AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಹಾದಿ ಹಿಡಿದ ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’

Mohanlal movie: ‘ದೃಶ್ಯಂ’ ಭಾರತದ ಅತ್ಯುತ್ತಮ ಸಸ್ಪೆನ್ಸ್ ಕ್ರೈಂ ಸಿನಿಮಾ. ಭಾರತದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಹ ಹೌದು. ಅತಿ ಹೆಚ್ಚು ಭಾಷೆಗೆ ರೀಮೇಕ್ ಆದ ಸಿನಿಮಾ ಸಹ ಹೌದು. ‘ದೃಶ್ಯಂ’ ಸಿನಿಮಾದ ಎರಡನೇ ಭಾಗ ಈಗಾಗಲೇ ಬಿಡುಗಡೆ ಆಗಿ ಅದೂ ಸಹ ಹಿಟ್ ಆಗಿದೆ. ಇದೀಗ ಇದೇ ಸಿನಿಮಾದ ಮೂರನೇ ಭಾಗದ ಚಿತ್ರೀಕರಣ ನಡೆದಿದ್ದು, ಮೂರನೇ ಭಾಗ ಶೀಘ್ರವೇ ಬಿಡುಗಡೆ ಆಗಬೇಕಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ.

‘ಟಾಕ್ಸಿಕ್’ ಹಾದಿ ಹಿಡಿದ ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’
Drishyam 3
ಮಂಜುನಾಥ ಸಿ.
|

Updated on:Mar 21, 2026 | 3:42 PM

Share

ಮೋಹನ್ ಲಾಲ್ (Mohanlal) ನಟನೆಯ ಬಹುನಿರೀಕ್ಷಿತ ‘ದೃಶ್ಯಂ’, ಭಾರತದ ಅತ್ಯುತ್ತಮ ಸಸ್ಪೆನ್ಸ್ ಕ್ರೈಂ ಸಿನಿಮಾ. ಭಾರತದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಹ ಹೌದು. ಅತಿ ಹೆಚ್ಚು ಭಾಷೆಗೆ ರೀಮೇಕ್ ಆದ ಸಿನಿಮಾ ಸಹ ಹೌದು. ‘ದೃಶ್ಯಂ’ ಸಿನಿಮಾದ ಎರಡನೇ ಭಾಗ ಈಗಾಗಲೇ ಬಿಡುಗಡೆ ಆಗಿ ಅದೂ ಸಹ ಹಿಟ್ ಆಗಿದೆ. ಇದೀಗ ಇದೇ ಸಿನಿಮಾದ ಮೂರನೇ ಭಾಗದ ಚಿತ್ರೀಕರಣ ನಡೆದಿದ್ದು, ಮೂರನೇ ಭಾಗ ಶೀಘ್ರವೇ ಬಿಡುಗಡೆ ಆಗಬೇಕಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ.

ಜೀತು ಜೋಸೆಫ್ ನಿರ್ದೇಶನದ ಈ ಸಿನಿಮಾವು ಏಪ್ರಿಲ್ 2ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಇದೀಗ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಆನ್‌ಲೈನ್ ವರದಿಗಳ ಪ್ರಕಾರ, ಚಿತ್ರತಂಡವು ಏಪ್ರಿಲ್ ಬದಲಿಗೆ ಮೇ ಅಥವಾ ಜೂನ್ 2026 ರಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ.

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಗಲ್ಫ್ ರಾಷ್ಟ್ರಗಳ ಮೇಲೂ ಸಹ ಆಗುತ್ತಿದ್ದು, ಚಿತ್ರದ ಬಿಡುಗಡೆಗೆ ಲಭ್ಯತೆ ಇಲ್ಲದಿರುವುದು ಈ ವಿಳಂಬಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಆದರೂ, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ‘ದೃಶ್ಯಂ 3’ ಮುಂದೂಡಲ್ಪಟ್ಟರೆ, ಅದೇ ಸಮಯದಲ್ಲಿ ಬಿಡುಗಡೆಯಾಗಲಿರುವ ಜಯಸೂರ್ಯ ನಟನೆಯ ‘ಆಡು 3’, ನಿವಿನ್ ಪೌಲಿ ಅವರ ‘ಪ್ರತಿಚ್ಛಾಯ’ ಮತ್ತು ‘ವಾಳಾ 2’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆಗೆ ಅನುಕೂಲವಾಗಲಿದೆ.

ಇದನ್ನೂ ಓದಿ:‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

‘ದೃಶ್ಯಂ’ ಸರಣಿಯ ಮೊದಲ ಎರಡು ಭಾಗಗಳು ಭಾರಿ ಯಶಸ್ಸು ಕಂಡಿವೆ. ಮೂರನೇ ಭಾಗದಲ್ಲೂ ಜಾರ್ಜ್‌ಕುಟ್ಟಿ ಮತ್ತು ಆತನ ಕುಟುಂಬದ ಕಥೆ ಮುಂದುವರಿಯಲಿದ್ದು, ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್ ಸೇರಿದಂತೆ ಹಳೆಯ ತಾರಾಗಣವೇ ಇರಲಿದೆ. ಅಜಯ್ ದೇವಗನ್ ನಟನೆಯ ಹಿಂದಿ ‘ದೃಶ್ಯಂ 3’ ಅಕ್ಟೋಬರ್ 2 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಮೋಹನ್ ಲಾಲ್ ಅವರು ಸದ್ಯಕ್ಕೆ ತರುಣ್ ಮೂರ್ತಿ ನಿರ್ದೇಶನದ ‘L366’, ‘ಜೈಲರ್ 2’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sat, 21 March 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ