AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರದಲ್ಲಿ ಕನ್ನಡಿಗರ ದಂಡು: ಟ್ರೇಲರ್ ನೋಡಿ

‘ವೃಷಭ’ ಸಿನಿಮಾದಲ್ಲಿ ಮೋಹನ್​ಲಾಲ್ ಅವರು ರಾಜ ಹಾಗೂ ಉದ್ಯಮಿಯಾಗಿ ಡಬ್ಬಲ್ ರೋಲ್ ಮಾಡಿದ್ದಾರೆ. ರಾಗಿಣಿ ದ್ವಿವೇದಿ, ಅಯ್ಯಪ್ಪ, ಸಮರ್ಜಿತ್ ಲಂಕೇಶ್, ಕಿಶೋರ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದಲ್ಲಿ ಹಲವು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ.

ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರದಲ್ಲಿ ಕನ್ನಡಿಗರ ದಂಡು: ಟ್ರೇಲರ್ ನೋಡಿ
Vrusshabha Movie Trailer Release Event
ಮದನ್​ ಕುಮಾರ್​
|

Updated on: Dec 17, 2025 | 9:11 PM

Share

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಹೆಸರು ಮಾಡಿರುವ ನಂದ ಕಿಶೋರ್ ಅವರು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ. ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್ ಅಭಿನಯದ ‘ವೃಷಭ’ (Vrusshabha) ಸಿನಿಮಾಗೆ ನಂದ ಕಿಶೋರ್ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕೊಚ್ಚಿಯಲ್ಲಿ ಅದ್ದೂರಿಯಾಗಿ ನಡೆಯಿತು. ಮೋಹನ್​ಲಾಲ್ (Mohanlal), ಸಮರ್ಜಿತ್ ಲಂಕೇಶ್, ರಾಗಿಣಿ ದ್ವಿವೇದಿ, ನಯನ್ ಸಾರಿಕಾ, ನಂದ ಕಿಶೋರ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

‘ಕನೆಕ್ಟ್ ಮೀಡಿಯಾ’, ‘ಬಾಲಾಜಿ ಟೆಲಿಫಿಲ್ಮ್ಸ್’, ‘ಅಭಿಷೇಕ್ ಎಸ್. ವ್ಯಾಸ್ ಸ್ಟುಡಿಯೋಸ್’ ಜೊತೆಗೂಡಿ ‘ವೃಷಭ’ ಸಿನಿಮಾ ನಿರ್ಮಾಣ ಮಾಡಿವೆ. ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ. ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್. ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ, ಜೂಹಿ ಪರೇಖ್ ಮೆಹ್ತಾ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಡಿಸೆಂಬರ್​​ 25ಕ್ಕೆ ವಿಶ್ವದಾದ್ಯಂತ ‘ವೃಷಭ’ ಸಿನಿಮಾ ರಿಲೀಸ್ ಆಗಲಿದೆ.

ವಿಶೇಷ ಎಂದರೆ ‘ವೃಷಭ’ ಸಿನಿಮಾದಲ್ಲಿ ಕನ್ನಡದ ಕಲಾವಿದರು ಹೆಚ್ಚಾಗಿ ನಟಿಸಿದ್ದಾರೆ. ಹೀರೋ ಮಗನ ಪಾತ್ರದಲ್ಲಿ ಸಮರ್ಜಿತ್ ಲಂಕೇಶ್ ಅಭಿನಯಿಸಿದ್ದಾರೆ. ರಾಗಿಣಿ ದ್ವಿವೇದಿ, ಗರುಡ ರಾಮ್, ಕಿಶೋರ್, ಅಯ್ಯಪ್ಪ ಪಿ. ಶರ್ಮಾ ಮುಂತಾದವರು ಮೋಹನ್​​ಲಾಲ್ ಜೊತೆ ನಟಿಸಿರುವುದು ವಿಶೇಷ. ಟ್ರೇಲರ್​​ನಲ್ಲಿ ಈ ಎಲ್ಲರ ಪಾತ್ರಗಳ ಝಲಕ್ ತೋರಿಸಲಾಗಿದೆ.

‘ವೃಷಭ’ ಸಿನಿಮಾದ ಟ್ರೇಲರ್:

ದ್ವಿಪಾತ್ರದಲ್ಲಿ ಮೋಹನ್​​ಲಾಲ್ ನಟಿಸಿದ್ದಾರೆ. ರಾಜನಾಗಿ ಮತ್ತು ಉದ್ಯಮಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಟ್ರೇಲರ್ ಆ್ಯಕ್ಷನ್‌ ದೃಶ್ಯಗಳಿಂದ ಕೂಡಿದೆ. ನಿರ್ಮಾಪಕಿ ಏಕ್ತಾ ಆರ್. ಕಪೂರ್ ಮಾತನಾಡಿ, ‘ನಮಗೆ ಈ ಅವಕಾಶ ನೀಡಿದ್ದಕ್ಕಾಗಿ ಮೋಹನ್​ಲಾಲ್ ಸರ್ ಅವರಿಗೆ ನಾನು ತುಂಬ ಕೃತಜ್ಞನಾಗಿದ್ದೇನೆ. ನಂದ ಕಿಶೋರ್ ಅವರ ದೃಷ್ಟಿಕೋನದಡಿಯಲ್ಲಿ ಕೆಲಸ ಮಾಡುವುದು ನಿಜವಾಗಿಯೂ ಪ್ರತಿಫಲದಾಯಕವಾಗಿದೆ’ ಎಂದರು.

ಇದನ್ನೂ ಓದಿ: ಮೋಹನ್​ಲಾಲ್​ಗೆ ಸನ್ಮಾನ ಮಾಡಿದ ಮಮ್ಮೂಟಿ

‘ಮೋಹನ್​ಲಾಲ್ ಸರ್ ಜೊತೆ ಕೆಲಸ ಮಾಡುವುದು ಪ್ರತಿಯೊಬ್ಬ ನಿರ್ದೇಶಕನ ಕನಸು. ಅವರು ಕಥೆಗೆ ಸಂಪೂರ್ಣವಾಗಿ ಶರಣಾಗುತ್ತಾರೆ. ಈ ಕಥೆಯನ್ನು ಜೀವಂತಗೊಳಿಸಲು ಅವಿಶ್ರಾಂತವಾಗಿ ಶ್ರಮಿಸಿದ ತಂತ್ರಜ್ಞರ ಇಡೀ ತಂಡದ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ನಿರ್ದೇಶಕ ನಂದ ಕಿಶೋರ್ ಹೇಳಿದರು. ಡಿಸೆಂಬರ್ 25ರಂದು ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು