AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್-ಅಟ್ಲಿ ಸಿನಿಮಾ ಸೇರಿಕೊಂಡ ಹಾಲಿವುಡ್ ಗುರು ಅಲೆಕ್ಸಾಂಡ್ರಾ, ಯಾರೀಕೆ?

Allu Arjun and Atlee: ‘ಪುಷ್ಪ 2’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಇದೀಗ ತಮ್ಮ ಮುಂದಿನ ಸಿನಿಮಾ ಮೂಲಕ ಪ್ಯಾನ್ ವರ್ಲ್ಡ್ ನಟನಾಗುವತ್ತ ಗಮನ ಕೇಂದ್ರೀಕರಿಸಿದ್ದಾರೆ. ಇದೇ ಕಾರಣಕ್ಕೆ ನಿರ್ದೇಶಕ ಅಟ್ಲಿ ಜೊತೆಗೆ ಕೈ ಜೋಡಿಸಿದ್ದು, ಸಿನಿಮಾಕ್ಕೆ ಖ್ಯಾತ ಹಾಲಿವುಡ್ ಪ್ರತಿಭೆಗಳನ್ನು ಗುಡ್ಡೆ ಹಾಕಿಕೊಳ್ಳುತ್ತಿದ್ದಾರೆ. ಇದೀಗ ಹಾಲಿವುಡ್ ‘ಗುರು’ ಅಲೆಕ್ಸಾಂಡ್ರಾ ಅವರು ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಯಾರೀಕೆ?

ಅಲ್ಲು ಅರ್ಜುನ್-ಅಟ್ಲಿ ಸಿನಿಮಾ ಸೇರಿಕೊಂಡ ಹಾಲಿವುಡ್ ಗುರು ಅಲೆಕ್ಸಾಂಡ್ರಾ, ಯಾರೀಕೆ?
Alexandria
ಮಂಜುನಾಥ ಸಿ.
|

Updated on: Aug 27, 2025 | 8:03 AM

Share

‘ಪುಷ್ಪ’ ಹಾಗೂ ‘ಪುಷ್ಪ 2’ ಸಿನಿಮಾ ಇಂದ ಪ್ಯಾನ್ ಇಂಡಿಯಾ ನಟನಾಗಿರುವ ಅಲ್ಲು ಅರ್ಜುನ್, ಇದೀಗ ತಮ್ಮ ಮುಂದಿನ ಸಿನಿಮಾ ಮೂಲಕ ಪ್ಯಾನ್ ವರ್ಲ್ಡ್ ಮೇಲೆ ಕಣ್ಣಿಟ್ಟಿದ್ದಾರೆ. ಸೂಪರ್ ಹೀರೋ ಮಾದರಿಯ ಸಿನಿಮಾನಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದು, ಸಿನಿಮಾ ಅನ್ನು ತಮಿಳಿನ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ. ದೀಪಿಕಾ ಪಡುಕೋಣೆ ಈ ಸಿನಿಮಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಹಾಲಿವುಡ್​ನ ಖ್ಯಾತ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಇದೀಗ ಹಾಲಿವುಡ್​ನ ‘ಗುರು’ ಎಂದೇ ಖ್ಯಾತರಾಗಿರುವ ಅಲೆಕ್ಸಾಂಡ್ರಾ ವಿಕ್ಸೋಂಟಿ ಅವರು ಅಲ್ಲು ಅರ್ಜುನ್-ಅಟ್ಲಿ ಸಿನಿಮಾ ಸೇರಿಕೊಂಡಿದ್ದಾರೆ. ಅಷ್ಟಕ್ಕೂ ಯಾರು ಈ ಅಲೆಕ್ಸಾಂಡ್ರಿಯಾ?

ಅಲ್ಲು ಅರ್ಜುನ್-ಅಟ್ಲಿ ಸಿನಿಮಾ ಕೇವಲ ಸಿನಿಮಾ ಮಾತ್ರವಲ್ಲದೆ ಅದೊಂದು ‘ಪ್ರಾಜೆಕ್ಟ್’ ಆಗಿದೆ. ಹಾಗಾಗಿ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮೊದಲೇ ಸಿನಿಮಾದ ಮಾರ್ಕೆಟಿಂಗ್ ಪ್ಲ್ಯಾನ್ ಮಾಡಲಾಗಿದೆ. ಸಿನಿಮಾ ಅನ್ನು ಮಾರ್ಕೆಟಿಂಗ್​​ನಿಂದಲೇ ಗೆಲ್ಲಿಸುವ ಉಮೇದಿನಲ್ಲಿ ಅಟ್ಲಿ ಇದ್ದು, ಇದೇ ಕಾರಣಕ್ಕೆ ಹಾಲಿವುಡ್​ನ ಖ್ಯಾತ ಮಾರ್ಕೆಟಿಂಗ್ ಗುರು ಅಲೆಕ್ಸಾಂಡ್ರಾ ವಿಕ್ಸೋಂಟಿ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ಅಲೆಕ್ಸಾಂಡ್ರಾ ವಿಕ್ಸೋಂಟಿ ಹಾಲಿವುಡ್​ನ ಖ್ಯಾತ ಮಾರ್ಕೆಟಿಂಗ್ ಕ್ಯಾಂಪೇನರ್. ‘ಅವತಾರ್’, ‘ಫಾಸ್ಟ್ ಆಂಡ್ ಫ್ಯೂರಿಯಸ್’, ‘ಡ್ಯೂನ್’, ‘ಜುರಾಸಿಕ್ ವರ್ಲ್ಡ್’, ‘ಬಾರ್ಬಿ’ ಇನ್ನೂ ಹಲವು ದೊಡ್ಡ ಬಜೆಟ್​ನ ಬ್ಲಾಕ್ ಬಸ್ಟರ್ ಸಿನಿಮಾಗಳಿಗೆ ಮಾರ್ಕೆಟಿಂಗ್ ಕ್ಯಾಂಪೇನ್ ಮಾಡಿದ್ದಾರೆ. ಹಾಲಿವುಡ್​ನ ಬಲು ಬೇಡಿಕೆಯ ಮಾರ್ಕೆಟಿಂಗ್ ಕ್ಯಾಂಪೇನರ್ ಆಗಿ ಅಲೆಕ್ಸಾಂಡ್ರಿಯಾ ಗುರುತಿಸಿಕೊಂಡಿದ್ದಾರೆ. ಇದೀಗ ಅವರನ್ನು ಅಲ್ಲು ಅರ್ಜುನ್-ಅಟ್ಲಿ ಸಿನಿಮಾ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಅಲ್ಲು ಅರ್ಜುನ್-ಅಟ್ಲಿ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ

ಸಿನಿಮಾ ಅನ್ನು ಹಾಲಿವುಡ್​ನಲ್ಲಿ ಮಾರ್ಕೆಟಿಂಗ್ ಮಾಡುವ ಜವಾಬ್ದಾರಿಯನ್ನು ಅಲೆಕ್ಸಾಂಡ್ರಾಗೆ ನೀಡಲಾಗಿದೆ. ಅಮೆರಿಕ, ಮೆಕ್ಸಿಕೊ, ಕೆನಡಾ ಇನ್ನಿತರೆ ಹಾಲಿವುಡ್ ಪ್ರಭಾವ ಇರುವ ದೇಶಗಳಲ್ಲಿ ಅಲ್ಲು ಅರ್ಜುನ್-ಅಟ್ಲಿ ಸಿನಿಮಾವನ್ನು ಪ್ರಮೋಟ್ ಮಾಡಲೆಂದು ಅಲೆಕ್ಸಾಂಡ್ರಾ ಅವರನ್ನು ನೇಮಿಸಿಕೊಳ್ಳಲಾಗಿದೆ. ಈ ಸಿನಿಮಾ ಮೂಲಕ ಹಾಲಿವುಡ್​ನಲ್ಲಿ ಛಾಪು ಮೂಡಿಸುವ ಗುರಿಯನ್ನು ಅಲ್ಲು ಅರ್ಜುನ್ ಇರಿಸಿಕೊಂಡಿದ್ದು, ಅದೇ ಕಾರಣಕ್ಕೆ ಈಗ ಹಾಲಿವುಡ್​ನ ಅತ್ಯುತ್ತಮ ಮಾರ್ಕೆಟಿಂಗ್ ತಜ್ಞೆಯ ನೆರವನ್ನು ಪಡೆಯಲಾಗುತ್ತಿದೆ.

ಅಟ್ಲಿ, ಹಾಲಿವುಡ್​ನ ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’ ಮಾದರಿಯ ಕತೆಯೊಂದನ್ನು ತಯಾರು ಮಾಡಿಕೊಂಡಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಕೆಲ ಅತ್ಯುತ್ತಮ ಸ್ಟುಡಿಯೋಗಳ ಜೊತೆ ಹಾಗೂ ಪ್ರಾಮ್ಟ್ ಮೇಕರ್ಸ್​ಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಈಗಾಗಲೇ ಅಲ್ಲು ಅರ್ಜುನ್ ಹಾಗೂ ಅಟ್ಲಿ ಹಾಲಿವುಡ್​​ ಸ್ಟುಡಿಯೋಗಳನ್ನು ಒಂದು ಸುತ್ತು ಹಾಕಿಕೊಂಡು ಬಂದಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು