AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ekka Movie Review: ಕಮರ್ಷಿಯಲ್ ಚೌಕಟ್ಟಿನೊಳಗೆ ಮನರಂಜನೆ ನೀಡುವ ‘ಎಕ್ಕ’

Ekka Movie Review: ಕಮರ್ಷಿಯಲ್ ಚೌಕಟ್ಟಿನೊಳಗೆ ಮನರಂಜನೆ ನೀಡುವ ‘ಎಕ್ಕ’
Ekka Movie Psoter
ಎಕ್ಕ
UA
  • Time - 147 Minutes
  • Released - 18 July 2025
  • Language - Kannada
  • Genre - Crime, Drama
Cast - ಯುವ ರಾಜ್​ಕುಮಾರ್, ಸಂಜನಾ ಆನಂದ್, ಸಂಪದಾ, ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಸಾಧು ಕೋಕಿಲ, ಪೂರ್ಣಚಂದ್ರ ಮೈಸೂರು ಮುಂತಾದವರು.
Director - ರೋಹಿತ್ ಪದಕಿ
3
Critic's Rating
ಮದನ್​ ಕುಮಾರ್​
| Edited By: |

Updated on:Jul 18, 2025 | 5:36 PM

Share

‘ಎಕ್ಕ’ (Ekka Movie) ಸಿನಿಮಾದ ‘ಬ್ಯಾಂಗಲ್ ಬಂಗಾರಿ’ ಹಾಡು ವೈರಲ್ ಆಗಿ ತುಂಬಾ ಸದ್ದು ಮಾಡಿದೆ. ಹಾಡಿನಿಂದಾಗಿಯೇ ಹೆಚ್ಚು ನಿರೀಕ್ಷೆ ಬೆಳೆಯಿತು ಎಂದರೂ ತಪ್ಪಿಲ್ಲ. ಇನ್ನು, ಟ್ರೇಲರ್ ಬಿಡುಗಡೆ ಆದಾಗ ಇನ್ನಷ್ಟು ನಿರೀಕ್ಷೆ ಹೆಚ್ಚಿತು. ಮಿಡಲ್ ಕ್ಲಾಸ್ ಹುಡುಗ ಭೂತಕ ಲೋಕಕ್ಕೆ ಎಂಟ್ರಿ ನೀಡುವ ಕಥೆ ಈ ಸಿನಿಮಾದಲ್ಲಿದೆ ಎಂಬುದು ತಿಳಿಯಿತು. ಇಂದು (ಜುಲೈ 18) ಈ ಸಿನಿಮಾ ರಿಲೀಸ್ ಆಗಿದೆ. ನಿರ್ದೇಶಕ ರೋಹಿತ್ ಪದಕಿ ಮತ್ತು ನಟ ಯುವ ರಾಜ್​ಕುಮಾರ್ (Yuva Rajkumar) ಅವರ ಕಾಂಬಿನೇಷನ್​ನಲ್ಲಿ ಬಂದ ‘ಎಕ್ಕ’ ಸಿನಿಮಾದಲ್ಲಿ ಅಂಡರ್​​ ವರ್ಲ್ಡ್​ ಕಹಾನಿ ಜೊತೆ ಫ್ಯಾಮಿಲಿ ಸೆಂಟಿಮೆಂಟ್ ಕಥೆ ಕೂಡ ಇದೆ.

ಈ ಸಿನಿಮಾದ ಒನ್​ ಲೈನ್ ಕಥೆ ಗಮನಿಸಿದರೆ ‘ಜೋಗಿ’ ರೀತಿಯ ಸಿನಿಮಾಗಳು ನೆನಪಾಗುತ್ತವೆ. ಹಳ್ಳಿಯಲ್ಲಿ ಇರುವ ಹೀರೋ ಬಡತನದ ಕುಟುಂಬದವನು. ದುಡಿಯಬೇಕು ಎಂದು ಬೆಂಗಳೂರಿಗೆ ಬಂದು ಅನಿವಾರ್ಯ ಕಾರಣದಿಂದ ಭೂಗತ ಲೋಕಕ್ಕೆ ಎಂಟ್ರಿ ಪಡೆಯುತ್ತಾನೆ. ಹಳ್ಳಿಯಲ್ಲಿರುವ ತಾಯಿಗೆ ಮಗ ಈ ರೀತಿ ರೌಡಿ ಆಗಿದ್ದಾನೆ ಎಂಬುದರ ಅರಿವು ಇರುವುದಿಲ್ಲ. ಅಷ್ಟಕ್ಕೂ ಅವರು ಭೂಗತ ಜಗತ್ತಿಗೆ ಕಾಲಿಟ್ಟಿದ್ದು ಹೇಗೆ? ಅಂತಿಮವಾಗಿ ಅವನು ಅದರಿಂದ ಹೇಗೆ ಹೊರಬರುತ್ತಾನೆ ಎಂಬುದೇ ‘ಎಕ್ಕ’ ಚಿತ್ರದ ಕಹಾನಿ.

ಯುವ ರಾಜ್​ಕುಮಾರ್ ಅವರು ಎರಡು ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಶೇಡ್​ನಲ್ಲಿ ಅವರು ಮುಗ್ಧ ಹಳ್ಳಿ ಹುಡುಗ. ಯಾರಿಗೆ ತೊಂದರೆ ಆದರೂ ಸಹಾಯಕ್ಕೆ ಮುಂದಾಗುವ ಒಳ್ಳೆಯ ಮನಸ್ಸಿನವನು. ಆ ಗುಣದಿಂದಾಗಿ ಆತ ಸಂಕಷ್ಟಕ್ಕೆ ಕೂಡ ಸಿಲುಕಿಕೊಳ್ಳುತ್ತಾನೆ. ಆದರೆ ಇನ್ನೊಂದು ಶೇಡ್​ನಲ್ಲಿ ಭೂಗದ ಲೋಕದ ರೌಡಿ. ದೊಡ್ಡ ದೊಡ್ಡ ಡಾನ್​ಗಳಿಗೆ ಬಲಗೈ ಬಂಟನಂತೆ ಇರುವ ವ್ಯಕ್ತಿ. ಈ ನಡುವೆ ಆತ ಲವರ್ ಬಾಯ್ ಕೂಡ ಹೌದು. ಇಂಥ ಶೇಡ್​ಗಳು ಇರುವ ಪಾತ್ರವನ್ನು ಯುವ ರಾಜ್​ಕುಮಾರ್ ನಿಭಾಯಿಸಿದ್ದಾರೆ.

ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ‘ಎಕ್ಕ’ ಸಿನಿಮಾದ ಕಥೆ ಸಿದ್ಧವಾದಂತಿದೆ. ಮಾಸ್ ಪ್ರೇಕ್ಷಕರು ಇಷ್ಟಪಡುವಂತಹ ಆ್ಯಕ್ಷನ್ ಸನ್ನಿವೇಶಗಳು ಈ ಚಿತ್ರದಲ್ಲಿವೆ. ಕುತೂಹಲ ಕಾಯ್ದುಕೊಳ್ಳುವಂತಹ ಸಸ್ಪೆನ್ಸ್ ಇದೆ. ಕ್ಲಾಸ್ ಅಭಿಮಾನಿಗಳಿಗಾಗಿ ತಾಯಿ-ಮಗನ ಸೆಂಟಿಮೆಂಟ್ ಕೂಡ ಇದೆ. ಕಾಮಿಡಿ ರಿಲೀಫ್ ನೀಡಲು ಸಾಧು ಕೋಕಿಲ ಪಾತ್ರವಿದೆ. ಹೀಗೆ ಎಲ್ಲವನ್ನೂ ಬ್ಯಾಲೆನ್ಸ್ ಮಾಡಲು ಪ್ರಯತ್ನಿಸಿರುವುದು ಸಿನಿಮಾಗೆ ಕೊಂಚ ಹೊರೆಯಾದಂತಿದೆ. ಸಿದ್ಧಸೂತ್ರಗಳನ್ನು ಮೀರಿ ಹೊಸತನ ನೀಡಲು ಪ್ರಯತ್ನಿಸಿದ್ದರೆ ಚೆನ್ನಾಗಿರುತ್ತಿತ್ತು.

ಇದನ್ನೂ ಓದಿ: Hebbuli Cut Review: ನಕ್ಕು ನಗಿಸುತ್ತಲೇ ಕರಾಳ ಸತ್ಯ ತೆರೆದಿಡುವ ಹೆಬ್ಬುಲಿ ಕಟ್

ಇಡೀ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಅವರ ಪಾತ್ರ ಹೈಲೈಟ್ ಆಗಿದೆ. ತಾಯಿ ಪಾತ್ರ ಮಾಡಿರುವ ಶ್ರುತಿ ಅವರು ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಗಮನ ಸೆಳೆಯುತ್ತಾರೆ. ನಾಯಕಿಯರಾದ ಸಂಜನಾ ಆನಂದ್ ಮತ್ತು ಸಂಪದಾ ಅವರ ಪಾತ್ರಗಳಿಗೆ ಕಡಿಮೆ ಸ್ಕ್ರೀನ್ ಸ್ಪೇಸ್ ಸಿಕ್ಕಿದೆ. ಕಥೆಗೆ ತಿರುವು ನೀಡುವಂತಹ ಪಾತ್ರದಲ್ಲಿ ಅತುಲ್ ಕುಲಕರ್ಣಿ ಅವರು ಕಾಣಿಸಿಕೊಂಡಿದ್ದಾರೆ.

ಸಂಗೀತ ನಿರ್ದೇಶನ ಚರಣ್ ಅವರು ಹಾಡುಗಳ ಮೂಲಕ ಗಮನ ಸೆಳೆದಿದ್ದಾರೆ. ಹಿನ್ನೆಲೆ ಸಂಗೀತದಲ್ಲಿ ಅವರು ಜಾಸ್ತಿ ಸ್ಕೋರ್ ಮಾಡಬಹುದಿತ್ತು. ‘ಬ್ಯಾಂಗಲ್ ಬಂಗಾರಿ..’ ಹಾಡು ಇಷ್ಟಪಟ್ಟವರು ದೊಡ್ಡ ಪರದೆಯಲ್ಲಿ ಎಂಜಾಯ್ ಮಾಡಬಹುದು. ಸತ್ಯ ಹೆಗಡೆ ಅವರ ಛಾಯಾಗ್ರಹಣ ಉತ್ತಮವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 18 July 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು