ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರ ಕ್ರಿಸ್​​ಮಸ್ ಹಬ್ಬಕ್ಕೆ ಬಿಡುಗಡೆ; ‘ಮಾರ್ಕ್’ ಜೊತೆ ಪೈಪೋಟಿ

ಈ ವರ್ಷದ ಕ್ರಿಸ್​​ಮಸ್ ಹಬ್ಬಕ್ಕೆ ಮೋಹನ್​ಲಾಲ್ ಅವರ ಹೊಸ ಸಿನಿಮಾ ‘ವೃಷಭ’ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಸಿನಿಮಾದಲ್ಲಿ ಕನ್ನಡದ ಕಲಾವಿದರಾದ ರಾಗಿಣಿ ದ್ವಿವೇದಿ, ಸಮರ್ಜಿತ್ ಲಂಕೇಶ್ ಮುಂತಾದವರು ನಟಿಸಿದ್ದಾರೆ. ಕನ್ನಡದ ಖ್ಯಾತ ಡೈರೆಕ್ಟರ್ ನಂದ ಕಿಶೋರ್ ಅವರು ಪ್ಯಾನ್ ಇಂಡಿಯಾ ‘ವೃಷಭ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರ ಕ್ರಿಸ್​​ಮಸ್ ಹಬ್ಬಕ್ಕೆ ಬಿಡುಗಡೆ; ‘ಮಾರ್ಕ್’ ಜೊತೆ ಪೈಪೋಟಿ
Mohanlal

Updated on: Nov 09, 2025 | 8:08 AM

ಸ್ಯಾಂಡಲ್​ವುಡ್ ನಿರ್ದೇಶಕ ನಂದ ಕಿಶೋರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಮಲಯಾಳಂ ಸಿನಿಮಾ ‘ವೃಷಭ’ (Vrusshabha) ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಮೋಹನ್​​ಲಾಲ್ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ವೃಷಭ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವೃಷಭ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಮೋಹನ್‌ಲಾಲ್ (Mohanlal) ನಟನೆ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಾಣಲಿದೆ. ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಸಿದ್ಧವಾಗದೆ. ಇನ್ನುಳಿದ ಭಾಷೆಗಳಿಗೆ ಡಬ್ ಆಗುತ್ತಿದೆ. ಕ್ರಿಸ್ಮಸ್ ಸಂದರ್ಭದಲ್ಲೇ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಕೂಡ ಬಿಡುಗಡೆ ಆಗುತ್ತಿತ್ತು, ಭರ್ಜರಿ ಪೈಪೋಟಿ ಏರ್ಪಡಲಿದೆ.

ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಕೂಡ ‘ವೃಷಭ’ ಸಿನಿಮಾದಲ್ಲಿ ನಟಿಸಿದ್ದಾರೆ. ಮೋಹನ್‌ಲಾಲ್ ಮಗನ ಪಾತ್ರವನ್ನು ಸಮರ್ಜಿತ್ ಅವರು ಮಾಡಿದ್ದಾರೆ. ರಾಗಿಣಿ ದ್ವಿವೇದಿ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ. ನಯನ್ ಸಾರಿಕಾ, ಅಜಯ್, ನೇಹಾ ಸಕ್ಸೇನಾ ಅವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ವೃಷಭ’ ಸಿನಿಮಾಗೆ ಸ್ಯಾಮ್ ಸಿಎಸ್ ಸಂಗೀತ ಸಂಯೋಜಿಸಿದ್ದಾರೆ. ರಸುಲ್ ಪೂಕುಟ್ಟಿ ಸೌಂಡ್ ಡಿಸೈನ್ ಮಾಡಿದ್ದಾರೆ. ಜನಾರ್ಧನ್ ಮಹರ್ಷಿ ಮತ್ತು ಕಾರ್ತಿಕ್ ಅವರು ಈ ಸಿನಿಮಾಗೆ ಸಂಭಾಷಣೆ ಬರೆದಿದ್ದಾರೆ. ಪೀಟರ್ ಹೈನ್, ಸ್ಟಂಟ್ ಸಿಲ್ವಾ ಮತ್ತು ನಿಖಿಲ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಎಲ್ಲ ಘಟಾನುಘಟಿ ತಂತ್ರಜ್ಞರ ಕಾರಣದಿಂದಲೂ ‘ವೃಷಭ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ.

‘ಕನೆಕ್ಟ್ ಮೀಡಿಯಾ’, ‘ಬಾಲಾಜಿ ಟೆಲಿಫಿಲ್ಮ್ಸ್’, ‘ಅಭಿಷೇಕ್ ಎಸ್. ವ್ಯಾಸ್ ಸ್ಟುಡಿಯೋಸ್’ ಜೊತೆಯಾಗಿ ಪ್ರಸ್ತುತಪಡಿಸುತ್ತಿರುವ ‘ವೃಷಭ’ ಸಿನಿಮಾವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ. ಪದ್ಮಕುಮಾರ್, ವರುಣ್ ಮಾಥುರ್, ಪ್ರವೀರ್ ಸಿಂಗ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್. ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪರೇಖ್ ಮೆಹ್ತಾ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಗೌರವ ಪಡೆದ ಮಲಯಾಳಂ ನಟ ಮೋಹನ್​ಲಾಲ್​

‘ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ‘ವೃಷಭ’ ಚಿತ್ರದಲ್ಲಿ ಗ್ರಾಫಿಕ್ಸ್ ದೃಶ್ಯಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದಲ್ಲಿ ಯಾವುದೇ ರೀತಿ ರಾಜಿ ಆಗಿಲ್ಲ. ಪ್ರೇಕ್ಷಕರಿಗೆ ಅತ್ಯುತ್ತಮವಾದ ಸಿನಿಮಾ ಅನುಭವವನ್ನು ನೀಡುವುದು ನಮ್ಮ ಬದ್ಧತೆಯಾಗಿದೆ. ನಾವು 2025ರ ಕ್ರಿಸ್‌ಮಸ್‌ಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ’ ಎಂದು‌ ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.