AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

KGF 2 Twitter Review: ಪ್ರೇಕ್ಷಕರು ‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅನಿಸಿಕೆ ತಿಳಿಸುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಹಾಗೂ ನಟ ಯಶ್​ ಕಾಂಬಿನೇಷನ್​ಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ
ಕೆಜಿಎಫ್​: ಚಾಪ್ಟರ್​ 2
TV9 Web
| Edited By: |

Updated on: Apr 14, 2022 | 8:02 AM

Share

ಬಹುಕಾಲದ ಕಾಯುವಿಕೆಗೆ ಫುಲ್​ಸ್ಟಾಪ್​ ಬಿದ್ದಿದೆ. ಸಿನಿಪ್ರಿಯರು ಭಾರಿ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಮೊದಲ ದಿನ, ಮೊದಲ ಶೋ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ಚಿತ್ರಮಂದಿರಕ್ಕೆ ಮುಗಿಬಿದ್ದಿದ್ದಾರೆ. ಕಷ್ಟಪಟ್ಟು ಫಸ್ಟ್​ ಶೋ ಟಿಕೆಟ್​ ಗಿಟ್ಟಿಸಿಕೊಂಡು ಸಿನಿಮಾ ನೋಡಿದ್ದಾರೆ. ದೇಶಾದ್ಯಂತ ‘ಕೆಜಿಎಫ್​ 2’ ಧೂಳೆಬ್ಬಿಸುತ್ತಿದೆ. ಮಧ್ಯರಾತ್ರಿಯೇ ಪ್ರೇಕ್ಷಕರು ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಆ ಮೂಲಕ ದೊಡ್ಡ ಓಪನಿಂಗ್​ ನೀಡಿದ್ದಾರೆ. ಯಶ್​ (Yash) ವೃತ್ತಿಜೀವನಕ್ಕೆ ಮತ್ತೊಂದು ದೊಡ್ಡ ಗೆಲುವು ಖಚಿತ ಎನ್ನುತ್ತಿದ್ದಾರೆ ಪ್ರೇಕ್ಷಕರು. ಹಾಗಾದರೆ ಈ ಸಿನಿಮಾ ಹೇಗೆ ಮೂಡಿಬಂದಿದೆ? ‘ಕೆಜಿಎಫ್​: ಚಾಪ್ಟರ್​​ 2’ ಚಿತ್ರಕ್ಕೆ ಟ್ವಿಟರ್​ನಲ್ಲಿ ಯಾವ ರೀತಿ ವಿಮರ್ಶೆ (KGF Chapter 2 Twitter Review) ಸಿಗುತ್ತಿದೆ? ಮಧ್ಯರಾತ್ರಿ ಸಿನಿಮಾ ನೋಡಿ ಹೊರಬಂದವರು ನಿರ್ದೇಶಕ ಪ್ರಶಾಂತ್​ ನೀಲ್​ ಬಗ್ಗೆ ಏನು ಹೇಳ್ತಾ ಇದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ಕನ್ನಡ ಚಿತ್ರರಂಗವನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ದಿದೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ. ವಿಶ್ವಾದ್ಯಂತ 10 ಸಾವಿರಕ್ಕೂ ಅಧಿಕ ಪರದೆಯಲ್ಲಿ ಈ ಚಿತ್ರವನ್ನು ತೆರೆಕಾಣಿಸಲಾಗಿದೆ. ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಫಸ್ಟ್​ ಶೋ ನೋಡಿ ಬಂದಿರುವ ಅಭಿಮಾನಿಗಳು ಈ ಸಿನಿಮಾಗೆ ಉಘೇ ಉಘೇ ಎನ್ನುತ್ತಿದ್ದಾರೆ. ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

‘ಇದು ಅತ್ಯುತ್ತಮ ಸಿನಿಮಾ. ಇಂಟರ್​ವಲ್​ ತನಕ ರಾಕಿ ಭಾಯ್​ ಮತ್ತು ಸಂಜಯ್​ ದತ್​ ಎಲ್ಲರ ಹೃದಯ ಗೆಲ್ಲುತ್ತಾರೆ. 5ಕ್ಕೆ 5 ಸ್ಟಾರ್​ ನೀಡುತ್ತೇನೆ. ಇದು ನನ್ನ ಪ್ರಾಮಾಣಿಕ ವಿಮರ್ಶೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಅನೇಕ ಪ್ರೇಕ್ಷಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಕೆಲವು ಸಿನಿಮಾಗಳಲ್ಲಿ ತಾಯಿ ಸೆಂಟಿಮೆಂಟ್​ ದೃಶ್ಯಗಳು ಬೋರಿಂಗ್​ ಎನಿಸುತ್ತವೆ. ಆದರೆ ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ತುಂಬ ಪರಿಣಾಮಕಾರಿಯಾಗಿ ಮೂಡಿಬಂದಿವೆ. ಇಂಟರ್​ವಲ್​ ದೃಶ್ಯ ಸಖತ್​ ರಾ ಆಗಿದೆ’ ಎಂದು ನೆಟ್ಟಿಗರೊಬ್ಬರು ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎಲ್ಲ ದೃಶ್ಯಗಳನ್ನೂ ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಯಶ್​ ಎನರ್ಜಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಕ್ಲೈಮ್ಯಾಕ್ಸ್​ ಕಂಡು ಜನರು ವಾವ್​ ಎನ್ನುತ್ತಿದ್ದಾರೆ. ಹಿನ್ನೆಲೆ ಸಂಗೀತವೂ ಪ್ರೇಕ್ಷಕರನ್ನು ಆಕರ್ಷಿಸಿದೆ. ಪ್ರಶಾಂತ್​ ನೀಲ್​ ಅವರ ಕೆಲಸಕ್ಕೆ ನೋಡುಗರಿಂದ ಮೆಚ್ಚುಗೆ ಸಿಕ್ಕಿದೆ. ಕೆಲವು ದೃಶ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬಹುದಿತ್ತು ಎಂಬ ಅಭಿಪ್ರಾಯ ಕೂಡ ಕೇಳಿಬಂದಿದೆ.

ಒಟ್ಟಿನಲ್ಲಿ ಈ ಸಿನಿಮಾ ಭರ್ಜರಿ ಓಪನಿಂಗ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಎಲ್ಲ ಭಾಷೆಯಲ್ಲೂ ಜನರು ಈ ಚಿತ್ರಕ್ಕೆ ಉತ್ತಮ ವಿಮರ್ಶೆಗಳನ್ನು ನೀಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಆ ಮೂಲಕ ಕನ್ನಡದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಕಮಾಲ್​ ಮಾಡುತ್ತಿದೆ.

ಇದನ್ನೂ ಓದಿ:

KGF Chapter 2 First Half Review: ಹೇಗಿದೆ ‘ಕೆಜಿಎಫ್​ ಚಾಪ್ಟರ್​ 2’ ಮೊದಲಾರ್ಧ​? ಅಬ್ಬರಿಸಿದ ಯಶ್

ಪುಣೆಯಲ್ಲಿ ‘ಕೆಜಿಎಫ್​ 2’ ಟಿಕೆಟ್​ ಸಿಗದೇ ವಿಮಾನ ಹತ್ತಿ ಬೆಂಗಳೂರಿಗೆ ಬಂದ ಲೇಡಿ ಫ್ಯಾನ್ಸ್​​: ಆಹಾ ಅಭಿಮಾನ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ