ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ಅಶೋಕ್ ಕಶ್ಯಪ್

ಬೆಂಗಳೂರಿನ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಅಧ್ಯಕ್ಷರಾಗಿ ಸೋಮವಾರ ಅಶೋಕ್ ಕಶ್ಯಪ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ಅಶೋಕ್ ಕಶ್ಯಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 07, 2022 | 10:17 PM

ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕನ್ನಡ ಚಿತ್ರರಂಗದ ಖ್ಯಾತ ಛಾಯಾಗ್ರಾಹಕ ಅಶೋಕ್ ಕಶ್ಯಪ್ (Ashok Kashyap) ಅವರು ಇತ್ತೀಚೆಗೆ ನೇಮಕಗೊಂಡಿದ್ದಾರೆ. ಸೋಮವಾರ (ನವೆಂಬರ್ 7) ಅಶೋಕ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಳ್ಳಲಾಗಿದೆ. ಈ ಮೊದಲು ಅಧ್ಯಕ್ಷರಾಗಿದ್ದ ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಿನಾಂಕ 05-11-2022ರಂದು ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಆದೇಶಿಸಿತ್ತು.

ಅಶೋಕ್ ಅಶ್ಯಪ್ ಅವರು ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಾಹಕ. ಅವರ ‘ಶಾಪ’ ಚಿತ್ರದ ಛಾಯಾಗ್ರಾಹಣಕ್ಕೆ ರಾಜ್ಯ ಪ್ರಶಸ್ತಿ ದೊರೆತಿದೆ. ಭುವನಜ್ಯೋತಿ, ಶ್, ಕರುಳಿನ ಕೂಗು, ಸೂಪರ್, ಉಪ್ಪಿ2, ಕಾಫಿತೋಟ ಸೇರಿದಂತೆ ವಿವಿಧ ಚಿತ್ರಗಳಿಗೆ ಅಶೋಕ್ ಕಶ್ಯಪ್ ಅವರು ಛಾಯಾಗ್ರಾಹಕರಾಗಿ ಶ್ರಮಿಸಿದ್ದಾರೆ. ಸಿನಿಮಾ ನಿರ್ದೇಶನ ಮತ್ತು ನಟನೆಯಲ್ಲಿ ಸಹ ಅವರು ಗುರುತಿಸಿಕೊಂಡಿದ್ದಾರೆ.

‘ಕನ್ನಡ ಚಿತ್ರರಂಗದ ತಾಂತ್ರಿಕ ವರ್ಗದಲ್ಲಿ ನಾವು ಶ್ರಮಿಸಿದ್ದೇವೆ. ನಮ್ಮನ್ನು ಸರ್ಕಾರ ಗುರುತಿಸಿ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಿನಿಮಾ ತಾಂತ್ರಿಕ ವರ್ಗಕ್ಕೆ ಖುಷಿ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಈವರೆಗೆ ಪಡೆದ ನನ್ನ ಅನುಭವವನ್ನು ಅಕಾಡೆಮಿ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪೂರಕವಾಗಿ ಬಳಕೆ ಮಾಡುತ್ತೇನೆ’ ಎಂದು ಅಶೋಕ್ ಕಶ್ಯಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಬೆಂಗಳೂರಿನ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಅಧ್ಯಕ್ಷರಾಗಿ ಸೋಮವಾರ ಅಶೋಕ್ ಕಶ್ಯಪ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಹಾಗೂ ಅಕಾಡೆಮಿಯ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಛಾಯಾಗ್ರಾಹಕ ಬಸವರಾಜ್ ಸೇರಿದಂತೆ ಹಲವು ಗಣ್ಯರು, ಚಿತ್ರ ನಿರ್ದೇಶಕರು, ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಕೋರಿದರು.

Published On - 9:45 pm, Mon, 7 November 22

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ