
‘ಲೂಸಿಯಾ’ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ (Pawan Kumar) ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಿರ್ದೇಶನದ ಬಗ್ಗೆ ಪ್ರೇಕ್ಷಕರಿಗೆ ಭರವಸೆ ಇದೆ. ‘ಯು ಟರ್ನ್’ ನಂತರ ಅವರು ದೊಡ್ಡ ಗ್ಯಾಪ್ ತೆಗೆದುಕೊಂಡು ‘ಧೂಮಂ’ ಸಿನಿಮಾ (Dhoomam Movie) ಮಾಡಿದ್ದಾರೆ. ವಿಶೇಷ ಏನೆಂದರೆ ಈ ಚಿತ್ರ ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಿದೆ. ಇಂದು (ಜೂನ್ 23) ತೆರೆಕಂಡಿರುವ ಈ ಚಿತ್ರದಲ್ಲಿ ಪ್ರತಿಭಾನ್ವಿತ ಕಲಾವಿದರಾದ ಫಹಾದ್ ಫಾಸಿಲ್ (Fahadh Faasil), ರೋಷನ್ ಮ್ಯಾಥೀವ್, ಅಪರ್ಣಾ ಬಾಲಮುರಳಿ, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಪೋಸ್ಟರ್ ಮತ್ತು ಟ್ರೇಲರ್ ಮೂಲಕ ಗಮನ ಸೆಳೆದ ‘ಧೂಮಂ’ ಸಿನಿಮಾದ ಫಸ್ಟ್ ಹಾಫ್ನಲ್ಲಿ ಏನೆಲ್ಲ ಇದೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ…
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:04 pm, Fri, 23 June 23