Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

Rashmika Mandanna | Amitabh Bachchan: ಹಲವು ಕಾರಣಗಳಿಂದ ‘ಗುಡ್​ಬೈ’ ಚಿತ್ರದ ಮೇಲೆ ನಿರೀಕ್ಷೆ ಮೂಡಿತ್ತು. ಆ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ಸಿನಿಮಾ ಯಶಸ್ವಿ ಆಗಿದೆಯಾ?

Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..
ಅಮಿತಾಭ್ ಬಚ್ಚನ್, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Oct 07, 2022 | 11:37 AM

ಇಂದು (ಅ.7) ‘ಗುಡ್​ಬೈ’ ಸಿನಿಮಾ (Goodbye) ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅಮಿತಾಭ್​ ಬಚ್ಚನ್ (Amitabh Bachchan), ನೀನಾ ಗುಪ್ತಾ, ಪವೇಲ್​ ಗುಲಾಟಿ ಮುಂತಾದವರು ನಟಿಸಿದ್ದಾರೆ. ಇದು ರಶ್ಮಿಕಾ ಮಂದಣ್ಣ ನಟನೆಯ ಮೊದಲ ಹಿಂದಿ ಸಿನಿಮಾ ಎಂಬುದು ವಿಶೇಷ. ಆ ಕಾರಣಕ್ಕಾಗಿ ಅವರ ಅಭಿಮಾನಿಗಳಿಗೆ ಈ ಚಿತ್ರದ ಮೇಲೆ ವಿಶೇಷ ನಿರೀಕ್ಷೆ ಇದೆ. ಕೆಲವು ದಿನಗಳ ಹಿಂದೆ ಬಿಡುಗಡೆ ಆದ ಟ್ರೇಲರ್​ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಹಾಗಾದರೆ ಜನರಿಗೆ ಇಡೀ ಸಿನಿಮಾ ಇಷ್ಟ ಆಯ್ತಾ? ‘ಗುಡ್​ ಬೈ?’ ನೋಡಿ ಬಂದ ವೀಕ್ಷಕರು ಏನು ಹೇಳ್ತಾ ಇದ್ದಾರೆ? ಚಿತ್ರದಲ್ಲಿ ಏನುಂಟು, ಏನಿಲ್ಲ ಎಂಬ ಬಗ್ಗೆ ಟ್ವಿಟರ್​ ವಿಮರ್ಶೆ ಮೂಲಕ ರಶ್ಮಿಕಾ (Rashmika Mandanna) ಅಭಿಮಾನಿಗಳು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.

ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಸಿನಿಮಾ ನೋಡಿ ಅಭಿಪ್ರಾಯ ತಿಳಿಸಿದರೆ ಚಿತ್ರಕ್ಕೆ ಅನುಕೂಲ ಆಗುತ್ತದೆ. ಆ ಉದ್ದೇಶದಿಂದ ಇಂದು (ಅ.7) ಟಿಕೆಟ್​ ಬೆಲೆಯನ್ನು ತಗ್ಗಿಸಲಾಗಿದೆ. ಅನೇಕ ಕಡೆಗಳಲ್ಲಿ ಕೇವಲ 150 ರೂಪಾಯಿ ನಿಗದಿ ಆಗಿದೆ. ಹಾಗಿದ್ದರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಬುಕಿಂಗ್​ ಆಗಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾಗೆ ಸಾಧ್ಯವಾಗಿಲ್ಲ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ಇದು ಪಕ್ಕಾ ಫ್ಯಾಮಿಲಿ ಸಿನಿಮಾ. ಕುಟುಂಬದವರ ಜೊತೆ ಕುಳಿತು ಚಿತ್ರ ನೋಡಿ. ಪ್ರತಿ ದೃಶ್ಯ ಕೂಡ ಭಾವುಕವಾಗಿ ಮೂಡಿಬಂದಿದೆ’ ಎಂದು ನೆಟ್ಟಿಗರು ಟ್ವೀಟ್​ ಮಾಡಿದ್ದಾರೆ. ತಂದೆ ಮತ್ತು ಮಗಳ ಪಾತ್ರದಲ್ಲಿ ಅಮಿತಾಭ್​ ಬಚ್ಚನ್​ ಹಾಗೂ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ‘ಬಿಗ್​ ಬಿ ನಟನೆ ಸೂಪರ್ ಆಗಿದೆ. ಅವರು ಯಾಕೆ ಲೆಜೆಂಡ್​ ಎಂಬುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ಅಭಿಮಾನಿಯೊಬ್ಬರು ಪೋಸ್ಟ್​ ಮಾಡಿದ್ದಾರೆ.

ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶ ಸಿಗುವುದು ಎಂದರೆ ಸಣ್ಣ ಮಾತಲ್ಲ. ಅಂಥ ಅವಕಾಶವನ್ನು ಪಡೆದುಕೊಂಡಿದ್ದು ರಶ್ಮಿಕಾ ಪಾಲಿನ ಹೆಮ್ಮೆಯ ಸಂಗತಿ. ಆ ಕಾರಣದಿಂದ ಅವರಿಗೆ ಈ ಸಿನಿಮಾ ತುಂಬ ವಿಶೇಷವಾಗಿದೆ. ಅಂತಿಮವಾಗಿ ಬಾಕ್ಸ್​ ಆಫೀಸ್​ನಲ್ಲಿ ‘ಗುಡ್​ಬೈ’ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:37 am, Fri, 7 October 22

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ