ಸಾಹಸ ದೃಶ್ಯಗಳನ್ನು ಸಂಯೋಜನೆ ಮಾಡಿರುವ ಸಾಹಸ ನಿರ್ದೇಶಕ ಪೀಟರ್ ಹೇನ್ಸ್ ಈ ಸಿನಿಮಾದ ಸಾಹಸ ದೃಶ್ಯಗಳನ್ನು ಸಂಯೋಜನೆ ಮಾಡಿದ್ದಾರೆ. ಪೀಟರ್ ಹೇನ್ಸ್ ಕನ್ನಡದ ‘ಸತ್ಯ’ ಸಿನಿಮಾಕ್ಕೆ ಒಂದು ಫೈಟ್ ಸಂಯೋಜನೆ ಮಾಡಿದ್ದರು.

ಇದನ್ನೂ ಓದಿ:Mohanlal: ಅನಾಯಾಸವಾಗಿ 100 ಕೆಜಿ ತೂಕ ಎತ್ತಿದ ಮೋಹನ್​ಲಾಲ್​; ವೈರಲ್​ ವಿಡಿಯೋ ನೋಡಿ ಹದಿಹರೆಯದವರಿಗೂ ಅಚ್ಚರಿ

‘ವೃಷಭ’ ಸಿನಿಮಾ ಕುರಿತು ಮಾತನಾಡಿರುವ ನಿರ್ದೇಶಕ ನಂದಕಿಶೋರ್, ‘ಮೊದಲ ಹಂತದ ಶೂಟಿಂಗ್​ನಲ್ಲಿ ನಾವು ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಬಂದಿದೆ. ಆ ಬಗ್ಗೆ ಬಹಳ ಖುಷಿ ಇದೆ. ಹಗಲು ರಾತ್ರಿ ಕಷ್ಟಪಟ್ಟು ದುಡಿದ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳುತ್ತೇನೆ. ಮೋಹನ್ ಲಾಲ್, ರೋಶನ್, ಶ್ರೀಕಾಂತ್, ರಾಗಿಣಿ ಮುಂತಾದವರು ನಮ್ಮ ಡೆಡ್ ಲೈನ್ ಗಳನ್ನು ಪೂರೈಸುವಲ್ಲಿ ಪೂರಕವಾಗಿ ಕೆಲಸ ಮಾಡಿದ್ದಾರೆ. “ಪುಲಿಮುರುಗನ್” ಚಿತ್ರದ ನಂತರ ಮೋಹನ್ ಲಾಲ್ ಮತ್ತು ಪೀಟರ್ ಹೇನ್ಸ್ ಈ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ವೃಷಭ ಚಿತ್ರವು ಭಾರತದ ಅತೀ ದೊಡ್ಡ ಆಕ್ಷನ್ ಸಿನಿಮಾಗಳಲ್ಲಿ ಒಂದಾಗಲಿದೆ” ಎಂದಿದ್ದಾರೆ.

ಮೋಹನ್ ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ “ವೃಷಭ” ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳವನ್ನು ಹೂಡಲಾಗಿದೆ. ಚಿತ್ರದಲ್ಲಿ ವಿಎಫ್ಎಕ್ಸ್ ದೊಡ್ಡ ಪ್ರಮಾಣದಲ್ಲಿದ್ದು, ಇದು ಕೇವಲ ಆಕ್ಷನ್ ಸಿನಿಮಾ ಅಷ್ಟೆ ಅಲ್ಲದೆ, ಸಿನಿಮಾದಲ್ಲಿ ಭಾವುಕತೆ ಸಹ ಇರಲಿದೆ. 2024ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು, ಸಿನಿಮಾವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲಂಸ್, ಎವಿಎಸ್ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ. ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರವು ತೆಲುಗು, ಮಲಯಾಳಂ, ಹಿಂದಿ, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ