Devara First Half Review: ಹೇಗಿದೆ ‘ದೇವರ’ ಸಿನಿಮಾ ಮೊದಲಾರ್ಧ? ಇಲ್ಲಿದೆ ಡೀಟೇಲ್ಸ್

‘ದೇವರ’ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್, ಜಾನ್ವಿ ಕಪೂರ್, ಸೈಫ್ ಅಲಿ ಖಾನ್ ನಟಿಸಿದ್ದಾರೆ. ಕೊರಟಾಲ ಶಿವ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಎನ್​ಟಿಆರ್ ಆರ್ಟ್ಸ್​ ನಿರ್ಮಾಣ ಮಾಡಿದೆ. ಈ ಚಿತ್ರದ ಬಜೆಟ್ 200 ಕೋಟಿ ರೂಪಾಯಿ ಇದೆ.

Devara First Half Review: ಹೇಗಿದೆ ‘ದೇವರ’ ಸಿನಿಮಾ ಮೊದಲಾರ್ಧ? ಇಲ್ಲಿದೆ ಡೀಟೇಲ್ಸ್
ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
| Updated By: Ganapathi Sharma

Updated on:Sep 27, 2024 | 6:29 AM

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾ ಎಂದರೆ ಅದು ‘ದೇವರ’ ಚಿತ್ರ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆಚಾರ್ಯ’ ಮೂಲಕ ಸೋಲು ಕಂಡ ಕೊರಟಾಲ ಶಿವ ಅವರು ‘ದೇವರ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡುವ ಪ್ರಯತ್ನದಲ್ಲಿ ಇದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ಕಲಾವಿದರಾದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ನಟಿಸಿದ್ದಾರೆ.

‘ದೇವರ’ ಸಿನಿಮಾದ ಕಾಲಘಟ್ಟ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ. 80 ಹಾಗೂ 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಜೂನಿಯರ್ ಎನ್‌ಟಿಆರ್ ಅವರ ಎಂಟ್ರಿ ಗಮನ ಸೆಳೆದಿದೆ. ಭರ್ಜರಿ ಮಾಸ್ ಆಗಿ ಅವರ ಆಗಮನ ಆಗುತ್ತದೆ. ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಹೈಲೈಟ್ ಆಗಿದೆ. ಪ್ರತಿ ದೃಶ್ಯಗಳನ್ನು ಅದ್ದೂರಿಯಾಗಿ ತರಲು ಪ್ರಯತ್ನ ನಡೆದಿದೆ.

ಜಾನ್ವಿ ಕಪೂರ್ ಅವರ ಆಗಮನ ಮೊದಲಾರ್ಧದಲ್ಲಿ ಆಗುವುದೇ ಇಲ್ಲ. ಹೀಗಾಗಿ, ರೊಮ್ಯಾಂಟಿಕ್ ಸಾಂಗ್‌ನ ಆಗಮನ ಆಗಿಲ್ಲ. ಸಿನಿಮಾ ಉದ್ದಕ್ಕೂ ಆ್ಯಕ್ಷನ್ ದೃಶ್ಯಗಳು ಹೇರಳವಾಗಿ ಇದೆ. ಇದು ಎನ್‌ಟಿಆರ್ ಅಭಿಮಾನಿಗಳನ್ನು ರಂಜಿಸುತ್ತದೆ.

ಸಿನಿಮಾ ತುಂಬಾನೇ ನಿಧಾನವಾಗಿ ಸಾಗುತ್ತದೆ. ಆಗಾಗ ಸಪ್ಪೆ ದೃಶ್ಯಗಳು ಇವೆ. ಸಮುದ್ರದ ತೀರದಲ್ಲೇ ಸಿನಿಮಾದ ಕಥೆ ಸಾಗುತ್ತದೆ. ‌ಅದ್ದೂರಿ ಸೆಟ್‌ಗಳು ಗಮನ ಸೆಳೆಯುತ್ತವೆ. ನೆಗೆಟಿವ್ ಶೇಡ್‌ನಲ್ಲಿ‌ ಸೈಫ್ ಅಲಿ ಖಾನ್ ಅವರು ಮಿಂಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:24 am, Fri, 27 September 24

ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ