AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್​ಲಾಲ್ ತಾಯಿ ಶಾಂತಕುಮಾರಿ ನಿಧನ; ಅಂತಿಮ ನಮನ ಸಲ್ಲಿಸಿದ ಮಮ್ಮುಟಿ

ಕಳೆದ ಹಲವು ವರ್ಷಗಳಿಂದ ಮೋಹನ್​​ಲಾಲ್ ತಾಯಿ ಶಾಂತಕುಮಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಡಿ.30) ಅವರು ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಮಮ್ಮುಟಿ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಚಿತ್ರೀಕರಣಕ್ಕೆ ತೆರಳಿದ್ದ ಮೋಹನ್​ಲಾಲ್ ಅವರು ಕೂಡಲೇ ಶೂಟಿಂಗ್ ನಿಲ್ಲಿಸಿ ಮನೆಗೆ ವಾಪಸ್ ಬಂದಿದ್ದಾರೆ.

ಮೋಹನ್​ಲಾಲ್ ತಾಯಿ ಶಾಂತಕುಮಾರಿ ನಿಧನ; ಅಂತಿಮ ನಮನ ಸಲ್ಲಿಸಿದ ಮಮ್ಮುಟಿ
Mohanlal, Shanthakumari
ಮದನ್​ ಕುಮಾರ್​
|

Updated on: Dec 30, 2025 | 6:18 PM

Share

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ (Mohanlal) ಅವರಿಗೆ ಈ ವರ್ಷದ ಕೊನೆಯಲ್ಲಿ ನೋವಿನ ಸಂದರ್ಭ ಎದುರಾಗಿದೆ. ಅವರ ತಾಯಿ ಶಾಂತಕುಮಾರಿ ನಿಧನರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 30) ಶಾಂತಕುಮಾರಿ (Shanthakumari) ಅವರು ಎರ್ನಾಕಲಮ್ ನಿವಾಸದಲ್ಲಿ ಕೊನೆಯುಸಿರು ಎಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಶಾಂತಕುಮಾರಿ ಅವರು ನಿಧನರಾಗುವ ವೇಳೆಗೆ ಮೋಹನ್​​ಲಾಲ್ ಅವರು ಮನೆಯಲ್ಲಿ ಇರಲಿಲ್ಲ. ಚಿತ್ರೀಕರಣದ ಸಲುವಾಗಿ ಅವರು ಹೊರಗಡೆ ಹೋಗಿದ್ದರು. ತಾಯಿಯ ನಿಧನದ (Mohanlal Mother Death) ಸುದ್ದಿ ತಿಳಿದು ಕೂಡಲೇ ಮನೆಗೆ ವಾಪಸ್ಸಾದರು.

ಶಾಂತಕುಮಾರಿ ಅವರ ನಿಧನದಿಂದಾಗಿ ಮೋಹನ್​​ಲಾಲ್ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಸ್ನೇಹಿತರು ಮತ್ತು ಆಪ್ತರು ಬಂದು ಸಂತಾಪ ಸೂಚಿಸುತ್ತಿದ್ದಾರೆ. ಖ್ಯಾತ ನಟ ಮಮ್ಮುಟಿ ಅವರು ಆಗಮಿಸಿ ಶಾಂತಕುಮಾರಿ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಶಾಂತಕುಮಾರಿ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಹಲವು ವರ್ಷಗಳಿಂದ ಶಾಂತಕುಮಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ತಿರುವನಂತಪುರಂನಲ್ಲಿ ಅವರು ಹೆಚ್ಚು ಕಾಲ ವಾಸವಾಗಿದ್ದರು. ಆದರೆ ಸ್ಟ್ರೋಕ್ ಆದ ಬಳಿಕ ಅವರನ್ನು ಕೊಚ್ಚಿಗೆ ಕರೆದುಕೊಂದು ಬಂದು ಮೋಹನ್​​ಲಾಲ್ ಚಿಕಿತ್ಸೆ ಕೊಡಿಸುತ್ತಿದ್ದರು. ಕಳೆದ 10 ವರ್ಷಗಳಿಂದ ಶಾಂತಕುಮಾರಿ ಅವರು ಹಾಸಿಗೆ ಹಿಡಿದಿದ್ದರು. ಎರ್ನಾಕುಲಂ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು.

ಮೋಹನ್​ಲಾಲ್ ಅವರ ಸಾಧನೆಗೆ ತಾಯಿ ಶಾಂತಕುಮಾರಿ ಅವರು ಪ್ರೇರಣೆ ಆಗಿದ್ದರು. ಈ ವರ್ಷ ಮೋಹನ್​​ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂತು. ಪ್ರಶಸ್ತಿ ಸ್ವೀಕರಿಸಿ ಕೊಚ್ಚಿಗೆ ಮರಳಿದ ಬಳಿಕ ಅವರು ಮೊದಲು ಭೇಟಿ ಆಗಿದ್ದೇ ತಮ್ಮ ತಾಯಿಯನ್ನು. ‘ಅಮ್ಮಂದಿರ ದಿನ’ದ ಪ್ರಯುಕ್ತ ಮೋಹನ್​ಲಾಲ್ ಅವರು ತಾಯಿಯ ಫೋಟೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಗೌರವ ಪಡೆದ ಮಲಯಾಳಂ ನಟ ಮೋಹನ್​ಲಾಲ್​

ಶಾಂತಕುಮಾರಿ ಅವರ ಪತಿ ವಿಶ್ವನಾಥ್ ನಾಯರ್ ಅವರು ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರು ಕೂಡ ಅನಾರೋಗ್ಯದಿಂದ ಮೃತರಾಗಿದ್ದರು. ಹಿರಿಯ ಮಗ ಪ್ಯಾರೆಲಾಲ್ ಅವರು 2000ನೇ ಇಸವಿಯಲ್ಲಿ ಮರಣಹೊಂದಿದ್ದರು. ಮೋಹನ್​​ಲಾಲ್ ಅವರು ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ತಾಯಿಗಾಗಿ ಸಮಯ ನೀಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?